• Home
  • About Us
  • ಕರ್ನಾಟಕ
Sunday, October 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Basavaraj Bommai: ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ಕೊಡಲಿ:ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
October 9, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ:ಬಸವರಾಜ ಬೊಮ್ಮಾಯಿ

ADVERTISEMENT

ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ಸರಿಯಾದ ಪರಿಹಾರ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರ ಕಾಲದಲ್ಲಿ ಪ್ರವಾಹ ಆದಾಗ 63 ಹೊಸ ಗ್ರಾಮಗಳನ್ನೆ ಕಟ್ಟಿಸಿದರು. ಎರಡನೇ ಸಾರಿ ಪ್ರವಾಹ ಆದಾಗ ಸುಮಾರು ಮೂರು ಲಕ್ಷ ಮನೆಗಳನ್ನು ಐದು ಲಕ್ಷ ಪರಿಹಾರ ನೀಡಿದ್ದೇವೆ. ನಾನು ಸಿಎಂ ಆಗಿದ್ದಾಗ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಿದ್ದೇವು. ಒಣ ಬೇಸಾಯಕ್ಕೆ 13 ಸಾವಿರ, ನೀರಾವರಿಗೆ 18 ಸಾವಿರ, ತೋಟಗಾರಿಗೆ ಬೆಳೆಗಳಿಗೆ 25 ಸಾವಿರ ರೂ. ಪ್ರತಿ ಎಕರೆಗೆ ಪರಿಹಾರ ನೀಡಿದ್ದೇವು. ಸುಮಾರು ಏಳು ಲಕ್ಷ ರೈತರಿಗೆ ಪರಿಹಾರ ನೀಡಿದ್ದೇವೆ. ರಾಜ್ಯ ಸರ್ಕಾರ ಕೂಡಲೇ ರೈತರಿಗೆ ಎರಡು ಪಟ್ಟು ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು

ಬಿಗ್ ಬಾಸ್ ಸಮಸ್ಯೆ ಬಗೆಹರಿಸಲಿ
ಬಿಗ್ ಬಾಸ್ ವಿಚಾರ ಆ ಸ್ಟುಡಿಯೊ ಮಾಲಕರು ಮತ್ತು ಅಧಿಕಾರಿಗಳ ನಡುವೆ ನಡೆಯುವುದು ಯಾವ ಕಾನೂನಿನ ಅಡಿಯಲ್ಲಿ ಯಾವ ಕ್ರಮ ಕೈಗೊಳ್ಳಬೇಕು ಎನ್ನುವುದಕ್ಕೂ ಕಾನೂನು ಪ್ರಕಾರ ನಡೆಯುವ ಪದ್ದತಿ ಇದೆ. ಈ ಮಧ್ಯೆ ಅದಕ್ಕೆ ಡಿಸಿಎಂ ಅವರು ಹಿಂದೆ ಆಡಿದ ಮಾತು ಸೇರಿಸಿ ಕೆಲವರು ಹೇಳುತ್ತಿದ್ದಾರೆ. ಅದು ಮುಖ್ಯವಲ್ಲ. ಎಲ್ಲೊ ದಾರಿ ತಪ್ಪುತ್ತಿದೆ ಎನಿಸುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರ ವ್ಯಾಪ್ತಿ ಏನು ಬಂದ್ ಮಾಡುವ ಅಧಿಕಾರ ಇದೆಯಾ ಇಲ್ಲವಾ ನೋಡಬೇಕು. ಒಂದು ಕಡೆ ಮನರಂಜನಾ ಉದ್ಯಮ ನಡೆಯಬೇಕು ಇನ್ನೊಂದೆಡೆ ಮಾಲಿನ್ಯವಾಗದಂತೆ ನೊಡಿಕೊಳ್ಳಬೇಕಿದೆ. ಎಷ್ಟು ದಿನದಿಂದ ಈ ಸಮಸ್ಯೆ ಇದೆ. ಈಗ್ಯಾಕೆ ಈ ಕ್ರಮ ಕೈಗೊಂಡಿದ್ದಾರೆ ಎನ್ನುವ ಪ್ರಶ್ನೆ ಮೂಡುತ್ತದೆ. ಇಕೊ ಎಕನಾಮಿಕ್ಸ್ ಅಂತಾರೆ‌, ಆರ್ಥಿಕತೆಯೂ ನಡೆಯಬೇಕು, ಪರಿಸರವೂ ಉಳಿಯಬೇಕು. ಅದು ಈ ರಾಜ್ಯದಲ್ಲಿ ತಪ್ಪಿ ಹೋಗಿದೆ. ರಾಜ್ಯದಲ್ಲಿ ಎಲ್ಲವೂ ದಾರಿ ತಪ್ಪಿದೆ. ನಡೆದದ್ದೇ ದಾರಿ ಎನ್ನುವಂತಾಗಿದೆ. ಹಾಗೆ ಆದಾಗಲೇ ಈ ರೀತಿಯ ಘಟನೆಗಳು ನಡೆಯುತ್ತವೆ. ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಅನುಮತಿ ಕೊಡೆಸಿ ಇದರಲ್ಲಿ ತಮ್ಮ ಪಾತ್ರ ಇಲ್ಲ ಎನ್ನುವುದನ್ನು ಸಾಬೀತು ಪಡಿಸುವ ಪ್ರಯತ್ನ ಮಾಡಿದ್ದರೆ ಎಂದು ಹೇಳಿದರು.

ಕಾಂಗ್ರೆಸ್ ಹೈಕಮಾಂಡ್ ಗೆ ಸ್ಪಷ್ಟತೆಯಿಲ್ಲ
ರಾಜ್ಯ ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿಯಾಗುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನವೆಂಬರ್ ನಲ್ಲಿ ಏನಾಗುತ್ತೊ ಬಿಡುತ್ತದೊ ಅದು ಕಾಂಗ್ರೆಸ್ ಆಂತರಿಕ ವಿಚಾರ. ಆದರೆ, ಒಂದು ವಿಚಾರ ಸ್ಪಷ್ಟ ಆಡಳಿತ ಮಾಡುವುದನ್ನು ಬಿಟ್ಟು ಸಿಎಂ ನಾನು ಮುಂದುವರೆಯುತ್ತೇನೆ ಎನ್ನುವುದು ಕೆಲವರು ಅವರು ಮುಂದುವರೆಯುವುದಿಲ್ಲ ಎನ್ನುವುದು. ಕಾಂಗ್ರೆಸ್ ಶಾಸಕರು ಮತ್ತು ಮಂತ್ರಿಗಳ ನಡುವೆ ಸಾಕಷ್ಡು ಗೊಂದಲ ಇದೆ. ಅಶಿಸ್ತು ತೋರಿದರೆ ಕ್ರಮ ಕೈಗೊಳ್ಳುತ್ತೆನೆ ಎಂದರೂ ಶಾಸಕರು ಸುಮ್ಮನಿಲ್ಲ. ಹೈಕಮಾಂಡ್ ನವರಿಗೂ ಇದರ ಸ್ಪಷ್ಟತೆ ಇಲ್ಲಾ. ಸಿಎಂ ಸಿದ್ದರಾಮಯ್ಯ ಅವರ ಹಿನ್ನೆಲೆ ಮತ್ತು ಇಮೇಜ್ ಬಗ್ಗೆ ಯೋಚನೆ ಮಾಡುತ್ತಿದ್ದಾರೆ‌. ಡಿಸಿಎಂ ಶಿವಕುಮಾರ್ ಪಕ್ಷ ಕಟ್ಟಿದ್ದಾರೆ ಅವರ ಬಗ್ಗೆಯೂ ಯೋಚನೆ ಮಾಡಿ ಯಾವುದೇ ನಿರ್ಧಾರಕ್ಕೆ ಬರಲು ಆಗುತ್ತಿಲ್ಲ. ಕ್ರಾಂತಿ ನವೆಂಬರ್ ನಲ್ಲಿ ಆಗುತ್ತದೊ ಡಿಸೆಂಬರ್ ನಲ್ಲಿ ಆಗುತ್ತದೊ ಕಾದುನೋಡಬೇಕು ಎಂದು ಹೇಳಿದರು.

ಕೇಂದ್ರದ ಅನುದಾನದಿಂದ ಅಭಿವೃದ್ಧಿ
ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯವಾಗುತ್ತಿದೆ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ನರೇಂದ್ರ ಮೋದಿ ಸರ್ಕಾರ 15 ನೇ ಹಣಕಾಸು ಅಡಿಯಲ್ಲಿ ಹಾಗೂ ಇತರ ಯೋಜನೆಗಳಿಗೆ ಐದು ಪಟ್ಟು ಹಣ ಹೆಚ್ಚಿಗೆ ನೀಡಿದೆ. 15 ನೇ ಹಣಕಾಸು ಯೋಜನೆಯಲ್ಲಿ 14 ನೇ ಹಣಕಾಸು ಆಯೋಗಕ್ಕಿಂತ ಒಂದು ಲಕ್ಷ ಕೊಟಿ ಹೆಚ್ಚಿಗೆ ಕೊಟ್ಟಿದೆ. ಯುಪಿಎ ಅವಧಿಯಲ್ಲಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಐದು ವರ್ಷದಲ್ಲಿ ಒಟ್ಟು 7 ಸಾವಿರ ಕೋಟಿ ರೂ. ಬಂದಿತ್ತು. ಈಗ ಪ್ರತಿ ವರ್ಷ ಏಳು ಸಾವಿರ ಕೊಟಿ ಬರುತ್ತಿದೆ. 6 ಸಾವಿರ ಕಿ.ಮೀ. ಹೈವೆ ಆಗುತ್ತಿದೆ. ರಾಜ್ಯದಲ್ಲಿ ಕೇಂದ್ರದ ಅನುದಾನದಿಂದಲೇ ಯೋಜನೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರದ ಬಳಿ ಹಣವೇ ಇಲ್ಲ ಎಂದು ಹೇಳಿದರು.
ಸೌಜನ್ಯ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಅವಳಿಗೆ ನ್ಯಾಯ ಸಿಗಬೇಕು ಅಷ್ಟೆ ಎಂದು ಹೇಳಿದರು.

ಸಮೀಕ್ಷೆಗೆ ಮಹತ್ವ ಇಲ್ಲ
ಸಾಮಾಜಿಕ ಆರ್ಥಿಕ ಸಮೀಕ್ಷೆಯಿಂದ ಮಕ್ಕಳು ಮತ್ತು ಶಿಕ್ಷಕರಿಗೆ ದೊಡ್ಡ ಅನ್ಯಾಯವಾಗುತ್ತಿದೆ. ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ಸಮೀಕ್ಷೆ ನಡೆಯುತ್ತಿಲ್ಲ. ಬಹಳಷ್ಟು ಜನ ಮನೆಯಲ್ಲಿ ಇರುವುದಿಲ್ಲ. ಸಹಕಾರ ನೀಡುತ್ತಿಲ್ಲ ಹೀಗಾಗಿ ಈ ಸಮೀಕ್ಷೆಗೆ ಯಾವುದೇ ಮಹತ್ವ ಉಳಿದಿಲ್ಲ ಎಂದರು.

Tags: Basavaraj Bommaibasavaraj bommai castebasavaraj bommai cmbasavaraj bommai cryingbasavaraj bommai dogbasavaraj bommai familybasavaraj bommai historybasavaraj bommai interviewbasavaraj bommai meets cmbasavaraj bommai ministerbasavaraj bommai new cmbasavaraj bommai newsbasavaraj bommai speechbasavaraj bommai sworn-inBasavaraja Bommaicm basavaraj bommaicm basavaraj bommai cryingcm basavaraj bommai newscm basavaraj bommai speech
Previous Post

ರೈತ ಉತ್ಪಾದಕ ಸಂಸ್ಥೆ (FPO)ಗಳಿಗೆ ಸಿಗಲಿದೆ 3 ಕೋಟಿ ರೂ ಸಬ್ಸಿಡಿ: ಎನ್. ಚಲುವರಾಯಸ್ವಾಮಿ.

Next Post

ದಿನದ 24 ಗಂಟೆಯೂ ಸಮರ್ಪಕ ವಿದ್ಯುತ್ ಬೇಕುಆದರೆ, ವಿದ್ಯುತ್ ಉತ್ಪಾದನಾ ಯೋಜನೆಗಳು ಬೇಡ

Related Posts

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
0

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು...

Read moreDetails

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

October 11, 2025

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

October 11, 2025

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

October 11, 2025
Next Post
ದಿನದ 24 ಗಂಟೆಯೂ ಸಮರ್ಪಕ ವಿದ್ಯುತ್ ಬೇಕುಆದರೆ, ವಿದ್ಯುತ್ ಉತ್ಪಾದನಾ ಯೋಜನೆಗಳು ಬೇಡ

ದಿನದ 24 ಗಂಟೆಯೂ ಸಮರ್ಪಕ ವಿದ್ಯುತ್ ಬೇಕುಆದರೆ, ವಿದ್ಯುತ್ ಉತ್ಪಾದನಾ ಯೋಜನೆಗಳು ಬೇಡ

Recent News

Top Story

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

by ಪ್ರತಿಧ್ವನಿ
October 11, 2025
Top Story

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
October 11, 2025
Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!
Top Story

Pradeep Eshwar: ಈ ರಾಜ್ಯದ ಫ್ಯೂಚರ್‌ ಪ್ರಿಯಾಂಕ್‌ ಖರ್ಗೆ ಸಾಹೇಬ್ರು ಮರೀಬೇಡಿ ಎಂದ ಪ್ರದೀಪ್‌ ಈಶ್ವರ್‌!

by ಪ್ರತಿಧ್ವನಿ
October 11, 2025
Top Story

ಅವಹೇಳನಕಾರಿ ಕಾಮೆಂಟ್‌ ಹಾಕಿದ ಸೋಶಿಯಲ್ ಮೀಡಿಯಾ ಅಕೌಂಟ್‌ಗಳ ಮೇಲೆ ಬಿತ್ತು ಕೇಸ್..

by ಪ್ರತಿಧ್ವನಿ
October 11, 2025
Top Story

150ಕೋಟಿ ಹಣ ಎಗುರಿಸಿದ ಸೈಬರ್‌ ವಂಚಕರ ಅರೆಸ್ಟ್..!!

by ಪ್ರತಿಧ್ವನಿ
October 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Santhosh Lad: ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

October 11, 2025

CM Siddaramaiah: ಹಂಪನಾ ಅವರು ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ: ಸಿ.ಎಂ.ಸಿದ್ದರಾಮಯ್ಯ

October 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada