• Home
  • About Us
  • ಕರ್ನಾಟಕ
Wednesday, July 9, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Eltu Mutta: ಅದ್ದೂರಿಯಾಗಿ ಅನಾವರಣವಾಯಿತು “ಎಲ್ಟು ಮುತ್ತಾ” ಚಿತ್ರದ ಹಾಡುಗಳು .

ಪ್ರತಿಧ್ವನಿ by ಪ್ರತಿಧ್ವನಿ
July 8, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಇದೇ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ 50 ವರ್ಷ ಪೂರೈಸಿದ ಗಾಯಕಿ ಸಂಗೀತಾ ಕಟ್ಟಿ ಅವರಿಗೆ ಚಿತ್ರತಂಡದಿಂದ ಆತ್ಮೀಯ ಸನ್ಮಾನ

ADVERTISEMENT

HIGH 5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ ಎಸ್. ಶ್ರೀನಿವಾಸನ್ (Sathya S Srinivasan) ನಿರ್ಮಿಸಿರುವ, ರಾ.ಸೂರ್ಯ (Ra Surya) ನಿರ್ದೇಶನದ ಹಾಗೂ ಶೌರ್ಯ ಪ್ರತಾಪ್(Shourya Pratap), ರಾ.ಸೂರ್ಯ, ಪ್ರಿಯಾಂಕ ಮಳಲಿ ಮುಂತಾದವರು ಅಭಿನಯಿಸಿರುವ ‘ಎಲ್ಟು ಮುತ್ತಾ’ ಚಿತ್ರಕ್ಕಾಗಿ ಪ್ರಸನ್ನ ಕೇಶವ ಸಂಗೀತ ಸಂಯೋಜಿಸಿರುವ ಹಾಡುಗಳ ಬಿಡುಗಡೆ ಸಮಾರಂಭ ಹಾಗೂ ಚಿತ್ರದ ಪತ್ರಿಕಾಗೋಷ್ಠಿ ಇತ್ತೀಚೆಗೆ ಹುಬ್ಬಳ್ಳಿಯ ರಾಯಲ್ ರಿಟ್ಜ್ ರೆಸಾರ್ಟ್‌ ನಲ್ಲಿ ಅದ್ದೂರಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ 50 ವರ್ಷ ಪೂರೈಸಿದ ನಾಡಿನ ಖ್ಯಾತ ಗಾಯಕಿ ಸಂಗೀತಾ ಕಟ್ಟಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಉಪ್ಪಿನ ಬೆಟಗೇರಿ ಪರಮಪೂಜ್ಯ ಶ್ರೀ ಕುಮಾರ ವಿರೂಪಾಕ್ಷ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್‍ ಬಣಕಾರ್, ಪೊಲೀಸ್ ಅಧಿಕಾರಿ ಅನಿಲ್ ಕಮಾರ್ ಭೂಮರಡಿ(Anil Kamar Bhumaradi), ಹಿರಿಯ ವಕೀಲರು ಹಾಗೂ ಸಮಾಜ ಸೇವಕರಾದ ಪಾಂಡುರಂಗ ಎಚ್ ನೀರಳಕೇರಿ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.

ಪ್ರಸನ್ನ ಕೇಶವ ಅವರು ನನ್ನ ಶಿಷ್ಯ ಎಂದು ಹೇಳುವುದಕ್ಕೆ ಹೆಮ್ಮೆಯಾಗುತ್ತದೆ‌ ಎಂದು ಮಾತನಾಡಿದ ಗಾಯಕಿ ಸಂಗೀತ ಕಟ್ಟಿ, ಅವರು ಬಹಳ ಶ್ರದ್ಧೆಯಿಂದ ಕೆಲಸ ಮಾಡಿದ್ದಾರೆ. ಅವರಿಗೆ ಯಾವಾಗ ಫೋನ್‍ ಮಾಡಿದರೂ ಸ್ಟುಡಿಯೋದಲ್ಲಿ ಕೆಲಸದಲ್ಲಿ ನಿರತರಾಗಿರುತ್ತಿದ್ದರು. ಚಿತ್ರ ಯಶಸ್ವಿಯಾಗಲಿ. L2 ಅಂದರೆ Latitude, Longitude (ಅಕ್ಷಾಂಶ, ರೇಖಾಂಶ) ಎಂದರ್ಥ. ‘ಎಲ್ಟು ಮುತ್ತಾ’ ಚಿತ್ರ ಸಹ ದೇಶದ, ಪ್ರಪಂಚದ ಉದ್ಧಗಲಕ್ಕೂ ಹೆಸರು ಮಾಡಲಿ‌ ಹಾರೈಸಿದರು.

ಇದು ಬರೀ ಕೊಡಗಿನ ಕಥೆಯಲ್ಲ. ಕೊಡಗಿನ ಕಥೆಯನ್ನು ಇಡೀ ಕರ್ನಾಟಕಕ್ಕೆ ಹೇಳುವ ಪ್ರಯತ್ನ ಮಾಡುತ್ತಿದ್ದೇವೆ. ಈ ಚಿತ್ರವನ್ನು ನಾವು ಯಾವ ಸ್ಟಾರ್ ನಟರನ್ನು ಗಮನದಲ್ಲಿಟ್ಟುಕೊಂಡು ಮಾಡಲಿಲ್ಲ. ಚಿತ್ರಕ್ಕೂ ಮೊದಲು ಒಂದು ಟೀಸರ್ ಚಿತ್ರೀಕರಣ ಮಾಡಿದ್ದೆವು. ಆ ಟೀಸರ್ ನೋಡಿದ ಮೇಲೆ ಮುತ್ತನ ಪಾತ್ರವನ್ನು ಶೌರ್ಯ ಪ್ರತಾಪ್‍ ಬಿಟ್ಟು ಬೇರೆ ಯಾರೂ ಮಾಡಲು ಅಸಾಧ್ಯ ಎಂದನಿಸಿತು. ಆ ಟೀಸರ್ ನೋಡಿ ಸತ್ಯ ಶ್ರೀನಿವಾಸನ್‍ ಅವರು ನಮ್ಮ ಜೊತೆಗೆ ನಿಂತರು. ನಾನು ಮೂಲತಃ ಕೊಡಗಿನವನು. ನಾನು ಈ ಜನರನ್ನು ನೋಡಿದ್ದೇನೆ. ಕೆಲವರು ಬದುಕಿದ್ದಾರೆ. ಇನ್ನೂ ಕೆಲವರು ಈಗಿಲ್ಲ. ಅವರ ಜೀವನವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದ ಮೂಲಕ ಮಾಡಿದ್ದೇನೆ. ಸುಮಾರು 55 ದಿನಗಳ ಕಾಲ ಕೊಡಗಿನಲ್ಲಿ ಚಿತ್ರೀಕರಣ ಮಾಡಿದ್ದೇವೆ. ಒಂದು ಹಾಡನ್ನು ಕನಕಪುರದ ಬಳಿ ಚಿತ್ರೀಕರಿಸಲಾಗಿದೆ ಎಂದು ನಿರ್ದೇಶಕ ಹಾಗೂ ಎಲ್ಟು ಪಾತ್ರಧಾರಿ ರಾ.ಸೂರ್ಯ (Ra Surya) ತಿಳಿಸಿದರು.

ಜುಲೈ 16ರಂದು ಬೆಂಗಳೂರಿನಲ್ಲಿ ಟ್ರೇಲರ್ ಬಿಡುಗಡೆ ಮಾಡುತ್ತಿದ್ದೇವೆ. ಜುಲೈ ಕೊನೆಯ ಅಥವಾ ಆಗಸ್ಟ್ ಮೊದಲವಾರದಲ್ಲಿ ಚಿತ್ರ ಬಿಡುಗಡೆ ಮಾಡುವ ಯೋಚನೆ ಇದೆ. ಟ್ರೇಲರ್ ನಲ್ಲೇ ಚಿತ್ರದ ಬಿಡುಗಡೆ ದಿನಾಂಕ ಘೋಷಿಸಲಾಗುವುದು ಎಂದರು ನಿರ್ಮಾಪಕ ಸತ್ಯ ಶ್ರೀನಿವಾಸನ್(Sathya Srinivasan).

ಈ ಚಿತ್ರದಲ್ಲಿ ನನ್ನದು ನೆಗೆಟಿವ್ ಶೇಡ್‍ ಪಾತ್ರ ಎಂದು ತಿಳಿಸಿದ ನಟ ಕಾಕ್ರೋಜ್ ಸುಧೀ, ಚಿತ್ರದ ಬಗ್ಗೆ ಹೆಚ್ಚು ಹೇಳುವ ಹಾಗಿಲ್ಲ. ಇದೊಂದು ಹೊಸ ತಂಡ ಎಂದನಿಸುವುದಿಲ್ಲ. ಇವರ ಸಿನಿಮಾ ಪ್ರೀತಿ ನೋಡಿದರೆ, ಇವರು ಹೊಸಬರು ಎಂದನಿಸುವುದಿಲ್ಲ. ಕೆಲಸ ಮಾಡುತ್ತಾ ಮಾಡುತ್ತಾ ಸಾಕಷ್ಟು ಕಲಿತಿದ್ದಾರೆ‌ ಎಂದರು.

ನಾನು ಸತ್ಯ ಅವರು ಹಳೆಯ ಸ್ನೇಹಿತರು. ಒಮ್ಮೆ ಮಾತನಾಡುವಾಗ, ಈ ಚಿತ್ರದ ಪ್ರಸ್ತಾಪವಾಯಿತು. ನನಗೂ ಈ ಚಿತ್ರದಲ್ಲಿ ತೊಡಗಿಸಿಕೊಳ್ಳಬೇಕು ಎಂದನಿಸಿದ್ದರಿಂದ ತಂಡ ಜೊತೆಯಾದೆ. ನಾನು ಈ ಚಿತ್ರ ನೋಡಿದ್ದೇನೆ. ಚಿತ್ರ ಮೂಡಿಬಂದಿರುವ ರೀತಿ ಖುಷಿಯಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಚಿತ್ರಗಳನ್ನು ಮಾಡುವಾಸೆ ಇದೆ ಎಂದರು ಸಹ ನಿರ್ಮಾಪಕ ಪವೀಂದ್ರ ಮುತ್ತಪ್ಪ.

ನಾನು ಬರವಣಿಗೆ ಹಂತದಲ್ಲೇ ತೊಡಗಿಸಿಕೊಂಡಿದ್ದೆ. ನಾನು ಹೊಸಬ. ಇದು ಮೊದಲ ಚಿತ್ರ. ಯಾವುದೇ ರೀತಿಯ ಅನುಭವವಿಲ್ಲ. ನಟನೆ ಬಗ್ಗೆ ಆಸಕ್ತಿ ಇತ್ತು. ನಾಟಕಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸಿದ್ದೆ. ಈ ಚಿತ್ರದ ಮೂಲಕ ಸಿನಿಮಾದಲ್ಲಿ ನಟಿಸುವುದಕ್ಕೆ ಅವಕಾಶ ಸಿಕ್ಕಿತು. ಚಿತ್ರದಲ್ಲಿ ನಾನು ಮುತ್ತನ ಪಾತ್ರದಲ್ಲಿ ನಟಿಸಿದ್ದೇನೆ ಎನ್ನುವದಕ್ಕಿಂತ ಮುತ್ತನಾಗಿ ಜೀವಿಸಿದ್ದೇನೆ. ಪಾತ್ರಕ್ಕೆ ದೈಹಿಕವಾಗಿ ತಯಾರಾಗುವುದಕ್ಕಿಂತ ಮಾನಸಿಕವಾಗಿ ಸಾಕಷ್ಟು ತಯಾರಿ ನಡೆಸಿದ್ದೇನೆ ಎಂದು ನಾಯಕ ಶೌರ್ಯ ಪ್ರತಾಪ್ ಹೇಳಿದರು.

ಕೊಡಗಿನಲ್ಲಿ ಇಂಥದ್ದೊಂದು ಜನಾಂಗ ನನಗೆ ಗೊತ್ತಿರಲಿಲ್ಲ. ನಿರ್ದೇಶಕರು ಹೇಳಿದ ಮೇಲೆ ಗೊತ್ತಾಗಿದ್ದು. ಈ ಪಾತ್ರದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಸುಮಾರು ಮೂರು ದಿನಗಳ ಕಾಲ ಬೇಕಾಯಿತು. ನಾಲ್ಕನೇ ದಿನ ನಾನೇ ಪಾತ್ರವಾಗಿ ಹೋದೆ. ಸಿನಿಮಾಗಾಗಿ ಒಂದೂವರೆ ತಿಂಗಳ ಕಾಲ ಸತತ ಚಿತ್ರೀಕರಣ ಮಾಡಿದ್ದೇವೆ. ಬೆಂಗಳೂರಿಗೆ ವಾಪಸ್ಸಾದ ನಂತರ ಆ ಗುಂಗಿನಿಂದ ಹೊರಬರುವುದಕ್ಕೆ ಸಾಧ್ಯವಾಗಲಿಲ್ಲ. ಚಿತ್ರದಿಂದ ತುಂಬಾ ಕಲಿತಿದ್ದೇನೆ. ನನಗೆ ಇಂಥದ್ದೊಂದು ಅವಕಾಶ ಕೊಟ್ಟ ತಂಡದವರಿಗೆ ನಾನು ಆಭಾರಿ ಎಂದು ನಾಯಕಿ ಪ್ರಿಯಾಂಕ ಮಳಲಿ ತಿಳಿಸಿದರು.

ಗುರುಗಳಾದ ಸಂಗೀತ ಕಟ್ಟಿ ಅವರ ಸಮ್ಮುಖದಲ್ಲಿ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಸಂಗೀತ ನಿರ್ದೇಶಕ ಪ್ರಸನ್ನ ಕೇಶವ, ಹಾಡುಗಳ ಬಗ್ಗೆ ಮಾಹಿತಿ ನೀಡಿದರು‌. ನಟಿ ಬೇಬಿ ಪ್ರಿಯ, ನಟ , ಕಾರ್ಯಕಾರಿ ನಿರ್ಮಾಪಕ ರುಹಾನ್ ಆರ್ಯ (Ruhan Arya) ಹಾಗೂ ಹಿರಿಯ ನಟ ನವೀನ್ ಪಡೀಲ್ (Naveen Padeel) ಸೇರಿದಂತೆ “ಎಲ್ಟು ಮುತ್ತಾ” ಚಿತ್ರತಂಡದ ಅನೇಕ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Tags: Anil Kamar BhumaradiEltu Muttakannada cinemaPriyanka MalaliRa SuryaSathya S SrinivasShourya PratapShree Kumara Virupaksha SwamyUmesh Banakar
Previous Post

Katanpete Gate: ಈ ವಾರ ತೆರೆಗೆ ಆರ್ ಶ್ರೀನಿವಾಸ್ ನಿರ್ಮಾಣದ “ಕಾಟನ್ ಪೇಟೆ ಗೇಟ್” .

Next Post

CM Siddaramaiah: ನಾರಾಯಣ ಬರಮನಿ ಕೇಸ್ – ಮುಜುಗರದಿಂದ ಪಾರಾದ ಸರ್ಕಾರ..!!

Related Posts

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
0

ತರುಣ್‌ ಸುಧೀರ್‌ ನಿರ್ಮಾಣದ ಹೊಸ ಚಿತ್ರಕ್ಕೆ ಶಿವಣ್ಣ-ಪ್ರೇಮ್‌ ಸಾಥ್..ʼಏಳುಮಲೆʼ ಟೈಟಲ್‌ ಟೀಸರ್‌ನಲ್ಲಿ ಮಿಂಚಿದ ರಕ್ಷಿತಾ ಸಹೋದರ ರಾಣಾ. ತರುಣ್ ಕಿಶೋರ್ ಸುಧೀರ್ ನಿರ್ಮಾಣ ಮಾಡುತ್ತಿರುವ ಪುನೀತ್ ರಂಗಸ್ವಾಮಿ...

Read moreDetails

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

July 9, 2025
Next Post

CM Siddaramaiah: ನಾರಾಯಣ ಬರಮನಿ ಕೇಸ್ – ಮುಜುಗರದಿಂದ ಪಾರಾದ ಸರ್ಕಾರ..!!

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada