• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
November 14, 2025
in Top Story, ಸಿನಿಮಾ
0
ಹೊಸಬರ ಚಿತ್ರಕ್ಕೆ ಶ್ರೀಮುರಳಿ ಸಾಥ್: ದಿ ಟಾಸ್ಕ್ ಸಿನಿಮಾದ ಟ್ರೇಲರ್ ರಿಲೀಸ್
Share on WhatsAppShare on FacebookShare on Telegram
ADVERTISEMENT

ಕನ್ನಡ ಚಿತ್ರರಂಗದ ಯುವ ಪ್ರತಿಭೆಗಳು ಮುಖ್ಯ ಪಾತ್ರದಲ್ಲಿ ಅಭಿನಯಿಸಿರುವ ‘ದಿ‌‌ ಟಾಸ್ಕ್’ ಸಿನಿಮಾ ಟೈಟಲ್ ಮತ್ತು ಟೀಸರ್ ಮೂಲಕ‌ ಈಗಾಗಲೇ ಸಿನಿಪ್ರಿಯರಲ್ಲಿ ಕುತೂಹಲ ಹೆಚ್ಚಿಸಿದೆ. ನವೆಂಬರ್ 21ರಂದು ಈ ಸಿನಿಮಾ ತೆರೆಗೆ ಬರಲಿದ್ದು, ಸದ್ಯ ‘ದಿ‌‌ ಟಾಸ್ಕ್’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಲಾಗಿದೆ.

ರೋರಿಂಗ್ ಸ್ಟಾರ್ ಶ್ರೀಮುರಳಿ ಟ್ರೇಲರ್ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ರೆಡ್ಡಿ ಸೇರಿದಂತೆ ಇಡೀ ಚಿತ್ರತಂಡ ಉಪಸ್ಥಿತರಿದ್ದರು.

ಟ್ರೇಲರ್ ಬಿಡುಗಡೆ ಬಳಿಕ ನಟ ಶ್ರೀಮುರಳಿ ಮಾತನಾಡಿ, ದಿ ಟಾಸ್ಕ್ ಚಿತ್ರದ ನಾಯಕರಾದ ಸಾಗರ್-ಸೂರ್ಯ‌ ನೀವು ಅದೃಷ್ಟವಂತರು. ಕಾರಣ ರಾಘು ಅವರಂತಹ ಬ್ರಿಲಿಯಂಟ್ ಡೈರೆಕ್ಟರ್ ಜೊತೆ ಕೆಲಸ ಮಾಡುವ ಅವಕಾಶ ನಿಮ್ಮದಾಗಿದೆ. ರಾಘು ಅವರನ್ನು‌ ಚೂರಿಕಟ್ಟೆ ಸಿನಿಮಾ ಸಮಯದಿಂದ ನೋಡುತ್ತಾ ಬಂದಿದ್ದೇನೆ. ಅವರ ಡೈರೆಕ್ಷನ್ ನನಗೆ ಬಹಳ ಇಷ್ಟವಾಯ್ತು. ಅವರ ಬರವಣಿಗೆ, ಅಂದುಕೊಳ್ಳುವ ರೀತಿ ಚೆಂದ. ಅವರು ಬುದ್ಧಿವಂತ ವ್ಯಕ್ತಿ. ಚೂರಿಕಟ್ಟೆ ಇವತ್ತಿನ ಮಾರ್ಕೆಟ್‌ ರಿಲೀಸ್ ಆದರೆ 100 ದಿನ ಓಡುತ್ತದೆ. ಈಗ ದಿ ಟಾಸ್ಕ್ ಸಿನಿಮಾ. ಇಬ್ಬರು ಹೀರೋಗಳು ತುಂಬಾ ಎನರ್ಜಿಟಿಕ್ ಆಗಿ ಕಾಣಿಸ್ತಾರೆ. ಒಳ್ಳೆ ಹೀರೋಗಳು ಇಂಡಸ್ಟ್ರಿಗೆ ಬರ್ತಿದ್ದಾರೆ. ಜೀವನದಲ್ಲಿ ತುಂಬಾನೇ ಟಾಸ್ಕ್ ಇದೆ. ಅದನ್ನು ಪಕ್ಕಕ್ಕಿಟ್ಟು ಇದೇ ನವೆಂಬರ್ 21ರಂದು ದಿ ಟಾಸ್ಕ್ ಸಿನಿಮಾ ನೋಡಿ, ಬೆಂಬಲಿಸಿ ಎಂದರು.

Dinesh Amin Mattu Podcast:  ನಾಳೆ ಸಂಜೆ 4:30 ಕ್ಕೆ..! #pratidhvani

ಶಾಸಕ ಸತೀಶ್ ರೆಡ್ಡಿ ಮಾತನಾಡಿ, ಅದ್ಭುತವಾದ ಸಿನಿಮಾ ದಿ ಟಾಸ್ಕ್. ಇದೇ ತಿಂಗಳ 21ರಂದು ತೆರೆಗೆ ಬರುತ್ತಿದೆ. ಕನ್ನಡಿಗರು ಸಿನಿಮಾ ನೋಡಿ ಹಾರೈಸಬೇಕು. ಯಶಸ್ವಿಯಾಗಿಗೊಳಿಸಬೇಕು. ಸಾಗರ್ ಹಾಗೂ ಸೂರ್ಯ, ಇಡೀ ತಂಡ ಎಫರ್ಟ್ ಹಾಕಿ ಸಿನಿಮಾ ಮಾಡಿದ್ದಾರೆ. ರಾಜೇಶ್ ಸರ್ 10th ಫೇಲ್ ಆದವರಿಗೆ ತಮ್ಮ ದುಡ್ಡಲ್ಲಿ ಮತ್ತೆ ಪರೀಕ್ಷೆ ಕಟ್ಟಿಸಿ ಓದಿಸಿದ್ದಾರೆ. ಇದು ಅವರ ಮಾಡಿದ ಟಾಸ್ಕ್ ಎಂದರು.

‘ಚೂರಿಕಟ್ಟೆ’ ಮೂಲಕ ಭರವಸೆ ಮೂಡಿಸಿದ ರಾಘು ಶಿವಮೊಗ್ಗ ಅವರು ಈಗ ‘ದಿ ಟಾಸ್ಕ್’ ಸಿನಿಮಾಗೆ ನಿರ್ದೇಶನ ಮಾಡಿರುವುದರಿಂದ ನಿರೀಕ್ಷೆ ಇದೆ. ಹಲವು ನೈಜ ಘಟನೆ ಇಟ್ಟುಕೊಂಡು ಈ ಸಿನಿಮಾದ ಕಥೆ ಹೆಣೆಯಲಾಗಿದೆ. ಈ ಚಿತ್ರದಲ್ಲಿ ‘ಭೀಮ’ ಸಿನಿಮಾ ಖ್ಯಾತಿಯ ಜಯಸೂರ್ಯ ಆರ್. ಅಜಾದ್ ಹಾಗೂ ‘ಪೆಂಟಗನ್’ ಖ್ಯಾತಿಯ ಸಾಗರ್ ರಾಮ್ ಅವರು ನಟಿಸಿದ್ದಾರೆ. ಬಾಲ ನಟಿ ಬೇಬಿ ಶ್ರೀಲಕ್ಷ್ಮಿ ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

‘ಲೋಕಪೂಜ್ಯ ಪಿಕ್ಚರ್ ಹೌಸ್’ ಮೂಲಕ ನಿರ್ಮಾಪಕ ವಿಜಯ್ ಕುಮಾರ್ ಮತ್ತು ರಾಮಣ್ಣ ಅವರು ‘ದಿ ಟಾಸ್ಕ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ರಾಘು ಶಿವಮೊಗ್ಗ ಅವರು ನಿರ್ದೇಶನದ ಜವಾಬ್ದಾರಿಯ ಜೊತೆಗೆ ಒಂದು ಮುಖ್ಯ ಪಾತ್ರವನ್ನು ಕೂಡ ನಿರ್ವಹಿಸಿದ್ದಾರೆ. ಅಚ್ಯುತ್ ಕುಮಾರ್, ಶ್ರೀಲಕ್ಷ್ಮೀ, ಗೋಪಾಲಕೃಷ್ಣ ದೇಶಪಾಂಡೆ, ಹರಿಣಿ ಶ್ರೀಕಾಂತ್, ಅರವಿಂದ್ ಕುಪ್ಳಿಕರ್, ಸಂಪತ್ ಮೈತ್ರಿಯಾ, ಬಿ.ಎಂ. ಗಿರಿರಾಜ್, ಬಾಲಾಜಿ ಮನೋಹರ್ ಮುಂತಾದವರು ಪಾತ್ರವರ್ಗದಲ್ಲಿ ಇದ್ದಾರೆ.

BY vijayendra on Congress Government : ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ..!ಬಿ ವೈ ವಿಜಯೇಂದ್ರ...
Tags: Actor ShrimuruliKannadakannada moviessandalwood
Previous Post

ಖಾಸಗಿ ಹಾಗೂ ಸರ್ಕಾರಿ ವಲಯದ ಹೆಣ್ಣುಮಕ್ಕಳಿಗೆ ಸಿಗಲಿದೆ ತಿಂಗಳಿಗೊಂದು ವೇತನ ಸಹಿತ ರಜೆ..!!

Next Post

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಸಿ.ಎಂ ಸಿದ್ದರಾಮಯ್ಯ

Related Posts

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..
Top Story

ಪಾದಯಾತ್ರೆಯ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದನೆ : ಸಚಿವ ಜಾರ್ಜ್ ಮಾದರಿ ನಡೆಗೆ ಜನರ ಅಭಿನಂದನೆ..

by ಪ್ರತಿಧ್ವನಿ
March 3, 2026
0

ಬೆಂಗಳೂರು : ನಗರದ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಜೀವನಹಳ್ಳಿಯಲ್ಲಿ ಪಾದಯಾತ್ರೆ ನಡೆಸುವ ಮೂಲಕ ಇಂಧನ ಸಚಿವ ಕೆ.ಜೆ. ಜಾಋಜ್ ಜನರ ಸಮಸ್ಯೆಗಳನ್ನು ಆಲಿಸಿದರು. ಕ್ಷೇತ್ರದಲ್ಲಿ ಕೈಗೊಂಡಿರುವ...

Read moreDetails
ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

ಇರಾನ್‌ನಿಂದ ದಾಳಿಗೊಳಗಾದ ಮುಸ್ಲಿಂ ರಾಷ್ಟ್ರಗಳಿಗೆ ಮೋದಿ ಕರೆ : ಭಾರತದ ಬೆಂಬಲ ತಿಳಿಸಿದ ಪ್ರಧಾನಿ..

March 3, 2026
ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

ನನ್ನ ಹೆಂಡತಿ, ಮಗನಿಗೆ ತೊಂದರೆ ಕೊಡ್ತಿದ್ದಾರೆ : ಬಹಿರಂಗ ಸಭೆಯಲ್ಲೇ ಶಾಸಕ ರಾಜೇಗೌಡ ಕಣ್ಣೀರು..!

March 3, 2026
“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

“ನನ್ನ, ಡಿಕೆಶಿ ಸಂಬಂಧ ಹಾಲು-ಜೇನಿನಂತಿದೆ, ಹುಳಿ ಹಿಂಡಿದ್ರೆ ನಿಮ್ಮ ಹುಳಿ ಮುಗಿಯುತ್ತೆ, ಹೊರತು ನಮ್ಮ ಸಂಬಂಧಕ್ಕೆ ಏನೂ ಆಗಲ್ಲಾ”

March 3, 2026
ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

ಹಾರ್ಮುಜ್‌ ಮಾರ್ಗದಲ್ಲಿ ನಿಮ್ಮ ತೈಲದ ಹಡಗು ಕಾಣಿಸಿದ್ರೆ ಬೆಂಕಿ ಹಚ್ತೀವಿ : ಟ್ರಂಪ್‌ಗೆ ಇರಾನ್‌ ಎಚ್ಚರಿಕೆ..

March 3, 2026
Next Post

ಸಹಕಾರ ಕ್ಷೇತ್ರ ಗಟ್ಟಿಯಾದರೆ ಆರ್ಥಿಕ, ಸಾಮಾಜಿಕ ಚೈತನ್ಯ ಹೆಚ್ಚಾಗುತ್ತದೆ: ಸಿ.ಎಂ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada