
ಎರಡನೇ ವಾರದಲ್ಲೂ ಮುಂದುವರೆದಿದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ “ದಿ ಡೆವಿಲ್” ಚಿತ್ರದ ಯಶಸ್ಸಿನ ಓಟ . ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ದಿ ಡೆವಿಲ್” ಚಿತ್ರ ಕಳೆದ ಡಿಸೆಂಬರ್ 11 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಬಿಡುಗಡೆಯ ದಿನ ಬೆಳಗ್ಗೆ6.30ರ ಮೊದಲ ಪ್ರದರ್ಶನದಿಂದಲೇ ಅಭಿಮಾನಿಗಳು ಚಿತ್ರವನ್ನು ವೀಕ್ಷಿಸಿ ಸಂಭ್ರಮಿಸುತ್ತಿದ್ದಾರೆ. ಅದ್ಭುತ ಆರಂಭ ಕಂಡ ಈ ಚಿತ್ರ ಗಳಿಕಯಲ್ಲೂ ಉತ್ತಮವಾಗಿದೆ. ಫ್ಯಾಮಿಲಿ ಆಡಿಯನ್ಸ್ ಚಿತ್ರಮಂದಿರಗಳಿಗೆ ಬರುತ್ತಿದ್ದಾರೆ. ಮಹಿಳೆಯರು ಉತ್ತಮ ವಿಮರ್ಶೆಗಳನ್ನು ನೀಡುತ್ತಿದ್ದಾರೆ. ಚಿತ್ರದ ಟ್ರೇಲರ್ ಸಹ ಟ್ರೆಂಡಿಂಗ್ ನಲ್ಲಿ ಮೊದಲನೇ ಸ್ಥಾನದಲ್ಲಿದೆ.


ಚಿತ್ರದ ಕಥೆಗೆ ಹಾಗೂ ದರ್ಶನ್ ಅವರ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರದಲ್ಲಿ ಬರುವ ಅನಿರೀಕ್ಷಿತ ತಿರುವುಗಳನ್ನು ಜನರು ಇಷ್ಟಪಡುತ್ತಿದ್ದಾರೆ. ಒಟ್ಟಿನಲ್ಲಿ ಕರ್ನಾಟಕದಾದ್ಯಂತ ಚಿತ್ರಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಪ್ರೇಮಿಗಳು ತೋರುತ್ತಿರುವ ಈ ಪ್ರೀತಿಗೆ ತುಂಬು ಹೃದಯದ ಧನ್ಯವಾದಗಳು ಎನ್ನುತ್ತಾರೆ ನಿರ್ದೇಶಕ ಪ್ರಕಾಶ್ ವೀರ್ ಹಾಗೂ ಕಾರ್ಯಕಾರಿ ನಿರ್ಮಾಪಕಿ ತಶ್ವಿನಿ ವೀರ್.





