• Home
  • About Us
  • ಕರ್ನಾಟಕ
Wednesday, December 31, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶರಣರ ಗುಣವನ್ನು ಮರಣದಲ್ಲಿ ಕಾಣು ಎಂಬ ನುಡಿಗೆ ಶಾಮನೂರರು ಅನ್ವರ್ಥ: ಡಿಸಿಎಂ ಡಿ.ಕೆ. ಶಿವಕುಮಾರ್

ಶಾಮನೂರು ಶಿವಶಂಕರಪ್ಪ ಅವರಿಂದ ಶಿಕ್ಷಣ, ಧಾರ್ಮಿಕ, ವ್ಯಾಪಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ

ಪ್ರತಿಧ್ವನಿ by ಪ್ರತಿಧ್ವನಿ
December 26, 2025
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ADVERTISEMENT

ಶಾಮನೂರರು ಹೃದಯ ಶ್ರೀಮಂತಿಕೆಯ ವ್ಯಕ್ತಿ. ಅಧಿಕಾರಕ್ಕಿಂತ ಆದರ್ಶ ಬಹಳ ದೊಡ್ಡದು ಎಂದು ಬದುಕಿದವರು.

“ಶಾಮನೂರು ಶಿವಶಂಕರಪ್ಪ ಅವರು ಹೃದಯ ಶ್ರೀಮಂತಿಕೆ ವ್ಯಕ್ತಿತ್ವ ಹೊಂದಿದ್ದವರು. ಅವರು ಶಿಕ್ಷಣ, ಧಾರ್ಮಿಕ ಕ್ಷೇತ್ರ, ವ್ಯಾಪಾರ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಶ್ರೇಷ್ಠ ಸೇವೆ ಮಾಡಿದ್ದಾರೆ. ಅವರ ಆದರ್ಶಗಳು ಸದಾ ಜೀವಂತವಾಗಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾವಣಗೆರೆಯಲ್ಲಿ ಶುಕ್ರವಾರ ನಡೆದ ಶಾಮನೂರು ಶಿವಶಂಕರಪ್ಪ ಅವರ ಶಿವಗಣಾರಾಧನೆ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಇಷ್ಟು ದೊಡ್ಡ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ನನ್ನ ಭಾಗ್ಯ. ಅನೇಕ ಪರಮ ಪೂಜ್ಯ ಜಗದ್ಗುರುಗಳ ಸಂಗಮದಲ್ಲಿ ನಮ್ಮ ಎಲ್ಲಾ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಶರಣರ ಗುಣವನ್ನು ಮರಣದಲ್ಲಿ ಕಾಣಬೇಕು ಎಂದು ಹಿರಿಯರು ಹೇಳಿದ್ದಾರೆ. ಶರಣರಿಗೆ ಮರಣವೇ ಮಹಾನವಮಿ ಎಂದು ಕೇಳಿದ್ದೇವೆ. ಮನುಷ್ಯನಿಗೆ ಬದುಕು ಶಾಶ್ವತವಲ್ಲ. ಆದರೆ ಬಿಟ್ಟು ಹೋಗುವ ಕೆಲಸಗಳಷ್ಟೇ ಶಾಶ್ವತ” ಎಂದರು.

“ಯೋಗಿ ಎಂದು ಕರೆಸಿಕೊಳ್ಳುವುದಕ್ಕಿಂತ ಉಪಯೋಗಿ ಎಂದು ಕರೆಸಿಕೊಳ್ಳುವುದು ಬಹಳ ಮುಖ್ಯ. ನನ್ನ ಹಾಗೂ ಶಾಮನೂರು ಶಿವಶಂಕರಪ್ಪ ಅವರ ನಡುವಣ ಭಾಂದವ್ಯ ಬೇರೆ. ಅವರು ಎಷ್ಟು ದಿನ ಶಾಸಕರಾಗಿದ್ದರೋ ಅಷ್ಟೂ ದಿನ ಅವರೊಂದಿಗೆ ಸಹೋದ್ಯೋಗಿಯಾಗಿ ಕೆಲಸ ಮಾಡಿದ್ದೇನೆ. ಒಬ್ಬ ವ್ಯಕ್ತಿ ಹಿಂದೆ ಎಷ್ಟು ಜನ ಇದ್ದಾರೆ ಎಂಬುದಕ್ಕಿಂತ, ಎಷ್ಟು ಜನರ ಬದುಕನ್ನು ಬದಲಿಸಿದ್ದಾರೆ ಎಂಬುದು ಮುಖ್ಯ. ಅದಕ್ಕೆ ಶಾಮನೂರು ಶಿವಶಂಕರಪ್ಪ ಅವರ ಬದುಕೇ ದೊಡ್ಡ ಸಾಕ್ಷಿಗುಡ್ಡೆ. ಅವರು ನಮ್ಮನ್ನು ಅಗಲಿದ್ದರೂ ಅವರ ಆದರ್ಶಗಳು ನಮ್ಮೊಂದಿಗೆ ಜೀವಂತವಾಗಿವೆ” ಎಂದರು.

“ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಬಹಳ ಮುಖ್ಯ. 95 ವರ್ಷದವರೆಗೆ ಶಾಸಕರಾಗಿ ಸೇವೆ ಸಲ್ಲಿಸಿದ ಶಾಮನೂರು ಶಿವಶಂಕರಪ್ಪ ಅವರು ಇಡೀ ಭಾರತದಲ್ಲಿ ದಾಖಲೆ ಬರೆದಿದ್ದಾರೆ. ಕೋವಿಡ್ ಸಮಯದಲ್ಲಿ ಹತ್ತಾರು ಕೋಟಿ ಹಣ ವೆಚ್ಚ ಮಾಡಿ ಈ ಭಾಗದ ಜನರಿಗೆ ಉಚಿತ ಲಸಿಕೆ ಹಾಕಿಸಿದರು. ಅದರ ಉದ್ಘಾಟನಾ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ನೀಡಿದ್ದರು. ಸಾವಿರಾರು ಜನರ ಆರೋಗ್ಯ ಕಾಪಾಡಿದವರು ಅವರು. ದೇಶದಲ್ಲಿ ಯಾರೂ ಮಾಡದ ತೀರ್ಮಾನ, ಸೇವೆಯನ್ನು ಅವರು ಮಾಡಿದರು. ತಮ್ಮ ಮಕ್ಕಳು, ಮೊಮ್ಮಕ್ಕಳಿಗೂ ಸಹ ದಾನ, ಧರ್ಮದ ಜೊತೆಗೆ ಸರಳತೆಯನ್ನು ಕಲಿಸಿದ್ದು, ಎಲ್ಲರೂ ಇದನ್ನು ಮುಂದುವರಿಸಿಕೊಂಡು ಹೋಗುತ್ತಾರೆ ಎಂಬ ವಿಶ್ವಾಸವಿದೆ. ಅಧಿಕಾರಕ್ಕಿಂತ ಆದರ್ಶ ಬಹಳ ದೊಡ್ಡದು ಎಂದು ಅವರು ತಮ್ಮ ಜೀವನದ ಮೂಲಕ ಸಾರಿದ್ದಾರೆ” ಎಂದು ಸ್ಮರಿಸಿದರು.

“ಎಲ್ಲಾ ಜಾತಿ ಧರ್ಮದವರನ್ನು ಬಹಳ ಪ್ರೀತಿಯಿಂದ ಕಂಡಿದ್ದಾರೆ. ಅವರಿಗೆ ನುಡಿನಮನ ಸಲ್ಲಿಸಲು ರಾಜ್ಯದ ಎಲ್ಲಾ ಭಾಗಗಳಿಂದ ಎಲ್ಲಾ ಸಮುದಾಯಗಳ ಸ್ವಾಮೀಜಿಗಳು ಬಂದಿದ್ದಾರೆ. ಶಾಮನೂರು ಅವರ ಸಾಧನೆಯಲ್ಲಿ ಅವರ ಕುಟುಂಬದವರು, ಅನುಯಾಯಿಗಳು, ಸಿಬ್ಬಂದಿ ವರ್ಗದ ಕೊಡುಗೆಯೂ ಇದೆ.” ಎಂದು ತಿಳಿಸಿದರು.

Tags: DCM DK ShivakumarDK Shivakumardk shivakumar amit shah clashdk shivakumar angrydk shivakumar bewsdk shivakumar cartier watchdk shivakumar cryptic postdk shivakumar hindudk shivakumar interviewdk shivakumar latestdk shivakumar latest newsdk shivakumar meet kn rajannadk shivakumar meets kn rajannadk shivakumar newsdk shivakumar on amit shahdk shivakumar speechdk shivakumar statementdk shivakumar today newsdk shivakumar vs amit shahdk shivakumar watchdk shivkumarshamanur shivashankarappa
Previous Post

ಚಿತ್ರದುರ್ಗ ಬಸ್‌ ದುರಂತ: ಸೀಬರ್ಡ್ ಸಂಸ್ಥೆ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್‌

Next Post

́ಬಾಂಗ್ಲಾದಲ್ಲಿ ನಮ್ಮ ಸಹೋದರ, ಸಹೋದರಿಯರ ಹತ್ಯೆಗಳಾಗ್ತಿವೆʼ ನಟಿ ಜಾಹ್ನವಿ ಕಪೂರ್ ಆಕ್ರೋಶ

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:
ರಾಜಕೀಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

by ಪ್ರತಿಧ್ವನಿ
December 30, 2025
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:    ...

Read moreDetails
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

December 30, 2025
Next Post
́ಬಾಂಗ್ಲಾದಲ್ಲಿ ನಮ್ಮ ಸಹೋದರ, ಸಹೋದರಿಯರ ಹತ್ಯೆಗಳಾಗ್ತಿವೆʼ ನಟಿ ಜಾಹ್ನವಿ ಕಪೂರ್ ಆಕ್ರೋಶ

́ಬಾಂಗ್ಲಾದಲ್ಲಿ ನಮ್ಮ ಸಹೋದರ, ಸಹೋದರಿಯರ ಹತ್ಯೆಗಳಾಗ್ತಿವೆʼ ನಟಿ ಜಾಹ್ನವಿ ಕಪೂರ್ ಆಕ್ರೋಶ

Recent News

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
Top Story

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

by ಪ್ರತಿಧ್ವನಿ
December 30, 2025
ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..
Top Story

ಕ್ರೀಡಾ ಲೋಕದಲ್ಲಿ 2025 ಎಷ್ಟು ಮಹತ್ವ ಪಡೆದಿತ್ತು..? ಯಾವೆಲ್ಲ ಮೊದಲುಗಳಿಗೆ ಕ್ರೀಡಾ ಕ್ಷೇತ್ರ ಸಾಕ್ಷಿಯಾಗಿತು? ಆಟಗಳ ಜಗತ್ತಿನಲ್ಲಿ ಏನೆಲ್ಲ ನಡೆಯಿತು ಎನ್ನುವುದರ ಹಿನ್ನೋಟ..

by ಪ್ರತಿಧ್ವನಿ
December 30, 2025
ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಒತ್ತುವರಿದಾರರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
December 30, 2025
ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?
Top Story

ಡೆವಿಲ್‌ ಸೂಪರ್‌ ಹಿಟ್‌.. ಬಿಡುಗಡೆ ಬಳಿಕ ದರ್ಶನ್‌ ಮುಂದಿನ ಸಿನಿಮಾ ಯಾರ ಜೊತೆ..?

by ಪ್ರತಿಧ್ವನಿ
December 30, 2025
ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?
Top Story

ʼನೀನಾದೆ ನಾʼ ಧಾರಾವಾಹಿ ಖ್ಯಾತಿಯ ನಟಿ ನಂದಿನಿ ದಿಢೀರ್‌ ಸಾವಿಗೆ ಕಾರಣವೇನು..?

by ಪ್ರತಿಧ್ವನಿ
December 30, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಬಿ-ಜಿ ರಾಮ್ ಜಿ ಕಾಯ್ದೆ ಅನುಷ್ಠಾನ ತಡೆ ಹಿಡಿಯುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದ ಅಂಶಗಳು:

December 30, 2025
K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

K.C Veerendra Puppy: ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!

December 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!