ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶ ವಿರುದ್ಧ ‘ಸುಪ್ರೀಂ’ಗೆ ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಇಂದಿನ ವಿಚಾರಣೆ ವೇಳೆ ಈ ವಿಚಾರವನ್ನು ರಾಜ್ಯ ಸರ್ಕಾರ ಪ್ರಸ್ತಾಪ ಮಾಡಿದೆ. ಸಿಜೆಐ ಎನ್.ವಿ.ರಮಣ ನೇತೃತ್ವದಲ್ಲಿ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದು, ಶೀಘ್ರವೇ ಇದರ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.
ಎಸಿಬಿ ರಚನೆ ಮಾಡಿ 2016 ರಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸುವ ಮೂಲಕ ಮಹತ್ವದ ಆದೇಶ ಹೊರಡಿಸಿತ್ತು. ಎಸಿಬಿ ರಚನೆ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸಿದ ಹೈಕೋರ್ಟ್ ಎಸಿಬಿ ಈವರೆಗೂ ನಡೆಸಿರುವ ತನಿಖೆ, ವಿಚಾರಣೆಯನ್ನು ಲೋಕಾಯುಕ್ತಕ್ಕೆ ವರ್ಗಾವಣೆಯಾಗಲಿದೆ ಎಂದಿತ್ತು. ಎಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಗಳು ಪುನರ್ ಸ್ಥಾಪನೆಯಾಗಲಿದ್ದು, ಎಸಿಬಿಯಲ್ಲಿರುವ ಪೊಲೀಸರು ಲೋಕಾಯುಕ್ತ ವ್ಯಾಪ್ತಿಗೆ ಬರುತ್ತಾರೆ ಎಂದು ಆಗಸ್ಟ್ 11ರಂದು ಹೈಕೋರ್ಟ್ ಆದೇಶಿಸಿತ್ತು.

ಲೋಕಾಯುಕ್ತರ ನಿಗಾದಡಿ ಲೋಕಾಯುಕ್ತ ಪೊಲೀಸ್ ಠಾಣೆ ಇರುವುದರಿಂದ ಸರ್ಕಾರದ ಹಸ್ತಕ್ಷೇಪ ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿತ್ತು ಆದರೆ ಇದೀಗ ರಾಜ್ಯ ಸರ್ಕಾರ ಎಸಿಬಿ ರದ್ದುಗೊಳಿಸಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಸಿದೆ.