• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸಾಲುಮರದ ತಿಮ್ಮಕ್ಕ ಅವರಿಂದ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಶೀರ್ಷಿಕೆ ಗೀತೆ ಅನಾವರಣ..

ಪ್ರತಿಧ್ವನಿ by ಪ್ರತಿಧ್ವನಿ
April 26, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಮಡೆನೂರ್ ಮನು ಅಭಿನಯದ‌ ಈ ಚಿತ್ರ ಮೇ 23 ರಂದು ಬಿಡುಗಡೆ.

ADVERTISEMENT

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” (Comedy Kiladigalu) ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಶೀರ್ಷಿಕೆ ಗೀತೆಯನ್ನು ಡಾ||ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಶತಾಯುಷಿ ಸಾಲುಮರದ ತಿಮ್ಮಕ್ಕ (Salumarada Thimmakka) ಅನಾವರಣ‌ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ಸಂದರ್ಭದಲ್ಲಿ ಚಿತ್ರದ ಬಿಡುಗಡೆ ದಿನಾಂಕ ಕೂಡ ಘೋಷಣೆಯಾಯಿತು. ಬಹು ನಿರೀಕ್ಷಿತ ಈ ಚಿತ್ರ ಮೇ 23 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“ಕುಲದಲ್ಲಿ ಕೀಳ್ಯಾವುದೋ” (Kuladalli Keelyavudo) ಸರ್ವಕಾಲಿಕ ಜನಪ್ರಿಯ ಗೀತೆ.‌ ಇಂತಹ ಜನಪ್ರಿಯ ಗೀತೆಯ ಸಾಲನಿಟ್ಟುಕೊಂಡು ಹಾಡು ಬರೆಯುವುದು ಅಷ್ಟು ಸುಲಭದ ಮಾತಲ್ಲ. ಈ ಹಾಡನ್ನು ಯೋಗರಾಜ್ ಭಟ್ ಅವರ ಹತ್ತಿರ ಬರೆಸುವುದು ಅಂತ ನಿರ್ಧಾರವಾಯಿತು. ಆದರೆ ಅವರು “ಮನದ ಕಡಲು” ಚಿತ್ರದ ಬಿಡುಗಡೆಯ ಬ್ಯುಸಿಯಲ್ಲಿದ್ದರು. ಹಾಗಾಗಿ ಅವರೆ ನನಗೆ ಈ ಹಾಡನ್ನು ಬರೆಯುವಂತೆ ಹೇಳಿದರು. ಆನಂತರ ನಾನೇ ಈ ಹಾಡು ಬರೆದೆ. ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಗೂ ಈ ಹಾಡು ಇಷ್ಟವಾಯಿತು. ಚೇತನ್ ಅವರು ಹಾಡಿರುವ ಈ ಶೀರ್ಷಿಕೆಗೀತೆಯಲ್ಲಿ ಯೋಗರಾಜ್ ಭಟ್ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಎರಡು ಹಾಡುಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ಮಾಪಕರು ಯಾವುದೇ ಕೊರತೆ ಬಾರೆದ ಹಾಗೆ ನಿರ್ಮಾಣ‌ ಮಾಡಿದ್ದಾರೆ. ಚಿತ್ರತಂಡದ ಸಹಕಾರದಿಂದ ಒಂದೊಳ್ಳೆ ಚಿತ್ರ ಮೇ 23 ರಂದು ನಿಮ್ಮ ಮುಂದೆ ಬರೆಲಿದೆ ಎಂದು ನಿರ್ದೇಶಕ ರಾಮ್ ನಾರಾಯಣ್ ತಿಳಿಸಿದರು.

ಡಾ||ರಾಜಕುಮಾರ್ ಅವರ ಜನ್ಮದಿನದಂದು ಹಿರಿಯರಾದ ಸಾಲುಮರದ ತಿಮ್ಮಕ್ಕ ಅವರು ಈ ಹಾಡನ್ನು ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಅವರಿಗೆ ವಿಶೇಷ ಧನ್ಯವಾದ ಎಂದು ಮಾತನಾಡಿದ ಯೋಗರಾಜ್ ಭಟ್, ರಾಜಕುಮಾರ್ ಅವರ ಹುಟ್ಟುಹಬ್ಬದ ದಿನ ಅವರ ಸೂಪರ್ ಹಿಟ್ ಗೀತೆಯನ್ನೇ ಶೀರ್ಷಿಕೆಯಾಗಿ ಹೊಂದಿರುವ ಈ ಚಿತ್ರದ ಟೈಟಲ್ ಸಾಂಗ್ ಇಂದು ಬಿಡುಗಡೆಯಾಗಿದೆ. ನಾನು ಈ ಹಾಡಿನಲ್ಲಿ ಅಭಿನಯಿಸಿದ್ದೇನೆ. ನಿರ್ದೇಶಕರು ಏನು ಹೇಳಿದಾರೊ ಅದನ್ನು ಮಾಡಿದ್ದೇನೆ. ಇತ್ತೀಚೆಗೆ ಈ ಚಿತ್ರವನ್ನು ನೋಡಿದಾಗ ಎಲ್ಲಾ ಕಲಾವಿದರ ಅಭಿನಯ ಮನಸ್ಸಿಗೆ ಹತ್ತಿರವಾಯಿತು. ತಂತ್ರಜ್ಞರ ಕಾರ್ಯವೈಖರಿಯೂ ಇಷ್ಟವಾಯಿತು. ರಾಮ್ ನಾರಾಯಣ್ ಅವರ ನಿರ್ದೇಶನದ ಬಗ್ಗೆ ಹೇಳುವ ಹಾಗೆ ಇಲ್ಲ. ಇನ್ನೂ, ಗ್ರಾಮೀಣ ಪ್ರತಿಭೆ ಮಡೆನೂರ್ ಮನು. ಆತನನ್ನು ಈ ಚಿತ್ರದ ಮೂಲಕ ನಾಯಕನನ್ನಾಗಿ ಮಾಡಿರುವ ನಿರ್ಮಾಪಕರಾದ‌ ಸಂತೋಷ್ ಕುಮಾರ್ ಹಾಗೂ ವಿದ್ಯಾ ಅವರಿಗೆ ಧನ್ಯವಾದ ಎಂದರು.

ಚಿತ್ರ ಆರಂಭದಿಂದಲೂ ನಮಗೆ ತಾವು ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇಂದು ಟೈಟಲ್ ಸಾಂಗ್ ಬಿಡುಗಡೆಯಾಗಿದೆ. ಚಿತ್ರ ಮೇ 23 ತೆರೆಗೆ ಬರಲಿದೆ. ನಿಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಸಂತೋಷ್ ಕುಮಾರ್.

ಇಂದು ನಮ್ಮ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆಯಾಗಿದೆ. ಚಿತ್ರ ಮೇ 23 ಬಿಡುಗಡೆಯಾಗಲಿದೆ. ಯೋಗರಾಜ್ ಭಟ್ ಹಾಗೂ ನಿರ್ಮಾಪಕರ ಸಂತೋಷ್ ಕುಮಾರ್ ಅವರಿಗೆ ನಾನು ಆಬಾರಿ. ನಿರ್ದೇಶಕ ರಾಮ್ ನಾರಾಯಣ್ ಅವರ ಬಗ್ಗೆ ಎಷ್ಟು ಹೇಳಿದರೂ ಕಡಿಮೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಾಯಕ ಮಡೆನೂರ್ ಮನು.

ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಒಂದೊಳ್ಳೆ ಚಿತ್ರದಲ್ಲಿ ಅಭಿನಯಿಸಿರುವ ಖುಷಿಯಿದೆ ಎಂದರು ನಾಯಕಿ ಮೌನ ಗುಡ್ಡಮನೆ.

ಹಿರಿಯ ನಟರಾದ ಉಮೇಶ್(Umesh), ಕರಿಸುಬ್ಬು(Karisubbu), ಡ್ರ್ಯಾಗನ್‌ ಮಂಜು, ಸೀನ, ಸಂಭಾಷಣೆ ಬರೆದಿರುವ ವಿಜಯಾನಂದ್ ಹಾಗೂ ಹಾಡಿನಲ್ಲಿ ಅಭಿನಯಿಸಿರುವ ನಟಿ ಯಶಸ್ವಿನಿ (Yashsvini) ಮುಂತಾದವರು ಚಿತ್ರದ ಕುರಿತು ಮಾತನಾಡಿದರು.

ಯೋಗರಾಜ್ ಭಟ್ (Yogaraj Bhat) ಹಾಗೂ ಇಸ್ಲಾಮುದ್ದೀನ್ (Islamuddin) ಅವರು ಈ ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ (K Ramanarayan)ನಿರ್ದೇಶನ ಮಾಡಿದ್ದಾರೆ. ಯೋಗರಾಜ್ ಭಟ್ ಹಾಗೂ ಜಯಂತ್ ಕಾಯ್ಕಿಣಿ (Jayanth Kaykani) ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡಿದ್ದಾರೆ. ಮಡೆನೂರ್ ಮನು(Madenur Manu), ಮೌನ ಗುಡ್ಡೆಮನೆ(Mouna Guddemane), ಶರತ್ ಲೋಹಿತಾಶ್ವ(Sharath Lohitashwa), ತಬಲನಾಣಿ(Tabala Nani), ಸೋನಾಲ್ ಮೊಂತೆರೊ(Sonal Montero), ಕರಿಸುಬ್ಬು(Karisubbu), ಡ್ರ್ಯಾಗನ್‌ ಮಂಜು(Dragon Manju), ಸೀನ (Seena) ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

Tags: Comedy KiladigaluDragon Manjukannada cinemaKannada movieKarisubbuKuladalli KeelyavudoMadenur ManuMouna GuddemaneSalumarada ThimmakkasandalwoodSharath LohitashwaSonal MonteroTabala NaniYogaraj Bhat
Previous Post

ಸಿಂಧೂ ನದಿ ಡೈವರ್ಟ್ ಮಾಡಿದ್ರೆ ಸೇನೆ ಮೂಲಕ ಉತ್ತರ ಕೊಡ್ತೀವಿ – ಭಾರತಕ್ಕೆ ಪಾಕ್ ಪ್ರಧಾನಿ ಷರೀಫ್ ಪೊಳ್ಳು ಬೆದರಿಕೆ 

Next Post

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
0

ನವದೆಹಲಿ: ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ...

Read moreDetails
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Next Post

ರಾಜ್ಯದಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ವಾಪಸ್ಸು ಕಳಿಸಲು ಕ್ರಮ ಕೈಗೊಳ್ಳಲಾಗುವುದು- ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ
Top Story

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

by ಪ್ರತಿಧ್ವನಿ
February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ
Top Story

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

by ಪ್ರತಿಧ್ವನಿ
February 1, 2026
ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ
Top Story

ಕೇಂದ್ರದಿಂದ ಕರ್ನಾಟಕಕ್ಕೆ ಪದೇ ಪದೇ ಅನ್ಯಾಯ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

by ಪ್ರತಿಧ್ವನಿ
February 1, 2026
400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

ರಾಜ್ಯಕ್ಕೆ ಹೆಚ್ಚಿನ ತೆರಿಗೆ ಪಾಲು: ಕಾಂಗ್ರೆಸಿಗರ ಟೀಕೆಗೆ ಕುಮಾರಸ್ವಾಮಿ ಖಡಕ್‌ ಉತ್ತರ

February 1, 2026
Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

Vijayapura: 27 ಭೂ ಕಬಳಿಕೆ ಪ್ರಕರಣಗಳಲ್ಲಿ 200 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!