• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

‘ಸಲಾರ್ ಪಾರ್ಟ್ 1 ಸೀಸ್ ಫೈರ್” ಚಿತ್ರದ ಟೀಸರ್, ಅಭಿಮಾನಿಗಳಲ್ಲಿ ಹೆಚ್ಚಾಯಿತು ಹೈಪ್‌

Any Mind by Any Mind
July 6, 2023
in ಸಿನಿಮಾ
0
‘ಸಲಾರ್ ಪಾರ್ಟ್ 1 ಸೀಸ್ ಫೈರ್” ಚಿತ್ರದ ಟೀಸರ್, ಅಭಿಮಾನಿಗಳಲ್ಲಿ ಹೆಚ್ಚಾಯಿತು ಹೈಪ್‌
Share on WhatsAppShare on FacebookShare on Telegram

ಹೊಂಬಾಳೆ ಫಿಲಂಸ್‌ನ ( Hombale Films ) ವಿಜಯ್ ಕಿರಗಂದೂರು ನಿರ್ಮಿಸಿರುವ ಹಾಗೂ ಪ್ರಶಾಂತ್‌ ನೀಲ್‌ ( Prashanth Neel ) ಇಡೀ ದೇಶವೇ ಕುತೂಹಲದಿಂದ ಎದುರು ನೋಡುತ್ತಿರುವಂತಹ ಪ್ಯಾನ್ ಇಂಡಿಯಾ ಚಿತ್ರವಾದ ‘ಸಲಾರ್ ಪಾರ್ಟ್ 1: ಸೀಸ್ ಫೈರ್ ಟೀಸರ್ ಇಂದು ಮುಂಜಾನೆ ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ADVERTISEMENT


‘ಬಾಹುಬಲಿ’ ಖ್ಯಾತಿಯ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದಲ್ಲಿ ಸ್ಟಾರ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿರುವ ‘ಸಲಾರ್’ ಚಿತ್ರವು ಆರಂಭದಿಂದಲೂ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳನ್ನು ಹುಟ್ಟುಹಾಕಿದೆ. ಇಂದು ಮುಂಜಾನೆ 05:12ಕ್ಕೆ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಆ ನಿರೀಕ್ಷೆಗಳು ದುಪ್ಪಟ್ಟಾಗಿವೆ. ಭರ್ಜರಿ ಆಕ್ಷನ್ ದೃಶ್ಯಗಳು ಮತ್ತು ಪವರ್ ಫುಲ್ ಸಂಭಾಷಣೆಗಳಿಂದ ಕೂಡಿರುವ ಈ ಟೀಸರ್, ಪ್ರೇಕ್ಷಕರಿಂದ ಮೆಚ್ಚುಗೆ ಪಡೆಯುವುದರ ಜೊತೆಗೆ, ಹೊಸ ದಾಖಲೆಯನ್ನು ಬರೆಯುವ ಎಲ್ಲಾ ಮುನ್ಸೂಚನೆಯನ್ನು ನೀಡಿದೆ.


‘ಕೆಜಿಎಫ್’ ಮೂಲಕ ಇಡೀ ದೇಶವೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದ ಪ್ರಶಾಂತ್ ನೀಲ್, ಈ ಬಾರಿ ‘ಸಲಾರ್’ ಮೂಲಕ ಇನ್ನೊಂದು ಹೊಸ ಪ್ರಪಂಚವನ್ನೇ ಸೃಷ್ಟಿಸಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಇದುವರೆಗೂ ಕಂಡುಕೇಳರಿಯದ ಪ್ರಮಾಣದಲ್ಲಿ ಈ ಚಿತ್ರವು ನಿರ್ಮಾಣವಾಗುತ್ತಿದ್ದು, ಹೈದರಾಬಾದ್‌ ನ ರಾಮೋಜಿ ಫಿಲಂ ಸಿಟಿ ಬಳಿ 14 ಅದ್ಭುತ ಸೆಟ್ ಗಳನ್ನು ಈ ಚಿತ್ರಕ್ಕಾಗಿ ನಿರ್ಮಿಸಿ, ಅಲ್ಲಿ ಚಿತ್ರೀಕರಣ ಮಾಡಲಾಗಿದೆ.


ಈ ಚಿತ್ರದ ಕುರಿತು ಮಾತನಾಡುವ ನಿರ್ಮಾಪಕ ವಿಜಯ್ ಕಿರಗಂದೂರು, ‘ಈ ಚಿತ್ರ ಪ್ರಾರಂಭವಾದಾಗಲೇ ನಾವು ಇದು ಯಾವುದೋ ಒಂದು ಭಾಷೆಯ ಅಥವಾ ಪ್ಯಾನ್ ಇಂಡಿಯಾ ಸಿನಿಮಾವಲ್ಲ ಎಂದು ಹೇಳಿದ್ದೆವು. ಇದು ಎಲ್ಲ ಕಡೆ ಸಲ್ಲುವ ಭಾರತೀಯ ಚಿತ್ರವಾಗಬೇಕು ಎಂಬುದು ನಮ್ಮ ಆಸೆ. ಅದರಂತೆ ಈ ಚಿತ್ರ ಮೂಡಿಬಂದಿದ್ದು, ಬರೀ ಭಾರತದಲ್ಲಷ್ಟೇ ಅಲ್ಲ, ಹೊರದೇಶಗಳಲ್ಲೂ ಭಾರತೀಯ ಚಿತ್ರವಾಗಿ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡದ ನಿರ್ಮಾಣ ಸಂಸ್ಥೆಯೊಂದು, ಪ್ಯಾನ್ ಇಂಡಿಯಾ ಸ್ಟಾರ್ ಒಬ್ಬರ ಚಿತ್ರವೊಂದನ್ನು ಇಷ್ಟೊಂದು ದೊಡ್ಡ ಮಟ್ಟದಲ್ಲಿ ಮಾಡುತ್ತಿರುವುದು ಹೆಮ್ಮೆಯ ವಿಷಯ. ಕನ್ನಡದ ನಿರ್ಮಾಣ ಸಂಸ್ಥೆ, ನಿರ್ದೇಶಕರು, ತಂತ್ರಜ್ಞರು ಮತ್ತು ಕಲಾವಿದರು, ತೆಲುಗಿನ ಸ್ಟಾರ್ ನಟ ಪ್ರಭಾಸ್, ಮಲಯಾಳಂ ನಟ ಪೃಥ್ವಿರಾಜ್ ಸುಕುಮಾರನ್, ತಮಿಳಿನ ಶ್ರುತಿ ಹಾಸನ್ ಹೀಗೆ ಎಲ್ಲ ಭಾಷೆಯ ಕಲಾವಿದರು ಮತ್ತು ತಂತ್ರಜ್ಞರು ಇಲ್ಲಿದ್ದಾರೆ. ಎಲ್ಲರನ್ನೂ ಸೇರಿಸಿ ಭಾರತೀಯ ಸಿನಿಮಾ ಮಾಡಿದ್ದೇವೆ. ಇವತ್ತು ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರ ಸೆಪ್ಟೆಂಬರ್ 28ಕ್ಕೆ ಜಗತ್ತಿನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಎನ್ನುತ್ತಾರೆ.


ಸುಮಾರು 400 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ‘ಸಲಾರ್’ ಚಿತ್ರವನ್ನು ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಲಾಗಿದೆ. ವಿದೇಶಗಳಲ್ಲೂ ಚಿತ್ರದ ವಿಎಫ್ಎಕ್ಸ್ ಕೆಲಸ ನಡೆದಿದ್ದು, ಆಕ್ಷನ್ ದೃಶ್ಯಗಳಲ್ಲಿ ಬೇರೆ ದೇಶಗಳಿಂದ ಬಂದ ಹಲವು ನುರಿತ ಸಾಹಸ ಕಲಾವಿದರು ಕೆಲಸ ಮಾಡಿರುವುದು ಈ ಚಿತ್ರದ ವಿಶೇಷತೆಗಳಲ್ಲೊಂದು.
ದೊಡ್ಡ ಕ್ಯಾನ್ವಾಸ್ ಅಷ್ಟೇ ಅಲ್ಲ, ದೊಡ್ಡ ತಾರಾಗಣವೂ ಇರುವ ಈ ಚಿತ್ರದಲ್ಲಿ ಪ್ರಭಾಸ್ ಅವರಿಗೆ ನಾಯಕಿಯಾಗಿ ಶ್ರುತಿ ಹಾಸನ್ ನಟಿಸಿದ್ದು, ಮಿಕ್ಕಂತೆ ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದವರು ನಟಿಸಿದ್ದಾರೆ. ‘ಕೆಜಿಎಫ್’ ಚಿತ್ರಗಳಿಗೆ ಕೆಲಸ ಮಾಡಿದ ತಾಂತ್ರಿಕ ತಂಡವೇ ಈ ಚಿತ್ರಕ್ಕೂ ಕೆಲಸ ಮಾಡಿದ್ದು, ರವಿ ಬಸ್ರೂರು ಅವರ ಸಂಗೀತ, ಭುವನ್ ಗೌಡ ಛಾಯಾಗ್ರಹಣ, ಶಿವಕುಮಾರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.
‘ಸಲಾರ್ ಪಾರ್ಟ್ 1: ಸೀಸ್ ಫೈರ್ ಚಿತ್ರವು ಸೆಪ್ಟೆಂಬರ್ 28ರಂದು ಐದು ಭಾಷೆಗಳಲ್ಲಿ ಏಕಕಾಲಕ್ಕೆ ಜಗತ್ತಿನಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

Previous Post

ಕೆಎಸ್‌ಆರ್‌ಟಿಸಿ ಚಾಲಕ ಆತ್ಮಹತ್ಯೆ ಯತ್ನ, ರಾಜಕೀಯ ತಿರುವು ಪಡೆದ ಪ್ರಕರಣ

Next Post

ನಾಗಮಂಗಲದಲ್ಲಿ ‘ಕಾಂಗ್ರೆಸ್​ ದ್ವೇಷ ರಾಜಕಾರಣ’ ಸಿಎಂ ಹೇಳಿದ್ದೇನು..?

Related Posts

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?
Top Story

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

by ಪ್ರತಿಧ್ವನಿ
April 19, 2026
0

ಬೆಂಗಳೂರು : ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಮತ್ತು ರಣವೀರ್‌ ಸಿಂಗ್‌ ದಂಪತಿ ತಮ್ಮ ಎರಡನೇ ಮಗುವನ್ನು ಸ್ವಾಗತಿಸಲು ಸಜ್ಜಾಗುತ್ತಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ...

Read moreDetails
ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

April 16, 2026
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
Next Post
BREAKING : 5 ಕೆ.ಜಿ ಅಕ್ಕಿ ಉಳಿದ 5 ಕೆ.ಜಿ ಅಕ್ಕಿಗೆ ಹಣ ಕೊಡಲು ನಿರ್ಧಾರ..!

ನಾಗಮಂಗಲದಲ್ಲಿ ‘ಕಾಂಗ್ರೆಸ್​ ದ್ವೇಷ ರಾಜಕಾರಣ’ ಸಿಎಂ ಹೇಳಿದ್ದೇನು..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada