ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆಯು ಇಂದು ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ರಾಜ್ಯ ಉಸ್ತುವಾರಿ ಮತ್ತು ರಾಜ್ಯಸಭಾ ಸಂಸದ ಡಾ. ರಾಧಾ ಮೋಹನ್ ದಾಸ್ ಅಗ್ರವಾಲ್, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಉಪಮುಖ್ಯಮಂತ್ರಿ ಮತ್ತು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ತಿನ ಸದಸ್ಯ ಸಿ.ಟಿ.ರವಿ, ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಉಪಸ್ಥಿತರಿದ್ದರು.