ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಿ ಸರ್ಕಾರ ಶಾಕ್ ಕೊಟ್ಟಿದೆ.

2025-26ನೇ ಸಾಲಿನ ಪರೀಕ್ಷಾ ಶುಲ್ಕವನ್ನು 5% ಏರಿಕೆ ಮಾಡಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆದೇಶ ಹೊರಡಿಸಿದೆ. 2025-26ನೇ ಸಾಲಿನಲ್ಲಿ ನಡೆಯಲಿರುವ ಎಲ್ಲಾ ಪರೀಕ್ಷೆಗಳಿಗೆ ಪ್ರಸ್ತುತ ಇರುವ ದರಕ್ಕೆ ಶೇ.5 ರಷ್ಟು ಸೇರಿಸಿ ಶುಲ್ಕ ವಿಧಿಸಲಾಗುತ್ತದೆ ಎಂದು ತಿಳಿಸಲಾಗಿದೆ.

SSLC ಪರೀಕ್ಷೆಗೆ ವಿದ್ಯಾರ್ಥಿಗಳ ಪರಿಷ್ಕೃತ ಪರೀಕ್ಷಾ ಶುಲ್ಕ ಹೀಗಿದೆ…
ಮೊದಲ ಬಾರಿ ಹಾಜರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ – 676 ರೂ. ನಿಂದ 710 ರೂ.ಗೆ ಹೆಚ್ಚಳ.
ಹೊಸದಾಗಿ ನೋಂದಣಿಯಾಗುವ ಖಾಸಗಿ ಅಭ್ಯರ್ಥಿಗಳ ನೋಂದಣಿ ಶುಲ್ಕ ಹಾಗೂ ಅರ್ಜಿ ಶುಲ್ಕ – 236 ರೂ. ನಿಂದ 248 ರೂ.ಗೆ ಹೆಚ್ಚಳ.
ಈಗಾಗಲೇ ಖಾಸಗಿ ಅಭ್ಯರ್ಥಿಯಾಗಿ ನೋಂದಣಿಯಾಗಿ ಪರೀಕ್ಷಾ ಶುಲ್ಕ ಪಾವತಿಸಿದ ಅಭ್ಯರ್ಥಿಗಳ ನೋಂದಣಿ ನವೀಕರಣ ಶುಲ್ಕ – 69 ರೂ. ನಿಂದ 72 ರೂ.ಗೆ ಹೆಚ್ಚಳ.
ಪುನರಾವರ್ತಿತ ಶಾಲಾ/ ಖಾಸಗಿ ಅಭ್ಯರ್ಥಿಗಳ ಪರೀಕ್ಷಾ ಶುಲ್ಕ

- ಒಂದು ವಿಷಯಕ್ಕೆ- 427 ರೂ ನಿಂದ 448 ಗೆ ಹೆಚ್ಚಳ
- ಎರಡು ವಿಷಯಕ್ಕೆ -532 ರೂನಿಂದ 559 ರೂಗೆ ಹೆಚ್ಚಳ.
- ಮೂರು ಮತ್ತು ಮೂರಕ್ಕಿಂತ ಜಾಸ್ತಿ ವಿಷಯಗಳು – 716 ರೂ. ನಿಂದ 752 ರೂ.ಗೆ ಹೆಚ್ಚಳ.