ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ, ರಾಜ್ಯದ ಆಡಳಿತ ಯಂತ್ರದಲ್ಲಿ ಮಹತ್ತರವಾದ ಬದಲಾವಣೆ ತರಲು ಮುಂದಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅಧಿಕಾರಕ್ಕೆ ಬರುತ್ತಿದ್ದಂತೆ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು, ಇದೀಗ ಮತ್ತೆ ವರ್ಗಾವಣೆ ಮಾಡಿದೆ. ಈ ಪೈಕಿ ರೋಹಿಣಿ ಸಿಂಧೂರಿ ಅವರಿಗೂ ರಾಜ್ಯ ಸರ್ಕಾರ ಪೋಸ್ಟಿಂಗ್ ಕೊಟ್ಟಿದೆ.
ಹೌದು.. 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ರಾಜ್ಯ ಸರ್ಕಾರ. ಇದೀಗ ಐವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜಿಸಿದ್ರೆ, ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇದರಲ್ಲಿ ಈಗ ರೋಹಿಣಿ ಸಿಂಧೂರಿ ಅವರಿಗೆ ಪೋಸ್ಟಿಂಗ್ ನೀಡಿರುವುದು ಎಲ್ಲರ ಗಮನ ಸೆಳೆದಿದ್ದು, ಈ ಹಿಂದಿನ ವಿವಾದದ ನಂತರ ರೋಹಿಣಿ ಸಿಂಧೂರಿ ಇದೀಗ ಮತ್ತೊಮ್ಮೆ ಆಡಳಿತ ಯಂತ್ರದ ಭಾಗವಾಗುತ್ತಿದ್ದಾರೆ
ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ರೋಹಿಣಿ ಸಿಂಧೂರಿ ಹಾಗೂ ಡಿ.ರೂಪಾ ಮಧ್ಯೆ ನಡೆದಿದ್ದ ಕಿತ್ತಾಟ ಗಮನ ಸೆಳೆದಿತ್ತು. ಕರ್ನಾಟಕ ಮಾತ್ರವಲ್ಲದೆ ದೇಶದ ವಿವಿಧೆಡೆ ಕೂಡ ಈ ವಿಚಾರ ಸದ್ದು ಮಾಡಿತ್ತು. ಆಗ ಇಬ್ಬರೂ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡದೆ ವರ್ಗಾವಣೆ ಮಾಡಲಾಗಿತ್ತು. ಅದೇ ರೀತಿ ರೋಹಿಣಿ ಸಿಂಧೂರಿ ಅವರಿಗೆ ಇಷ್ಟು ದಿನ ಕಾಲ ಅಧಿಕಾರ ಇರ್ಲಿಲ್ಲ. ಈಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಕರ್ನಾಟಕ ಗೆಜೆಟಿಯರ್ ಚೀಫ್ ಎಡಿಟರ್ ಆಗಿ ನೇಮಕ ಮಾಡಲಾಗಿದೆ.
ಒಟ್ಟಾರೆಯಾಗಿ ಇತ್ತೀಚೆಗೆ 10 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಮತ್ತೆ ಅಧಿಕಾರಿಗಳ ವರ್ಗಾವಣೆ ಮಾಡಿದೆ. ಹಾಗೇ ಇಷ್ಟು ದಿನ ಇಲಾಖೆ ಇಲ್ಲದೆ ಕಾಯುತ್ತಿದ್ದ ಅಧಿಕಾರಿಗಳಿಗೂ ಸ್ಥಳ ನಿಯೋಜನೆ ಮಾಡಲಾಗಿದ್ದು, ಮುಂದೆ ಕೂಡ ಮತ್ತಷ್ಟು ಅಧಿಕಾರಿಗಳ ವರ್ಗಾವಣೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.