• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

‘ಗರಡಿ’ಯಿಂದ ಬಂತು ಮೂರನೇ ಹಾಡು

ಪ್ರತಿಧ್ವನಿ by ಪ್ರತಿಧ್ವನಿ
October 18, 2023
in Top Story, ಸಿನಿಮಾ
0
‘ಗರಡಿ’ಯಿಂದ ಬಂತು ಮೂರನೇ ಹಾಡು
Share on WhatsAppShare on FacebookShare on Telegram

ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಕರುನಾಡ ಕಲಾರಸಿಕರು ತಲೆದೂಗುತ್ತಿದ್ದಾರೆ. ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಮಾಡಿದ ಚಿತ್ರತಂಡ, ಪತ್ರಿಕಾಗೋಷ್ಠಿಯಲ್ಲಿ ಹಾಡಿನ ಬಗ್ಗೆ ವಿವರಣೆ ನೀಡಿತು.

ADVERTISEMENT

ಎರಡನೇ ಲಾಕ್‌ಡೌನ್ ಸಮಯದಲ್ಲೇ ಈ ಹಾಡು ಬರೆದಿದ್ದೆ ಎಂದು ಮಾತು ಆರಂಭಿಸಿದ ನಿರ್ದೇಶಕ ಹಾಗೂ ಗೀತರಚನೆಕಾರ ಯೋಗರಾಜ್ ಭಟ್, ಈ ಹಾಡು, ನನಗೆ ಹಾಗೂ ನಿರ್ಮಾಪಕರಿಗೆ ಅಚ್ಚುಮೆಚ್ಚು. ಬಾದಾಮಿ, ಬೆಂಗಳೂರು ಸೇರಿದಂತೆ ಅನೇಕ ಕಡೆ ಹಾಡಿನ ಚಿತ್ರೀಕರಣ ನಡೆದಿದೆ. ಹರಿಕೃಷ್ಣರ ಸಂಗೀತ, ವಿಜಯ್ ಪ್ರಕಾಶ್ ಗಾಯನ, ಸೂರ್ಯ, ಸೋನಾಲ್ ಮೊಂತೆರೊ ಹಾಗೂ ಸುಜಯ್ ಅವರ ಅಭಿನಯ ಚೆನ್ನಾಗಿದೆ. ‘ದಯಮಾಡಿ ಉರಿಸ ಬೇಡ ಬಡವನ ಹೃದಯ’ ಎಂಬ ಮೊದಲ ಸಾಲೇ ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ ಎಂದರು.

ಯೋಗರಾಜ್ ಭಟ್ ಅವರು ಬರೆದಿರುವ ಈ ಹಾಡು ಕೇಳಿದಾಗ ನನಗೆ “ಮುಂಗಾರು ಮಳೆ” ಚಿತ್ರದ ‘ಅನಿಸುತಿದೆ ಯಾಕೋ ಇಂದು’ ಹಾಡು ನೆನಪಾಯಿತು. ಈ ಹಾಡಿನ ಸಾಹಿತ್ಯ, ಗಾಯನ ಹಾಗೂ ನಟನೆ ಎಲ್ಲವೂ ಚೆನ್ನಾಗಿದೆ. ನವೆಂಬರ್ 1 ರಂದು ರಾಣಿಬೆನ್ನೂರಿನಲ್ಲಿ ಅದ್ದೂರಿಯಾಗಿ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಲಿದೆ. ದರ್ಶನ್ ಅವರು ಕಾರ್ಯಕ್ರಮಕ್ಕೆ ಬರಲಿದ್ದಾರೆ. ನವೆಂಬರ್ 10 ರಂದು ಚಿತ್ರ ಬಿಡುಗಡೆಯಾಗುತ್ತಿದೆ‌. ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕ ಹಾಗೂ ನಟ ಬಿ.ಸಿ.ಪಾಟೀಲ್.

ಈ ಹಾಡಿಗಾಗಿ ಸಾಕಷ್ಟು ಶ್ರಮ ಪಟ್ಟಿದ್ದೇನೆ. ‘ಬಡವನ ಹೃದಯ’ ಹಾಡು ಯೋಗರಾಜ್ ಭಟ್ ಅವರು ನನಗಾಗಿ ಬರೆದ ಹಾಗಿದೆ. ಈ ಹಾಡನ್ನು ದರ್ಶನ್ ಸರ್‌ಗೆ ಕೇಳಿಸಿದ್ದೆ.‌‌ ಹಾಡಿನ ಸಾಹಿತ್ಯವನ್ನು ಅವರು ಬಹಳ ಇಷ್ಟ ಪಟ್ಟಿದ್ದರು.‌ ವಿ.ಹರಿಕೃಷ್ಣ ಸಂಗೀತ, ನಿರಂಜನ್ ಬಾಬು ಛಾಯಾಗ್ರಹಣ, ವಿಜಯ್ ಪ್ರಕಾಶ್ ಗಾಯನ ಹಾಗೂ ಮದನ್ – ಹರಿಣಿ ಅವರ ನೃತ್ಯ ನಿರ್ದೇಶನ ಹಾಡಿನ ಹೈಲೆಟ್ ಎಂದು ನಾಯಕ ಸೂರ್ಯ ತಿಳಿಸಿದರು.

Tags: Bc PatilCinemagaradisandalwoodsong
Previous Post

ಯುದ್ಧಗಳಲ್ಲಿ ನೆಲಸಮವಾಗುವುದು ಕೇವಲ ಸ್ಥಾವರಗಳಲ್ಲ ಜಂಗಮ ರೂಪದ ಜೀವಪರತೆ – ನಾ ದಿವಾಕರ

Next Post

ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು 

Related Posts

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ
Top Story

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಆಯ್ಕೆ

by ಪ್ರತಿಧ್ವನಿ
February 11, 2026
0

ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ(Sudharani )ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಮೂಲ್ ಅಧ್ಯಕ್ಷ ಡಿ.ಕೆ....

Read moreDetails
ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

ICC-BCCI: ಅಣ್ತಮ್ಮಾಸ್‌ಗೆ ಮಂಡಿಯೂರಿದ ಐಸಿಸಿ- ಬಿಸಿಸಿಐ..?

February 11, 2026
2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು

February 11, 2026
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
Next Post
ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು 

ಕಾವೇರಿ ಮಾತೆಯನ್ನು ಕಣ್ತುಂಬಿಕೊಂಡ ಸಾವಿರಾರು ಭಕ್ತರು 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada