• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಹಿಂದುಳಿದ ವರ್ಗಗಳ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ- ಛಲವಾದಿ ನಾರಾಯಣಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
September 23, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ; ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ.

ADVERTISEMENT


ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್ ನೀಡಿರುವುದನ್ನು ರದ್ದು ಮಾಡಬೇಕೆಂದು ಬಿಜೆಪಿ ನಿಯೋಗ ಒತ್ತಾಯಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಿನ್ನೆ ಪ್ರಾರಂಭವಾಗಿದೆ. ಈ ಸಮೀಕ್ಷೆ ಒಂದು ಗೊಂದಲದ ಗೂಡು ಎಂದು ಟೀಕಿಸಿದರು. ಇದು ಹಿಂದುತ್ವ ವಿರೋಧ ನೀತಿ ಎಂದು ಆರೋಪಿಸಿದರು. ಗೊಂದಲ ಪರಿಹರಿಸಲು ಕೋರಿ ಅಧ್ಯಕ್ಷರನ್ನು ಭೇಟಿ ಮಾಡಿ ಮನವಿ ಕೊಟ್ಟಿದ್ದೇವೆ. ಬ್ರಾಹ್ಮಣ ಕ್ರೈಸ್ತರು, ಲಿಂಗಾಯತ ಕ್ರೈಸ್ತರು, ಒಕ್ಕಲಿಗ, ವೀರಶೈವ ಮೊದಲಾದ ಎಲ್ಲರನ್ನೂ ಕ್ರೈಸ್ತ ಎಂದು ಹೆಸರಿಸಿದ್ದಾರೆ. ಹೊಲೆಯ, ಮಾದಿಗ, ಬಂಜಾರ ಕ್ರೈಸ್ತ, ಬೋವಿ ಕ್ರೈಸ್ತ ಎಲ್ಲವನ್ನೂ ಸೇರಿಸಿದ್ದರು ಎಂದು ಆಕ್ಷೇಪಿಸಿದರು.


ಹೋರಾಟಗಳು ನಡೆದು ಪ್ರಭಾವಿ ಸಮುದಾಯಗಳು ಹೋರಾಟಕ್ಕೆ ಇಳಿದಾಗ ಅವುಗಳನ್ನು ಕಾಣದಂತೆ (ಹೈಡ್) ಮಾಡಿದ್ದಾಗಿ ಹೇಳಿದ್ದರು. ಆದರೆ, ಪರಿಶಿಷ್ಟ ಜಾತಿ, ವರ್ಗಗಳದು ಹೈಡ್ ಮಾಡಿಲ್ಲ. ಇದರಿಂದ ಗೊಂದಲವಾಗಿದೆ ಎಂದರು. ಎಲ್ಲ ಜಾತಿಗಳನ್ನು ಸಂಪೂರ್ಣ ಕೈಬಿಟ್ಟಿಲ್ಲ ಎಂದು ದೂರಿದರು. ಸುತ್ತಿ ಬಳಸಿ ಮಾತನಾಡುತ್ತಿದ್ದಾರೆ. ಕ್ರೈಸ್ತರಾಗಿ ಮತಾಂತರ ಹೊಂದಿದವರ ಮೂಲಜಾತಿ ಹಾಗೇ ಉಳಿಯುತ್ತದೆ ಎಂದು ಹೇಳಿದ್ದಾರೆ. ಅದ್ಹೇಗೆ ಉಳಿಯಲು ಸಾಧ್ಯ ಎಂದು ಕೇಳಿದರು. ಮೂಲಜಾತಿಯಲ್ಲೇ ಮೀಸಲಾತಿ ಕೊಡಬೇಕೇ ಎಂದು ತೀರ್ಮಾನ ಮಾಡುತ್ತಾರಂತೆ. ಕೋರ್ಟ್ ತೀರ್ಮಾನ ಮಾಡಿದೆ, ತೀರ್ಮಾನ ಮಾಡಲು ಇವರ್ಯಾರು ಎಂದು ಕೇಳಿದರು. ದಲಿತರು ಕ್ರೈಸ್ತರಾಗಿ ಸೇರಿದರೆ ಅವರನ್ನು ದಲಿತರೆಂದು ಪರಿಗಣಿಸಲಾಗುವುದಿಲ್ಲ; ಇಲ್ಲಿ ಗೊಂದಲವಿದೆ ಎಂದು ಟೀಕಿಸಿದರು.


ಮತಾಂತರ ಆದವರ ಜಾತಿ ನೋಡದಿರಿ. ಇದೇರೀತಿ ಮುಂದುವರೆಸಿ ಕೇರಿಗಳಲ್ಲಿ ಬರುವುದಾದರೆ, ನೀವು ಒಂದೇ ಒಂದು ಬರಹ ಬರೆದುಕೊಳ್ಳಲು ಸಾಧ್ಯವಿಲ್ಲ. ಅಲ್ಲ ನಮ್ಮ ಜನ ಬಿಡುವುದಿಲ್ಲ ಎಂದು ತಿಳಿಸಿದರು. ಸದಾಶಿವ ಆಯೋಗ, ನಾಗಮೋಹನ್ ದಾಸ್ ಆಯೋಗ, ಕಾಂತರಾಜು ಆಯೋಗ, ಜಯಪ್ರಕಾಶ್ ಹೆಗ್ಡೆ ಆಯೋಗದಲ್ಲಿ ಪರಿಶಿಷ್ಟ ಜಾತಿಗೆ ಕ್ರಿಶ್ಚಿಯನ್ ಪದ ಇರಲಿಲ್ಲ ಎಂದು ವಿವರಿಸಿದರು. ಈಗ ಎಲ್ಲಿಂದ ಯಾಕೆ ಹುಟ್ಟಿದೆ? ಇವತ್ತು ಸಂಜೆಯೇ ಸಭೆ ಕರೆದು ತೀರ್ಮಾನ ಮಾಡುವುದಾಗಿ ಅಧ್ಯಕ್ಷರು ತಿಳಿಸಿದ್ದಾಗಿ ವಿವರಿಸಿದರು. ಇವತ್ತೇ ತೀರ್ಮಾನ ಆಗದಿದ್ದರೆ ಮುಂದೆ ಆಗುವ ಅನಾಹುತಕ್ಕೆ ಆಯೋಗವೇ ಹೊಣೆ ಎಂದು ಹೇಳಿದರು. ಮಾತನಾಡುವಾಗ ವಾದವಿವಾದವೂ ಆಗಿದೆ. ಜನರಲ್ಲಿ ನೋವಿದೆ. ಕ್ರಿಶ್ಚಿಯನ್ ಧರ್ಮ ಸೇರ್ಪಡೆಗೆ ವಿರೋಧ ಇಲ್ಲ; ಆಯೋಗವು ದಲ್ಲಾಳಿ ಕೆಲಸ ಮಾಡುತ್ತಿದ್ದಾರಾ ಎಂದು ಪ್ರಶ್ನಿಸಿದರು.

ನಿಯೋಗದಲ್ಲಿ ಯಾರಿದ್ದರು?
ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಶಾಸಕ ವಿ. ಸುನೀಲ್ ಕುಮಾರ್, ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ಸಂಸದ ಎಸ್. ಮುನಿಸ್ವಾಮಿ, ಮಾಜಿ ಶಾಸಕ ವೈ. ಸಂಪಂಗಿ, ವಿಧಾನಪರಿಷತ್ ಮಾಜಿ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ್, ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡ ಅನಿಲ್ ಕುಮಾರ್, ಬಿಜೆಪಿ ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಬಿಜೆಪಿ ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ, ಸಹ ಸಂಚಾಲಕ ಪ್ರಶಾಂತ್ ಕೆಡಂಜಿ, ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಹೂಡಿ ಮಂಜುನಾಥ್ ಮತ್ತು ಎಸ್.ಸಿ ಮೋರ್ಚಾ ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಅವರ ನಿಯೋಗ ಇಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರನ್ನು ಭೇಟಿ ಮಾಡಿ ಈ ಸಂಬಂಧ ಮನವಿ ಸಲ್ಲಿಸಿತು.

ಮನವಿಯಲ್ಲಿ ಏನಿದೆ?
ಸಮೀಕ್ಷೆ ವಿಷಯದ ಸಂಬಂಧ ಕಳೆದ ಆಗಸ್ಟ್ 23 ರಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗ 4 ಪುಟಗಳ ಜಾಹಿರಾತನ್ನು ಪ್ರಜಾವಾಣಿ ಮತ್ತು ವಿಜಯವಾಣಿ ಪತ್ರಿಕೆಗಳಿಗೆ ಕೊಟ್ಟು ಸಮೀಕ್ಷೆಗೆ ಸಿದ್ಧಪಡಿಸಿರುವ 1,400 ಜಾತಿಗಳ ಪಟ್ಟಿ ಘೋಷಿಸಿತು. ಆ ಪಟ್ಟಿಯಲ್ಲಿ 48 ಹಿಂದು ಜಾತಿಗಳನ್ನು ಕ್ರಿಶ್ಚಿಯನ್ ಎಂದು ಗುರುತಿಸಲಾಗಿತ್ತು. ಈ 48 ಜಾತಿಗಳಲ್ಲಿ 15 ಎಸ್ಸಿ ಜಾತಿಗಳು ಮತ್ತು 1 ಎಸ್‍ಟಿ (ವಾಲ್ಮೀಕಿ ಕ್ರಿಶ್ಚಿಯನ್) ಜಾತಿಗಳಿದ್ದವು. ರಾಜ್ಯಾದ್ಯಂತ ತೀವ್ರ ಸ್ವರೂಪ ಪ್ರತಿಕ್ರಿಯೆ ವ್ಯಕ್ತವಾಯಿತು. ಸೆ. 2 ರಂದು ನಿಮ್ಮನ್ನು ಭೇಟಿ ಮಾಡಿದ್ದ ಬಿಜೆಪಿ ನಿಯೋಗ ವಿಸ್ತøತವಾಗಿ ಚರ್ಚಿಸಿ ಆಕ್ಷೇಪಣೆ ಸಲ್ಲಿಸಿತ್ತು. ಇದೇ ಸೆ.21 ರಂದು ಆಯೋಗದ ಅಧ್ಯಕ್ಷರಾದ ತಾವು ಪತ್ರಿಕಾಗೋಷ್ಠಿಯಲ್ಲಿ 33 ಹಿಂದು ಜಾತಿಗಳನ್ನು ಕ್ರೈಸ್ತ ಪಟ್ಟಿಯಿಂದ ಸಮೀಕ್ಷೆಗೆ ಬಳಸುವ ಆಪ್‍ನಲ್ಲಿ ಕಾಣದಂತೆ ಮಾಡಿರುವುದಾಗಿ ಹೇಳಿದ್ದೀರಿ. ಅತ್ಯಂತ ಸೂಕ್ತವಾದ ಈ ಕ್ರಮವನ್ನು ತೆಗೆದುಕೊಂಡು ಮಾಧ್ಯಮಗಳ ಮೂಲಕ ಕರ್ನಾಟಕದ ಸಮಸ್ತ ಜನತೆಗೆ ಮನವರಿಕೆ ಕೊಟ್ಟಿದ್ದಕ್ಕೆ ತಮಗೆ ಅಭಿನಂದನೆಗಳು ಎಂದು ಮನವಿ ತಿಳಿಸಿದೆ.


48 ಜಾತಿಗಳ ಬಗ್ಗೆ ಆಕ್ಷೇಪ ಇತ್ತು. 33 ಜಾತಿಗಳ ಬಗ್ಗೆ ನೀವು ಸರಿಪಡಿಸಿ ಸ್ಪಷ್ಟನೆ ಕೊಟ್ಟಿದ್ದೀರಿ. ಅಧಿಕೃತವಾಗಿ ತೆಗೆಯದೇ ಉಳಿದಿರುವ ಜಾತಿಗಳೆಲ್ಲವೂ ಪರಿಶಿಷ್ಟ ಜಾತಿಗಳೇ ಆಗಿರುವುದು ಆತಂಕದ ಬೆಳವಣಿಗೆಯಾಗಿದೆ ಎಂದು ನಿಯೋಗ ತಿಳಿಸಿದೆ. ಆದಿ ಆಂಧ್ರ ಕ್ರಿಶಿಯನ್, ಆದಿ ಕರ್ನಾಟಕ ಕ್ರಿಶ್ಚಿಯನ್, ಆದಿದ್ರಾವಿಡ ಕ್ರಿಶ್ಚಿಯನ್, ಬಂಜಾರ ಕ್ರಿಶ್ಚಿಯನ್, ಬುಡುಗ ಜಂಗಮ ಕ್ರಿಶ್ಚಿಯನ್, ಹೊಲೆಯ ಕ್ರಿಶ್ಚಿಯನ್, ಲಮಾಣಿ ಕ್ರಿಶ್ಚಿಯನ್, ಲಂಬಾಣಿ ಕ್ರಿಶ್ಚಿಯನ್, ಮಾದಿಗ ಕ್ರಿಶ್ಚಿಯನ್, ಮಹಾರ್ ಕ್ರಿಶ್ಚಿಯನ್, ಮಾಲಾ ಕ್ರಿಶ್ಚಿಯನ್, ಪರಯ ಕ್ರಿಶ್ಚಿಯನ್, ವಡ್ಡ ಕ್ರಿಶ್ಚಿಯನ್, ವಾಲ್ಮೀಕಿ ಕ್ರಿಶ್ಚಿಯನ್ ಈ ಜಾತಿಗಳ ಕ್ರಿಶ್ಚಿಯನ್ ಟ್ಯಾಗ್ ಅನ್ನು ಸಮೀಕ್ಷೆನಲ್ಲಿ ಕಾಣಿಸದಂತೆ ಹೈಡ್ ಮಾಡಿದ ಅಧಿಕೃತ ಪ್ರಕಟಣೆಯನ್ನು ಅಯೋಗ ಕೊಡಬೇಕು ಎಂಬುದು ನಮ್ಮ ಆಗ್ರಹವಾಗಿದೆ ಎಂದು ಮನವಿ ತಿಳಿಸಿದೆ. ಈ ವಿಷಯದಲ್ಲಿ ಅತ್ಯಂತ ಜವಾಬ್ದಾರಿಯುತ ಸಂಸ್ಥೆಯಾದ ಹಿಂದುಳಿದ ವರ್ಗಗಳ ಆಯೋಗ 33 ಕ್ರೈಸ್ತ ಜಾತಿಗಳ ಬಗ್ಗೆ ಸ್ಪಷ್ಟನೆ ಕೊಟ್ಟು, ಉಳಿದ ದಲಿತ ಕ್ರೈಸ್ತ ಜಾತಿಗಳ ಬಗ್ಗೆ ಸ್ಪಷ್ಟನೆ ಕೊಡದೆ, ಕತ್ತಲಲ್ಲಿ ಇಟ್ಟಿರುವುದು ಸಮರ್ಥನೀಯವಲ್ಲ ಎಂದು ಮನವಿ ತಿಳಿಸಿದೆ.


ಎರಡು ತಿಂಗಳ ಹಿಂದೆಯμÉ್ಟ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ 101 ಪರಿಶಿಷ್ಟ ಜಾತಿಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನೇ ಮಾಡಿತ್ತು. ಆಗ ಈ 15 ಕ್ರೈಸ್ತ ಎಸ್‍ಸಿ ಜಾತಿಗಳು ಇರಲಿಲ್ಲ. ನ್ಯಾ ನಾಗಮೋಹನ್ ದಾಸ್ ಆಯೋಗದ ಸಮೀಕ್ಷೆಯ ದತ್ತಾಂಶಗಳ ಆಧಾರದಲ್ಲಿ ಪ್ರವರ್ಗಗಳ ರಚನೆಯಾಗಿ ಮೀಸಲಾತಿಯ ವರ್ಗೀಕರಣವಾಗಿದೆ. ಈಗ ನಿಮ್ಮ ಆಯೋಗದಿಂದ 15 ಹೊಸ ಕ್ರೈಸ್ತ ಎಸ್‍ಸಿ ಜಾತಿಗಳ ಸೇರ್ಪಡೆಯಾಗಿ ಸಮೀಕ್ಷೆ ನಡೆದರೆ ದೊಡ್ಡ ಗೊಂದಲ ಉಂಟಾಗಿ ದತ್ತಾಂಶಗಳು ಏರುಪೇರಾಗುತ್ತದೆ. ಹೀಗಾಗಿ ನೀವು ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕೆಂದು ನಮ್ಮ ಮನವಿಯಾಗಿದೆ. ಆನ್‍ಲೈನ್‍ನಲ್ಲಿ ಲಭ್ಯವಿರುವ ತಮ್ಮ ಆಯೋಗದ ಕೈಪಿಡಿಯಲ್ಲಿ ತಾವು ಈ ತಪ್ಪನ್ನು ಸರಿಪಡಿಸಿರುವುದು ನಿಜ. ಆದರೆ ಸಮೀಕ್ಷೆಗೆ ಬಳಸುವ ಆಪ್‍ನಲ್ಲೂ ಈ 15 ಎಸ್‍ಸಿ ಜಾತಿಗಳನ್ನು ಕಾಣದಂತೆ ಮಾಡಬೇಕು ಮತ್ತು ಅದನ್ನು ಸಾರ್ವಜನಿಕರ ಅವಗಾಹನೆಗೆ ಮಾಧ್ಯಮಗಳ ಮೂಲಕ ಸ್ಪಷ್ಟಪಡಿಸಬೇಕು ಎಂಬುದು ನಮ್ಮ ಆಗ್ರಹವಾಗಿದೆ. ಈ ಬಗ್ಗೆ ಆಯೋಗದ ಗೌರವಾನ್ವಿತ ಆಧ್ಯಕ್ಷರಾದ ತಾವು ತುರ್ತು ಗಮನ ಹರಿಸಬೇಕೆಂದು ವಿನಂತಿಸಲಾಯಿತು.

Tags: bjp mlc chalavadi narayanaswamychalavadi narayanaswamichalavadi narayanaswami slams congressChalavadi Narayanaswamychalavadi narayanaswamy bjpchalavadi narayanaswamy latestchalavadi narayanaswamy livechalavadi narayanaswamy mlcchalavadi narayanaswamy newschalavadi narayanaswamy speechchalavadi narayanaswamy todaychaluvadi narayana swamychaluvadi narayana swamy mlachaluvadi narayana swamy newschaluvadi narayanaswamymlc chalavadi narayanaswamy
Previous Post

ಬಿಜೆಪಿ ನಾಯಕನಿಗೆ ಸವಾಲ್‌ ಹಾಕಿದ ಕೈ MLA ನಂಜೇಗೌಡ..!

Next Post

ಕುಮಾರಸ್ವಾಮಿಗೆ ಮೋಸ ಮಾಡಿಲ್ವಾ ನೀನು…

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

September 30, 2025
Next Post

ಕುಮಾರಸ್ವಾಮಿಗೆ ಮೋಸ ಮಾಡಿಲ್ವಾ ನೀನು...

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada