ಮಂಗಳೂರಿನ ಬಜಪೆ ಸಮೀಪ ನಡೆದಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಗೆ (Suhas shetty murder) ಸಂಬಂಧಪಟ್ಟಂತೆ ಇದೀಗ ಪ್ರಕರಣದ ತನಿಖೆಯನ್ನು NIA ಗೆ ವಹಿಸಲಾಗಿದ್ದು, ಈ ಬಗ್ಗೆ ಸುಹಾಸ್ ತಾಯಿ ಪ್ರತಿಕ್ರಿಯಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನನ್ನ ಮಗನನ್ನು ಭೀಕರವಾಗಿ ಕೊಲೆ ಮಾಡಲಾಗಿದೆ ಎಂದು ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಕಣ್ಣೀರಿಟ್ಟಿದ್ದಾರೆ.

ಸುಹಾಸ್ ಶೆಟ್ಟಿ ಬಜರಂಗದಳ (Bajarang dal) ಕಾರ್ಯಕರ್ತನಾಗಿದ್ದ ಎಂಬ ಕಾರಣಕ್ಕೆ ಹತ್ಯೆ ಮಾಡಲಾಗಿದೆ.ರಾಜ್ಯ ಸರ್ಕಾರದ ಮೇಲೆ ನಮಗೆ ಯಾವುದೇ ನಂಬಿಕೆ ಇರಲಿಲ್ಲ, ರಾಜ್ಯ ಸರ್ಕಾರದ ಯಾವುದೇ ಸಚಿವರು ಅಥವಾ ಶಾಸಕರು ನಮ್ಮ ಮನೆಗೆ ಇದುವರೆಗೂ ಭೇಟಿ ನೀಡಿಲ್ಲ, ಅವರು ಕೇವಲ ಮುಸ್ಲಿಂ ಸಮುದಾಯದವರೊಂದಿಗೆ ಸಭೆಗಳನ್ನು ನಡೆಸಿ ಹೋಗುತ್ತಿದ್ದರು ಎಂದಿದ್ದಾರೆ.

ಹೀಗಾಗಿ ರಾಜ್ಯ ಸರ್ಕಾರ ಮುಸ್ಲಿಮರ ಪರವಾಗಿದೆ ಎಂದು ನಮಗೆ ಹಲವು ಬಾರಿ ಅನಿಸುತ್ತಿತ್ತು ಎಂದು ಸುಹಾಸ್ ಸ್ವರ ತಾಯಿ ಸುಲೋಚನಾ ಆರೋಪಿಸಿದ್ದಾರೆ. ಆದ್ರೆ ಈಗ NIA ನಮಗೆ ನ್ಯಾಯ ಕೊಡಿಸುವ ಭರವಸೆ ಇದೆ ಅಂತ ಇದೇ ವೇಳೆ ಸುಹಾಸ್ ಶೆಟ್ಟಿ ತಾಯಿ ಸುಲೋಚನ ಹೇಳಿದ್ದಾರೆ.











