ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಇದರೊಂದಿಗೆ ನೌಕರರಿಗೆ ಅನುಕೂಲವಾಗಿದೆ ಅಂತ ಹೇಳಲಾಗುತ್ತಿದೆ.
ಹೌದು… 2023-24ನೇ ಸಾಲಿನ ಗ್ರೂಪ್ ಎ, ಬಿ, ಸಿ ಡಿ ವರ್ಗದ ರಾಜ್ಯದ ಸರ್ಕಾರಿ ನೌಕರರ (karnataka govenament employees) ಸಾರ್ವತ್ರಿಕ ವರ್ಗಾವಣೆ ಪ್ರಕೃಯೆಯ (Employees Transfer) ಅವಧಿಯನ್ನು ರಾಜ್ಯ ಸರ್ಕಾರ ಮತ್ತೊಮ್ಮೆ ವಿಸ್ತರಣೆ ಮಾಡಿ ಆದೇಶವನ್ನ ಹೊರಡಿಸಿದೆ.

ಈಗಿನ ಹೊಸ ಆದೇಶದಲ್ಲಿ ಜುಲೈ 3ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಆದೇಶದಿಂದಾಗಿ ಇದೀಗ ಎರಡನೇ ಬಾರಿಗೆ ಸಾರ್ವತ್ರಿಕ ವರ್ಗಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ( CM Siddaramaiah ) ಸರ್ಕಾರ ಅವಧಿ ವಿಸ್ತರಣೆ ಮಾಡಿದಂತಾಗುತ್ತೆ. ಇದರೊಂದಿಗೆ ತಮಗೆ ಬೇಕಾದ ಕಡೆಗೆ ವರ್ಗಾವಣೆ ಮಾಡಿಕೊಳ್ಳಲು ಪರದಾಡುತ್ತಿರುವ ನೌಕರರಿಗೆ ಈ ಮೂಲಕ ಸಾಕಷ್ಟು ಅನುಕೂಲ ಕೂಡ ಆಗಿದೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ.4ರಷ್ಟು ಹೆಚ್ಚಿಸುವ ಕ್ರಮ ಕೈಗೊಂಡಿತ್ತು. ನಂತರ ಕೆಲ ಸಮಯಗಳಿಂದ ವರ್ಗಾವಣೆಗಾಗಿ ಕಾಯುತ್ತಿದ್ದ ರಾಜ್ಯದ ಸರ್ಕಾರಿ ನೌಕರರಿಗೆ ಉಪಯೋಗವಾಗುವಂತೆ ಸಾರ್ವತ್ರಿಕ ವರ್ಗಾವಣೆಗೆ ಜೂನ್ 1 ರಿಂದ 15 ರವರೆಗೆ ವರ್ಗಾವಣೆ ಮಾಡೋದಕ್ಕೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಬಳಿಕ ಈ ವರ್ಗಾವಣೆ ಅವಧಿಯನ್ನ ಜೂ.30ರವರೆಗೆ ವಿಸ್ತರಣೆಗೊಳಿಸಿ ಆದೇಶವನ್ನ ಹೊರಡಿಸಿತ್ತು. ಇದೀಗ ಮತ್ತೊಮ್ಮೆ ಸಾರ್ವತ್ರಿಕ ವರ್ಗಾವಣೆ ವಿಸ್ತರಣೆ ಮಾಡಿರುವ ಸರ್ಕಾರ ಜುಲೈ 3 ರವರೆಗೆ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.