• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಟಗರು ಪಲ್ಯ ಸಿನಿಮಾದ ಎರಡನೇ ಹಾಡು ರಿಲೀಸ್, ಸಿನಿ ರಸಿಕರಲ್ಲಿ ಹೆಚ್ಚಾಯಿತು ನಿರೀಕ್ಷೆ

ಪ್ರತಿಧ್ವನಿ by ಪ್ರತಿಧ್ವನಿ
September 15, 2023
in ಸಿನಿಮಾ
0
ಟಗರು ಪಲ್ಯ ಸಿನಿಮಾದ ಎರಡನೇ ಹಾಡು ರಿಲೀಸ್,  ಸಿನಿ ರಸಿಕರಲ್ಲಿ ಹೆಚ್ಚಾಯಿತು ನಿರೀಕ್ಷೆ
Share on WhatsAppShare on FacebookShare on Telegram

ನಟರಾಕ್ಷಸ ಡಾಲಿ ಧನಂಜಯ್ ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ ‘ಟಗರು ಪಲ್ಯ’. ಸೆಟ್ಟೇರಿದ ದಿನದಿಂದಲೂ ಭಾರೀ ಸದ್ದು ಮಾಡುತ್ತಿರುವ ಟಗರು ಪಲ್ಯ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.

ADVERTISEMENT

ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಚಿತ್ರತಂಡ ಸೂರ್ಯಕಾಂತಿ ನಾನು ಎಂಬ ಮೆಲೋಡಿ ಹಾಡನ್ನು ಅನಾವರಣ ಮಾಡಿದೆ. ಸ್ವತಃ ಧನಂಜಯ್ ಅವರೇ ಕ್ಯಾಚಿ‌ ಮ್ಯಾಚಿ ಪದಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಮಾಧುರಿ ಶೇಷಾದ್ರಿ ಕಂಠ ಕುಣಿಸಿದ್ದು, ವಾಸುಕಿ ವೈಭವ್ ಟ್ಯೂನ್ ಹಾಕಿದ್ದಾರೆ. ಹಳ್ಳಿ ಸೊಗಡಿನ ಕಂಪು ಹೊಂದಿರುವ ಈ ಮೆಲೋಡಿ ಹಾಡಿಗೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಹೆಜ್ಜೆ ಹಾಕಿದ್ದಾರೆ.

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ‘ಟಗರು ಪಲ್ಯ’ ಚಿತ್ರಕ್ಕೆ ಉಮೇಶ್ ಕೆ ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಅನೇಕ ಹೊಸಬರಿಗೆ ಅವಕಾಶ ಸಿಕ್ಕಿದೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ವಿಭಿನ್ನ ಪಾತ್ರಗಳನ್ನ ಆಯ್ಕೆ ಮಾಡಿಕೊಂಡು, ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸುತ್ತಿರುವ ನಾಗಭೂಷಣ್ ಟಗರು ಪಲ್ಯದ ನಾಯಕ.

‘ಟಗರು ಪಲ್ಯ’ ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ಕೂತೂಹಲ ದುಪ್ಪಟ್ಟಾಗಿದೆ. ಹಿರಿಯ ಕಲಾವಿದರಾದ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್ ಚಿತ್ರಕ್ಕೆ ಸಾಥ್ ಕೊಟ್ಟಿದೆ. ಹಾಗೇ ವಾಸುಕಿ ವೈಭವ್ ಸಂಗೀತವಿದೆ ಇನ್ನು ಎಸ್.ಕೆ.ರಾವ್ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಪ್ರಚಾರ ಕಾರ್ಯ ಆರಂಭಿಸಿರುವ ಟಗರು ಪಲ್ಯ ತಂಡ ಇದೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್ ಮಾಡಲು ಸಕಲ ಸಿದ್ಧತೆ ನಡೆಸುತ್ತಿದೆ.

Tags: dolly dhananjaykannada new movieKFIsandalwood
Previous Post

ಎಂಜಿನಿಯರ್ ಗಳಿಗೆ ಸರ್. ಎಂ.ವಿಶ್ವೇಶ್ವರಯ್ಯ ಅವರಿಗಿದ್ದ ದೂರ ದರ್ಶಿತ್ವ ಇರಬೇಕು: ಸಿಎಂ ಸಿದ್ದರಾಮಯ್ಯ

Next Post

ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ ಆರೋಪ..!

Related Posts

CJP ಬೆಂಬಲಕ್ಕೆ ಬಂದ ನಟಿ ಜ್ಯೋತಿಕಾ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
Top Story

CJP ಬೆಂಬಲಕ್ಕೆ ಬಂದ ನಟಿ ಜ್ಯೋತಿಕಾ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

by ಪ್ರತಿಧ್ವನಿ
July 25, 2026
0

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಖ್ಯಾತ ತಮಿಳು ನಟಿ ಜ್ಯೋತಿಕಾ ಒತ್ತಾಯಿಸಿದ್ದಾರೆ. ಈ...

Read moreDetails
ಆ ಸೀತೆ ಈ ಸೀತೆಗೆ ಬೆಂಬಲ! ಸಾಯಿಪಲ್ಲವಿಗೆ ದೀಪಿಕಾ ಚಿಖಾಲಿಯಾ ಗುಡ್‌ ಮಾರ್ಕ್ಸ್

ಆ ಸೀತೆ ಈ ಸೀತೆಗೆ ಬೆಂಬಲ! ಸಾಯಿಪಲ್ಲವಿಗೆ ದೀಪಿಕಾ ಚಿಖಾಲಿಯಾ ಗುಡ್‌ ಮಾರ್ಕ್ಸ್

July 24, 2026
ನಟ ಧ್ರುವ್​ ವಿಕ್ರಮ್​ಗೆ ಚಪ್ಪಲಿಯಲ್ಲಿ ಹೊಡೆದ್ರಾ ನಟಿ ಅನುಪಮಾ ಪರಮೇಶ್ವರನ್​?

ನಟ ಧ್ರುವ್​ ವಿಕ್ರಮ್​ಗೆ ಚಪ್ಪಲಿಯಲ್ಲಿ ಹೊಡೆದ್ರಾ ನಟಿ ಅನುಪಮಾ ಪರಮೇಶ್ವರನ್​?

July 23, 2026
ನಿಮ್ಮ ಹೋರಾಟ ಸರಿಯಾಗಿಯೇ ಇದೆ, ಈ ಶ್ರೇಯಸ್ಸು ನಿಮಗೆ ಸಲ್ಲಬೇಕು : ವಿದ್ಯಾರ್ಥಿಗಳ ಬೆನ್ನಿಗೆ ನಿಂತ ಸಲ್ಮಾನ್‌ ಖಾನ್..

ನಿಮ್ಮ ಹೋರಾಟ ಸರಿಯಾಗಿಯೇ ಇದೆ, ಈ ಶ್ರೇಯಸ್ಸು ನಿಮಗೆ ಸಲ್ಲಬೇಕು : ವಿದ್ಯಾರ್ಥಿಗಳ ಬೆನ್ನಿಗೆ ನಿಂತ ಸಲ್ಮಾನ್‌ ಖಾನ್..

July 23, 2026
ಕ್ಯಾಲಿಫೋರ್ನಿಯಾದಲ್ಲಿ ರಾಮಾಯಣ ಗ್ಲಿಂಪ್ಸ್!‌ ಇದು ಭಾರತ ಪರ ಕಾಮಿಕ್ ಕಾನ್‌ನಲ್ಲಿ ನಡೆಯುವ ದೊಡ್ಡ ಪ್ರೆಸೆಂಟೇಷನ್

ಕ್ಯಾಲಿಫೋರ್ನಿಯಾದಲ್ಲಿ ರಾಮಾಯಣ ಗ್ಲಿಂಪ್ಸ್!‌ ಇದು ಭಾರತ ಪರ ಕಾಮಿಕ್ ಕಾನ್‌ನಲ್ಲಿ ನಡೆಯುವ ದೊಡ್ಡ ಪ್ರೆಸೆಂಟೇಷನ್

July 22, 2026
Next Post
ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ ಆರೋಪ..!

ಪುತ್ತೂರು ಶಾಸಕ ಕಚೇರಿಗೆ ನಗರಸಭೆ ನಿಧಿಯ ದುರುಪಯೋಗ ಆರೋಪ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!