• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

*ಮಠಾಧೀಶರು ನೀಡಿದ ಆತ್ಮಸ್ಥೈರ್ಯ ಮರೆಯಲು ಸಾಧ್ಯವಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್* * *ಶಿವಗಂಗಾ ಕ್ಷೇತ್ರದ ಹೊನ್ನಮ್ಮದೇವಿ ದಶಮಾನೋತ್ಸವದಲ್ಲಿ ಭಾಗಿ*

ಪ್ರತಿಧ್ವನಿ by ಪ್ರತಿಧ್ವನಿ
April 15, 2025
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ನೆಲಮಂಗಲ: ಧರ್ಮಾದಾರಿತ ರಾಜಕಾರಣದಲ್ಲಿ ಬೆಳೆದು ಬಂದಿದ್ದು, ನಾಡಿನ ಮಠಾಧೀಶರ ಚಿಂತನೆಗಳನ್ನು, ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ADVERTISEMENT

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗಾ ಕ್ಷೇತ್ರದ ಶ್ರೀ ಸದ್ಧರ್ಮ ಸಿಂಹಾಸನ ಸಂಸ್ಥಾನ ಹೊನ್ನಮ್ಮದೇವಿ ಗವಿಮಠದಲ್ಲಿ ಮಂಗಳವಾರ ನಡೆದ ಹೊನ್ನಮ್ಮದೇವಿ ದೇವಾಲಯದ ದಶಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಧರ್ಮ, ಸಂಸ್ಕೃತಿ, ಮಠ ಮಾನ್ಯಗಳ ಚಿಂತನೆಗಳಿಗೆ ಒಳಗಾಗಿದ್ದೇನೆ ಎಂದರು.

ಸರ್ಕಾರಕ್ಕೆ ದಿಕ್ಸೂಚಿ ಕೊಟ್ಟಿದ್ದು ನಾಡಿನ ಮಠ ಮಾನ್ಯಗಳು, ಸರ್ಕಾರಕ್ಕೆ ಅಕ್ಷರ ದಾಸೋಹ, ಅನ್ನದಾಸೋಹ ಪರಿಕಲ್ಪನೆ ನೀಡಿದ್ದು ನಾಡಿನ ಮಠಗಳು. ಈ ಕಾರ್ಯಗಳಿಂದ ಸರ್ಕಾರ ಪ್ರೇರಣೆಗೊಂಡು‌ ತ್ರಿವಿಧ ದಾಸೋಹವನ್ನು ನಡೆಸಿಕೊಂಡು ಬರುತ್ತಿದೆ ಎಂದು ಸಚಿವರು ಹೇಳಿದರು.

ನಮಗೆ ಜಾತಿ ಧರ್ಮ ಗೊತ್ತಿಲ್ಲ. ನಮಗೆ ಗೊತ್ತಿರುವುದು ಎರಡೇ ಜಾತಿ, ಒಂದು ಹೆಣ್ಣು ಮತ್ತೊಂದು ಗಂಡು ಜಾತಿ. 12ನೇ ಶತಮಾನದಲ್ಲೆ ಬಸವಣ್ಣನವರು ಮಹಿಳಾ‌ ಸ್ವಾತಂತ್ರ್ಯದ ಬಗ್ಗೆ ಪ್ರತಿಪಾದಿಸಿದ್ದರು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

  • ಸ್ವಾಮೀಜಿಗಳ ಆಶೀರ್ವಾದ ಅವಿಸ್ಮರಣೀಯ
    ನಾನು ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಾಡಿನ ಮೂಲೆ ಮೂಲೆಗಳಿಂದ ಮಠಾಧೀಶರು ಆಸ್ಪತ್ರೆಗೆ ಬಂದು ಆಶೀರ್ವದಿಸಿದರು. ಇದನ್ನು ನಾನೆಂದು ಮರೆಯುವುದಿಲ್ಲ. ನಾನೇನು ಅಂಥಹ ಸಾಧನೆ ಮಾಡಿದವಳಲ್ಲ, ಸಂಘರ್ಷದ ಹಾದಿಯಲ್ಲಿ ಬೆಳೆದು ಬಂದವಳು ನಾನು, ನನಗೆ ಮಠಾಧೀಶರು ನೀಡಿದ ಆತ್ಮ ಸ್ಥೈರ್ಯ ಮರೆಯುವಂತಿಲ್ಲ ಎಂದು ಸಚಿವರು ಸ್ಮರಿಸಿದರು.

7 ಕೋಟಿ ಜನಸಂಖ್ಯೆಯ ಕರ್ನಾಟಕದ ಸರ್ಕಾರದಲ್ಲಿ ಏಕೈಕ ಮಹಿಳಾ ಸಚಿವೆಯಾಗಿರುವೆ. 35 ಲಕ್ಷ ಮಕ್ಕಳು, ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಮಹಿಳೆಯರು, ವಿಕಲ ಚೇತನರು, ಹಿರಿಯ ನಾಗರಿಕರು, ನನ್ನ ಇಲಾಖೆ ವ್ಯಾಪ್ತಿಯಲ್ಲಿದ್ದಾರೆ‌. ಅವರ ಮೊಗದಲ್ಲಿ ನಗು ತರುವ ನಿಟ್ಟಿನಲ್ಲಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ. ಅದರಲ್ಲೂ 1.23 ಕೋಟಿ ಮಹಿಳೆಯರಿಗೆ ಗೃಹ ಲಕ್ಷ್ಮಿ ಯೋಜನೆಯ ಸಂಪರ್ಕವಾಗಿ ತಲುಪಿಸಲಾಗುತ್ತಿದೆ ಎಂದರು.

ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಸಮಾರಂಭದ ದಿವ್ಯ ಸಾನಿಧ್ಯ‌ ವಹಿಸಿದರೆ, ಹೊನ್ನಮ್ಮ ದೇವಿ ಗವಿಮಠದ ಶ್ರೀ ರುದ್ರಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಸಮಾರಂಭದ ನೇತೃತ್ವದ ವಹಿಸಿದ್ದರು. ನೆಲಮಂಗಲ ಕ್ಷೇತ್ರದ ಶಾಸಕರಾದ ಎನ್.ಶ್ರೀನಿವಾಸಯ್ಯ ಸೇರಿದಂತೆ
ವಿವಿಧ ಮಠಾಧೀಶರು ಉಪಸ್ಥಿತರಿದ್ದರು.

Tags: bangalore to shivagangect ravi on lakshmi hebbalkarshivagangeLakshmi hebbalkarlakshmi hebbalkar car accidentlakshmi hebbalkar exclusive interviewlakshmi hebbalkar healthlakshmi hebbalkar health conditionlakshmi hebbalkar husbandlakshmi hebbalkar latest interviewlakshmi hebbalkar latest newslakshmi hebbalkar newslakshmi hebbalkar news todaylakshmi hebbalkar speechlakshmi hebbalkar today newslakshmi hebbalkar todays newsmiracle happening in shivaganga templeshivagangashivaganga bettashivaganga hill trekshivaganga hillsshivaganga kshetranathashivaganga templeshivaganga temple at karnatakashivaganga truckingshivagange bettashivagange hillsshivagange kshetrashivagange shivagangashivagange templeshivagange temple entranceshivagange treksivagangasuvarna news hour special with lakshmi hebbalkarunknown facts about shivaganga temple
Previous Post

ಸ್ವಾಮೀಜಿ ಪ್ರಕಾರ ರಾಜ್ಯ ಜನಸಂಖ್ಯೆ 12 ಕೋಟಿ ದಾಟುತ್ತೆ – ರಾಜಕೀಯವಾಗಿ ಜಾತಿಗಣತಿ ಮುಖ್ಯ : ಸಂತೋಷ್ ಲಾಡ್ 

Next Post

Muda Case: ತನಿಖೆ ಮುಂದುವರಿಸಲು ಲೋಕಾಯುಕ್ತರಿಗೆ ಸೂಚನೆ ಕೊಟ್ಟ ಕೋರ್ಟ್..

Related Posts

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?
ರಾಜಕೀಯ

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

by ಪ್ರತಿಧ್ವನಿ
May 20, 2026
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ...

Read moreDetails
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

“ರಸ್ತೆ ಗುಂಡಿ ಮುಚ್ಚಿಲ್ಲ, ರೈತರ ಕಷ್ಟಕ್ಕೆ ಸ್ಪಂದಿಸಿಲ್ಲ, ಕೇವಲ ಜಾಹೀರಾತಿನಿಂದಷ್ಟೇ ಯಶಸ್ಸನ್ನು ಬಿಚ್ಚಿಡುವ ಕೆಲಸ”

May 19, 2026
Next Post

Muda Case: ತನಿಖೆ ಮುಂದುವರಿಸಲು ಲೋಕಾಯುಕ್ತರಿಗೆ ಸೂಚನೆ ಕೊಟ್ಟ ಕೋರ್ಟ್..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada