• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಚಿತ್ರೀಕರಣ ಆರಂಭಿಸಿದ ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ”ವೃಷಭ”

ಪ್ರತಿಧ್ವನಿ by ಪ್ರತಿಧ್ವನಿ
July 25, 2023
in ಸಿನಿಮಾ
0
ಚಿತ್ರೀಕರಣ ಆರಂಭಿಸಿದ ಮೋಹನ್ ಲಾಲ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ”ವೃಷಭ”
Share on WhatsAppShare on FacebookShare on Telegram

ಭಾರತದ ಬೃಹತ್ ಆಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಖ್ಯಾತ ನಟ ಮೋಹನ್ ಲಾಲ್ ಅಭಿನಯದ ‘ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರದ ಚಿತ್ರೀಕರಣ ಕಳೆದ ಭಾನುವಾರದಿಂದ ಪ್ರಾರಂಭವಾಗಿದೆ.

ADVERTISEMENT

‘ವೃಷಭ’ ಚಿತ್ರದಲ್ಲಿ ಮೈ ಜುಂ ಎನಿಸುವಂತಹ ಆಕ್ಷನ್ ಮತ್ತು ರೋಚಕ ದೃಶ್ಯಗಳು ಇರಲಿದ್ದು, ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್ ಜೊತೆಗೆ ರೋಶನ್ ಮೇಕಾ, ಶನಾಯ ಕಪೂರ್, ಝಾರಾ ಖಾನ್, ಶ್ರೀಕಾಂತ್ ಮೇಕಾ ಮುಂತಾದವರು ನಟಿಸುತ್ತಿದ್ದಾರೆ.

ಕನ್ನಡದ ರಾಗಿಣಿ ದ್ವಿವೇದಿ ಸಹ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ‘ಕಾಂದಹಾರ್’ ನಂತರ ಇದೇ ಎರಡನೆಯ ಬಾರಿಗೆ ಮೋಹನ್ ಲಾಲ್ ಜೊತೆಗೆ ರಾಗಿಣಿ ನಟಿಸುತ್ತಿದ್ದಾರೆ. ಕನ್ನಡದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ನಂದಕಿಶೋರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

ಚಿತ್ರ ಪ್ರಾರಂಭವಾದ ವಿಷಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡ ನಟ ಮೋಹನ್ ಲಾಲ್, ‘’ವೃಷಭ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದದ ನಿರೀಕ್ಷೆಯಲ್ಲಿದ್ದೇವೆ’ ಎಂದು ಹೇಳಿದ್ದಾರೆ.

‘ವೃಷಭ’ ಚಿತ್ರವನ್ನು ಬಾಲಿವುಡ್‌ ನ ಜನಪ್ರಿಯ ನಿರ್ಮಾಣ ಸಂಸ್ಥೆಯಾದ ಬಾಲಾಜಿ ಟೆಲಿಫಿಲಂಸ್ ಮತ್ತು ಕನೆಕ್ಟ್ ಮೀಡಿಯಾ, ಎವಿಸ್ ಸ್ಟುಡಿಯೋದ ಸಹಯೋಗದೊಂದಿಗೆ ನಿರ್ಮಿಸುತ್ತಿದೆ. ಏಕ್ತಾ ಕಪೂರ್, ಶೋಭಾ ಕಪೂರ್, ಅಭಿಷೇಕ್ ವ್ಯಾಸ್, ವಿಶಾಲ್ ಗುರ್ನಾನಿ, ಜೂಹಿ ಪಾರೇಖ್ ಮೆಹ್ತಾ, ಶ್ಯಾಮಸುಂದರ್, ವರುಣ್ ಮಾಥುರ್ ಮತ್ತು ಸೌರಭ್ ಮಿಶ್ರಾ ಜೊತೆಯಾಗಿ ನಿರ್ಮಿಸುತ್ತಿದ್ದಾರೆ.
ಬಹು ನಿರೀಕ್ಷಿತ ಈ ಚಿತ್ರವು ಮುಂದಿನ ವರ್ಷ ಜಗತ್ತಿನಾದ್ಯಂತ 4500ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದೆ.

Tags: Malayalammalayalam moviemohan lalmollywoodRagini Dwivedi
Previous Post

ಸರ್ಕಾರಕ್ಕೆ ಸಂಕಷ್ಟ ಎದುರಾಗುತ್ತಾ..? ಇದು ಕಾಂಗ್ರೆಸ್‌‌ ಒಳಗಿನ ಗುಮ್ಮನಾ..?

Next Post

ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲ; ಸಿಎಂ ಸಿದ್ದರಾಮಯ್ಯ

Related Posts

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?
Top Story

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

by ಪ್ರತಿಧ್ವನಿ
May 20, 2026
0

ಬೆಂಗಳೂರು : ಜೋಗಿ ಪ್ರೇಮ್‌ ನಿರ್ದೇಶನದ ಕೆಡಿ ಸಿನಿಮಾ ಅಬ್ಬರ ಹೇಗಿತ್ತು ಅನ್ನೋದು ಎಲ್ಲರಿಗೂ ಗೊತ್ತು. ಧ್ರುವ ಸರ್ಜಾ ಕೂಡ ಈ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ...

Read moreDetails
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

May 19, 2026
ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

ದರ್ಶನ್‌ ಏಳು ಜನ್ಮ ಎತ್ತಿ ಬಂದರೂ, ಹೆಂಡತಿ ಋಣ ತೀರಿಸಕ್ಕಾಗಲ್ಲ : ಪತ್ನಿ ಅಂದ್ರೆ ಹೀಗಿರಬೇಕು, ದರ್ಶನ್‌ ಪುಣ್ಯವಂತ..!

May 19, 2026
“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

“ಖಂಡಿತ ನಾಶ ಮಾಡದೆ ಬಿಡುವುದಿಲ್ಲ…” ಪೋಸ್ಟ್ ವೈರಲ್: ದಿಲೀಪ್ ರಾಜ್ ಪತ್ನಿಯ ಸಂದೇಶದ ಹಿಂದೆ ಏನರ್ಥ?

May 19, 2026
Next Post
ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲ; ಸಿಎಂ ಸಿದ್ದರಾಮಯ್ಯ

ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರದ ಬಗ್ಗೆ ತಿಳಿದಿಲ್ಲ; ಸಿಎಂ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!