• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಸವಣ್ಣನವರ ವಚನ ಹೇಳಿ ಜನಪ್ರತಿನಿಧಿಗಳಿಗೆ ಸಲಹೆ ನೀಡಿದ ಸುಪ್ರೀಂಕೋರ್ಟ್

Any Mind by Any Mind
January 4, 2023
in Top Story, ದೇಶ
0
ಬಸವಣ್ಣನವರ ವಚನ ಹೇಳಿ  ಜನಪ್ರತಿನಿಧಿಗಳಿಗೆ ಸಲಹೆ ನೀಡಿದ ಸುಪ್ರೀಂಕೋರ್ಟ್
Share on WhatsAppShare on FacebookShare on Telegram

ADVERTISEMENT

ನವದೆಹಲಿ: ಬಸವಣ್ಣನವರ ಈ ವಚನವನ್ನು ತೀರ್ಪಿನಲ್ಲಿ ದಾಖಲಿಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಜನಪ್ರತಿನಿಧಿಗಳಿಗೆ ಈ ಮೂಲಕ ಮಾತುಗಳ ಮೇಲೆ ಹಿಡಿತ ಇಟ್ಟುಕೊಳ್ಳುವಂತೆ ಕಿವಿಮಾತು ಹೇಳಿದ್ದಾರೆ.

ಸಂಸದರು, ಶಾಸಕರು, ಮಂತ್ರಿಗಳು ಸೇರಿದಂತೆ ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯದ ಮೇಲೆ ಹೆಚ್ಚುವರಿ ನಿಯಂತ್ರಣ ಹೇರಲು ಸಾಧ್ಯವಿದೆಯೇ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಅಬ್ದುಲ್ ನಜೀರ್ ನೇತೃತ್ವದ ಸಾಂವಿಧಾನಿಕ ಪೀಠದ ಇತರ ನಾಲ್ವರು ಸದಸ್ಯರ ಅಭಿಪ್ರಾಯಕ್ಕೆ ಭಿನ್ನವಾದ ತೀರ್ಪನ್ನು ನ್ಯಾ.ಬಿ.ವಿ. ನಾಗರತ್ನ ಬರೆದಿದ್ದಾರೆ. ಅದರಲ್ಲಿ ಬಸವಣ್ಣನ ವಚನ ಉಲ್ಲೇಖಿಸಿ ಗಮನ ಸೆಳೆದಿದ್ದಾರೆ. ಅಧಿಕ ಮುಖಬೆಲೆಯ ನೋಟುಗಳ ಅಮಾನ್ಯೀಕರಣ ಪ್ರಶ್ನಿಸಿದ ಅರ್ಜಿ ಕುರಿತು ಸೋಮವಾರ ಪ್ರಕಟವಾದ ಇದೇ ಪೀಠದ ತೀರ್ಪಿನಲ್ಲೂ ಭಿನ್ನ ತೀರ್ಪು ದಾಖಲಿಸಿದ್ದರು.

ಇತರ ನ್ಯಾಯಮೂರ್ತಿಗಳ ಅಭಿಪ್ರಾಯ: ಪೀಠದ ನ್ಯಾಯಮೂರ್ತಿಗಳಾದ ಅಬ್ದುಲ್ ನಜೀರ್, ಎ.ಎಸ್.ಬೋಪಣ್ಣ, ಬಿ.ಆರ್. ಗವಾಯಿ, ವಿ. ರಾಮಸುಬ್ರಹ್ಮಣ್ಯಂ ಸಾಮೂಹಿಕ ಹೊಣೆಗಾರಿಕೆಯ ಸಂದರ್ಭದಲ್ಲಿ ಓರ್ವ ಸಚಿವರ ಹೇಳಿಕೆಯನ್ನು ಸರ್ಕಾರದ ಅಭಿಪ್ರಾಯವೆಂದು ಹೇಳಲಾಗದು ಎಂದಿದ್ದಾರೆ.

ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯದ ಮೇಲಿನ ನಿರ್ಬಂಧಗಳು ಸಂವಿಧಾನದ ಪರಿಚ್ಛೇದ 19 (2)ರ ಅಡಿಯಲ್ಲಿ ಸೂಚಿಸಲಾದ ಮಿತಿಯಲ್ಲೇ ಇರುತ್ತದೆ. ಹೆಚ್ಚುವರಿ ನಿಯಂತ್ರಣ ಹೇರಲು ಸಾಧ್ಯವಿಲ್ಲ. ಆರ್ಟಿಕಲ್ 19(2)ರ ಪ್ರಕಾರ ಹೆಚ್ಚುವರಿ ನಿರ್ಬಂಧ ಹೇರುವ ಕಾನೂನನ್ನು ಸರ್ಕಾರ ಮಾಡಬಹುದೇ ಹೊರತು ನ್ಯಾಯಾಲಯವಲ್ಲ ಎಂದು ಹೇಳಿದ್ದಾರೆ.

ನುಡಿದರೆ ಮುತ್ತಿನ ಹಾರದಂತಿರಬೇಕು
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು
ನುಡಿದರೆ ಸ್ಪಟಿಕದ ಶಲಾಕೆಯಂತಿರಬೇಕು
ನುಡಿದರೆ ಲಿಂಗ ಮೆಚ್ಚಿ ಅಹುದಹುದೆನಬೇಕು…

ಪ್ರಕರಣದ ಹಿನ್ನೆಲೆ

2016ರಲ್ಲಿ ಉತ್ತರ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಾಯಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರದ ಕುರಿತು ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಹೇಳಿಕೆ ನೀಡಿ, ಇದು ರಾಜಕೀಯ ಪಿತೂರಿ ಮತ್ತು ಪ್ರಚಾರಕ್ಕಾಗಿ ಸಂತ್ರಸ್ತರು ತಮಗೆ ನ್ಯಾಯ ಸಿಗುತ್ತಿಲ್ಲ ಎಂದು ಹೇಳುತ್ತಿದ್ದಾರೆಂದು ಟೀಕಿಸಿದ್ದರು.

ನಂತರ ಬಾಲಕಿ ತಂದೆ ಸಿಬಿಐ ತನಿಖೆಗೆ ಒತ್ತಾಯಿಸಿ, ರಾಜ್ಯದ ಹೊರಗಿನವರು ತನಿಖೆ ನಡೆಸಬೇಕು ಎಂದು ಕೇಳಿಕೊಂಡಿದ್ದರು. ಅಜಂ ಖಾನ್ ಹೇಳಿಕೆಯಿಂದ ನಮ್ಮ ಕುಟುಂಬದ ಪ್ರತಿಷ್ಠೆ ಮತ್ತು ನ್ಯಾಯಯುತ ವಿಚಾರಣೆಯ ನಿರೀಕ್ಷೆ ತಗ್ಗಿಸಿದೆ ಎಂದು ಬಾಲಕಿ ತಂದೆ ದೂರಿದ್ದರು. ಇದಕ್ಕೆ ಅವರು ಬೇಷರತ್ ಕ್ಷಮೆಯಾಚಿಸಿದ್ದರೂ, ಜನಪ್ರತಿನಿಧಿಗಳ ವಾಕ್ ಸ್ವಾತಂತ್ರ್ಯಕ್ಕೆ ಮಿತಿ ಇರಬೇಕು ಎಂದು ವಾದಿಸಿದ ಹಿನ್ನೆಲೆಯಲ್ಲಿ ಈ ಕುರಿತ ಹಲವು ಪ್ರಶ್ನೆಗಳ ಬಗ್ಗೆ ಸಾಂವಿಧಾನಿಕ ಪೀಠ ವಿಚಾರಣೆ ನಡೆಸಿತು.

Tags: ಬಸವಣ್ಣಸುಪ್ರೀಂಕೋರ್ಟ್
Previous Post

D.K.Shivakumar : ಬಿಜೆಪಿಗರ ಅಜೆಂಡಾ ಭಾವನೆ.. ಜನರ ಬದುಕಲ್ಲ| Pratidhvani

Next Post

ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಸಮರ್ಥಿಸಿಕೊಂಡ ರೇಣುಕಾಚಾರ್ಯ

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಸಮರ್ಥಿಸಿಕೊಂಡ ರೇಣುಕಾಚಾರ್ಯ

ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆ ಸಮರ್ಥಿಸಿಕೊಂಡ ರೇಣುಕಾಚಾರ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada