• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಭಿವೃದ್ಧಿ ಪಥದಲ್ಲಿ ದಾಪುಗಾಲಿಡುತ್ತಿರುವ ರಾಜ್ಯ ಸರ್ಕಾರ: ರಾಜ್ಯಪಾಲ ಥಾವರಚಂದ್ ಗೆಹಲೋತ್

ಪ್ರತಿಧ್ವನಿ by ಪ್ರತಿಧ್ವನಿ
February 10, 2023
in Top Story, ಕರ್ನಾಟಕ
0
ಅಭಿವೃದ್ಧಿ ಪಥದಲ್ಲಿ ದಾಪುಗಾಲಿಡುತ್ತಿರುವ ರಾಜ್ಯ ಸರ್ಕಾರ: ರಾಜ್ಯಪಾಲ ಥಾವರಚಂದ್ ಗೆಹಲೋತ್
Share on WhatsAppShare on FacebookShare on Telegram

ಬೆಂಗಳೂರು: ಸರ್ಕಾರವು ರೈತರು, ಕಾರ್ಮಿಕರು, ಬಡವರು, ದುರ್ಬಲ ವರ್ಗದವರು ಮತ್ತು ಅವಕಾಶ ವಂಚಿತರ ಕಲ್ಯಾಣ ಮತ್ತು ಅಭಿವೃದ್ಧಿಗೆ ಬದ್ಧವಾಗಿದ್ದು, ಅಭಿವೃದ್ಧಿ ಪಥದಲ್ಲಿ ಮುಂಚೂಣಿಯ ರಾಜ್ಯವಾಗಿ ದಾಪುಗಾಲಿಡುತ್ತಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು.

ADVERTISEMENT

ವಿಧಾನಮಂಡಲ ಅಧಿವೇಶನ ಶುಕ್ರವಾರದಿಂದ ಆರಂಭವಾಗಿದ್ದು, ವಿಧಾನಮಂಡಲದಲ್ಲಿ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಿದರು.

ರಾಜ್ಯ ಸರ್ಕಾರವು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಜನವರಿ ಅಂತ್ಯದವರೆಗೆ ರಾಜಸ್ವ ಸಂಗ್ರಹಣೆಯಲ್ಲಿ ಶೇಕಡ 91ರಷ್ಟು ಗುರಿ ಸಾಧನೆ ಮಾಡಿದೆ.ಸ್ವಂತ ತೆರಿಗೆ ರಾಜಸ್ವ ಸಂಗ್ರಹಣೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 21ರಷ್ಟು ಹೆಚ್ಚಳವಾಗಿದೆ. ಬಜೆಟ್ ಅಂದಾಜಿನ ಶೇಕಡ 75ರಷ್ಟು ಮೊತ್ತವನ್ನು ಈವರೆಗೆ ವೆಚ್ಚ ಮಾಡಲಾಗಿದೆ ಎಂದರು.

2022ರ ಜನವರಿ ಅಂತ್ಯಕ್ಕೆ ರಾಜ್ಯ ಸರ್ಕಾರದ ಬಂಡವಾಳ ವೆಚ್ಚವು  26,915 ಕೋಟಿಯಷ್ಟಿತ್ತು. 2023ರ ಜನವರಿ ಅಂತ್ಯಕ್ಮೆ ಬಂಡವಾಳ ವೆಚ್ಚದ ಪ್ರಮಾಣವು 33,991 ಕೋಟಿಯಷ್ಟಿದ್ದು, ಬಂಡವಾಳ ವೆಚ್ಚದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ಶ್ಲಾಘಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ‌ ಮೀಸಲಾತಿಯನ್ನು ಹೆಚ್ಚಿಸುವ ಐತಿಹಾಸಿಕ ಕ್ರಮವನ್ನು ಸರ್ಕಾರ ಕೈಗೊಂಡಿದೆ. ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲಾಗಿದೆ. ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 29,000 ಕೋಟಿ ವೆಚ್ಚ ಮಾಡಲಾಗಿದೆ ಎಂದರು.

ಸುಲಲಿತ ವ್ಯವಹಾರದ ವಿಷಯದಲ್ಲಿ ಕರ್ನಾಟಕವು ದೇಶದಲ್ಲೇ ಅಗ್ರ ಸ್ಥಾನ ಪಡೆದಿದೆ. ಪ್ರಸಕ್ತ ಸಾಲಿನಲ್ಲಿ ದೇಶದ ರಫ್ತು ವಹಿವಾಟಿಗೆ ರಾಜ್ಯವು 25.87 ಬಿಲಿಯನ್ ಅಮೆರಿಕನ್ ಡಾಲರ್ ಗಳಷ್ಟು ಕೊಡುಗೆ ನೀಡಿದೆ. ಇದು ಈವರೆಗಿನ ಅತ್ಯಧಿಕ‌ ಮೊತ್ತವಾಗಿದೆ ಎಂದು ತಿಳಿಸಿದರು.

ಅತ್ಯಾಚಾರ ಮತ್ತು ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣಗಳ ವಿಚಾರಣೆಗೆ 31 ತ್ವರಿತ ನ್ಯಾಯಾಲಯಗಳನ್ನು ಆರಂಭಿಸಲು ಮಂಜೂರಾತಿ ನೀಡಲಾಗಿದೆ. ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

2022-23ನೇ ಸಾಲಿನಲ್ಲಿ 58,588 ದಶಲಕ್ಷ ಯೂನಿಟ್ ಉತ್ಪಾದಿಸಲಾಗಿದೆ. ಹೆಚ್ಚುವರಿಯಾಗಿ ಲಭ್ಯವಿದ್ದ 4,326.45 ದಶಲಕ್ಷ ಗ ಯೂನಿಟ್ ವಿದ್ಯುತ್ ಮಾರಾಟ ಮಾಡಿದ್ದು, 2,500 ಕೋಟಿ ಗಳಿಸಲಾಗಿದೆ ಎಂದು ವಿವರ ನೀಡಿದರು.

ಬೆಳಕು ಯೋಜನೆಯಡಿ 2.35 ಲಕ್ಷ ವಿದ್ಯುತ್ ರಹಿತ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇದಕ್ಕಾಗಿ 124 ಕೋಟಿ ವ್ಯಯಿಸಲಾಗಿದೆ. ಪರಿಭಾವಿತ ಅರಣ್ಯ ಪ್ರದೇಶದ ವ್ಯಾಪ್ತಿಯಿಂದ 7.73 ಲಕ್ಷ ಹೆಕ್ಟೇರ್ ಪ್ರದೇಶವನ್ನು ಕೈಬಿಡಲಾಗಿದೆ ಎಂದರು.

1,475 ತಾಂಡಾ, ಗೊಲ್ಲರಹಟ್ಟಿ, ಕುರುಬರಹಟ್ಟಿ ಮತ್ತು ಇತರ ದಾಖಲೆರಹಿತ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಘೋಷಿಸಲಾಗಿದೆ. ಕಲಬುರಗಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲಿ 52,000 ಫಲಾ‌ನುಭವಿಗಳಿಗೆ ಹಕ್ಕುಪತ್ರ ವಿವರಿಸಲಾಗಿದೆ. ಇದು ವಿಶ್ವದಾಖಲೆ ಎಂದು ಹೇಳಿದರು.

ರಾಜ್ಯದ ಎಲ್ಲ ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ 9556 ಹೆಚ್ಚುವರಿ ಶಾಲಾ ಕೊಠಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ 1923.5 ಕೋಟಿ ಅನುದಾನ ನೀಡಲಾಗಿದೆ. ಬೀದರ್, ಹಾವೇರಿ, ಚಾಮರಾಜನಗರ, ಕೊಡಗು, ಕೊಪ್ಪಳ, ಹಾಸನದಲ್ಲಿ 7 ವಿವಿ ಸ್ಥಾಪನೆ ಹಾಗೂ 7 ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆಗೆ ಕ್ರಮ ಕೈಗೊಳ್ಳಲಾಗಿದೆ. ಒಟ್ಟು 106314 ವಿದ್ಯಾರ್ಥಿನಿಯರಿಗೆ ಓಬವ್ವ ಆತ್ನ ರಕ್ಷಣಾ ಕಲೆ ಅಡಿಯಲ್ಲಿ ಆತ್ಮ ರಕ್ಷಣಾ ತರಬೇತಿ ನೀಡಲಾಗುತ್ತಿದೆ ಎಂದರು.

ಅಗಲಿದ ಗಣ್ಯರಿಗೆ ಸಂತಾಪ

ಡಾ. ಹೆಗ್ಗಪ್ಪ ದೇಶಪ್ಪ ಲಮಾಣಿ, ಪೆರಿಟಿ ತಿಮ್ಮಪ್ಪ ಹೆಗಡೆ, ಶಿವಾನಂದ್ ಅಂಬಡಗಟ್ಟಿ, ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಡಾ. ಎಂಕೆ ಪಾಂಡುರಾಂಗ ಶೆಟ್ಟಿ, ವಾಣಿ ಜಯರಾಂ, ಬಿ.ಕೆ.ಎಸ್ ವರ್ಮಾ, ಹಿರಿಯ ಸಂಶೋಧಕ ಸಾಹಿತಿ ಡಾ.ಚಂದ್ರಶೇಖರ ಸಾರಾ ಅಬೂಬಕ್ಕರ್, ಚಂದ್ರಶೇಖರ ಕೆದ್ಲಾಯ, ಕೆವಿ ತಿರುಮಲೇಶ್ ಅವರಿಗೆ ಸಂತಾಪ ಸೂಚಿಸಲಾಗಿದೆ.

Tags: ಬಿಜೆಪಿರಾಜ್ಯಪಾಲ ಥಾವರಚಂದ್ ಗೆಹಲೋತ್ವಿಧಾನಮಂಡಲ ಅಧಿವೇಶನ
Previous Post

ದೇಶದಲ್ಲಿ ಇದೇ ಮೊದಲ ಬಾರಿಗೆ ಲಿಥಿಯಂ ನಿಕ್ಷೇಪ ಪತ್ತೆ

Next Post

ರಾಜ್ಯಪಾಲರ ಭಾಷಣವನ್ನು ‘ತೌಡು ಕುಟ್ಟುವ ಭಾಷಣ’ ಎಂದು ಕರೆದ ಸಿದ್ದರಾಮಯ್ಯ

Related Posts

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!
Top Story

ಅಮೆರಿಕ ಗುಪ್ತಚರ ಇಲಾಖೆಯ ಎಚ್ಚರಿಕೆ: ಯುದ್ಧದ ಗಾಯ ಮರೆತು ಮತ್ತೆ ಬಲಗೊಳ್ಳುತ್ತಿರುವ ಇರಾನ್..!

by ಪ್ರತಿಧ್ವನಿ
May 22, 2026
0

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಕಡಿಮೆಯಾಗುವ ಲಕ್ಷಣಗಳು ಕಾಣಿಸದ ನಡುವೆಯೇ, ಇರಾನ್ ತನ್ನ ಸೇನಾ ಶಕ್ತಿಯನ್ನು ನಿರೀಕ್ಷೆಗಿಂತಲೂ ವೇಗವಾಗಿ ಮರುನಿರ್ಮಿಸುತ್ತಿದೆ ಎಂಬ ಆತಂಕಕಾರಿ ಮಾಹಿತಿಯನ್ನು ಅಮೆರಿಕದ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ....

Read moreDetails
ಗುಜರಾತ್-ಚೆನ್ನೈ ಕದನದ ಮೇಲೆ ಆರ್‌ಸಿಬಿ ಕಣ್ಣು: ಇಂದು ಸಿಎಸ್‌ಕೆ ಗೆದ್ದರೆ ಬೆಂಗಳೂರು ತಂಡಕ್ಕೆ ಲಾಭ?

‘ಕಾಕ್ರೋಚ್ ಜನತಾ ಪಾರ್ಟಿ’ಗೆ ಎಕ್ಸ್‌ನಲ್ಲಿ ಬ್ರೇಕ್..! ಯುವಕರ ಡಿಜಿಟಲ್ ಆಕ್ರೋಶಕ್ಕೆ ಸೆನ್ಸಾರ್‌?

May 21, 2026
ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

ಡಿಎಂಕೆ ಆಕ್ಷೇಪದ ಬೆನ್ನಲ್ಲೇ ಹಿನ್ನಡೆ ಅನುಭವಿಸಿದ ಟಿವಿಕೆ: ₹17 ಲಕ್ಷ ಟೆಂಡರ್ ರದ್ದು

May 21, 2026
*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

*ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಯಾವೆಲ್ಲ ಜಿಲ್ಲೆಗಳು..?*

May 21, 2026
ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

ಈದ್‌ಗೂ ಮುನ್ನ ಪಶು ವಧೆ ನಿರ್ಬಂಧ: ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ

May 21, 2026
Next Post
ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

ರಾಜ್ಯಪಾಲರ ಭಾಷಣವನ್ನು ‘ತೌಡು ಕುಟ್ಟುವ ಭಾಷಣ’ ಎಂದು ಕರೆದ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada