• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ ರಾಧಿಕಾ ಕುಮಾರಸ್ವಾಮಿ ನಿರ್ಮಾಣ

ಪ್ರತಿಧ್ವನಿ by ಪ್ರತಿಧ್ವನಿ
September 23, 2024
in Top Story, ಇತರೆ / Others
0
Share on WhatsAppShare on FacebookShare on Telegram

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ “ಭೈರಾದೇವಿ”Bhairadevi ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. (Releasing nationwide on October 3)ಅದರ ಪೂರ್ವಭಾವಿಯಾಗಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ಅನು ಪ್ರಭಾಕರ್, ನಿರ್ದೇಶಕ ಶ್ರೀಜೈ, ನೃತ್ಯ ನಿರ್ದೇಶಕ ಮೋಹನ್, ಸಹ ನಿರ್ಮಾಪಕರಾದ ರವಿರಾಜ್, ಯಾದವ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ADVERTISEMENT

ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ನಿರ್ದೇಶಕ ಶ್ರೀಜೈ ನಮ್ಮ ಮನೆಗೆ ಬಂದು ಕಥೆ ಹೇಳಿದರು‌. ಕಥೆ ಇಷ್ಟಾವಾಗಿ, ಈ ಚಿತ್ರ ನಿರ್ಮಾಣಕ್ಕೆ ಹಾಗೂ ನಟಿಸಲು ಒಪ್ಪಿಕೊಂಡೆ. ಈ ಚಿತ್ರ ಆರಂಭವಾದಗಿನಿಂದ ಬಿಡುಗಡೆಯವರೆಗೂ ಸಾಕಷ್ಟು ಅಡೆತಡೆಗಳಾಗಿದೆ‌. ಹಾಗಾಗಿ ನಾನು ಚಿತ್ರದ ಬಿಡುಗಡೆ ಯೋಚನೆ ಮಾಡಿರಲಿಲ್ಲ‌. ಕಳೆದ ಒಂದು ತಿಂಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ಸಿಕ್ಕ ಗಂಡ ಹೆಂಡತಿ ಹೇಳಿದ ಮಾತೊಂದರ ಸ್ಪೂರ್ತಿಯಿಂದ ಚಿತ್ರವನ್ನು ಒಂದು ತಿಂಗಳೊಳಗೆ ಬಿಡುಗಡೆ ಮಾಡೋಣ ಎಂದು ನನ್ನ ಅಣ್ಣನಿಗೆ ಹೇಳಿದೆ. ಈ ಸಂದರ್ಭದಲ್ಲಿ ಒಂದು ಮಾತು ಹೇಳುತ್ತೇನೆ. “ಭೈರಾದೇವಿ” ಚಿತ್ರ ಪ್ರೇಕ್ಷಕರಿಗೆ ಇಷ್ಟ ಆದರೆ ಇನ್ನೊಂದು ಸಿನಿಮಾ ಮಾಡುತ್ತೀನಿ. ಇಷ್ಟ ಆಗಲಿಲ್ಲ ಎಂದರೆ ಚಿತ್ರರಂಗದಿಂದ ದೂರ ಆಗಿಬಿಡುತ್ತೀನಿ. ಇದು ದೊಡ್ಡ ಯಶಸ್ಸಾಗುತ್ತದೆ ಎಂಬ ನಂಬಿಕೆ ನನಗಿದೆ. ಕುಟುಂಬ ಸಮೇತ ನೋಡುವಂತಹ ಸಿನಿಮಾ ಇದು. ಈ ಚಿತ್ರದ ಸಂಪೂರ್ಣ ಕ್ರೆಡಿಟ್‍ ನಿರ್ದೇಶಕರಿಗೆ ಸಲ್ಲಬೇಕು’ ಎಂದರು.

ನಾನು ಈ ಚಿತ್ರದಲ್ಲಿ ಪೊಲೀಸ್‍ ಅಧಿಕಾರಿ. ಅರವಿಂದ್ ನನ್ನ ಪಾತ್ರದ ಹೆಸರು. ಯಾವುದೇ ತರಹದ ರೌಡಿಗಳನ್ನು ಸದ್ದೆ ಬಡೆಯುವ ಖಡಕ್ ಪೊಲೀಸ್ ಆಫೀಸರ್ ನಾನು. ಆದರೆ, ಈ ಚಿತ್ರದಲ್ಲಿ ನನ್ನಗಿರುವ ವೈರಿ ಈ ರಾಜ್ಯದವರಲ್ಲ, ಈ ದೇಶದವರಲ್ಲ, ಬದಲಿಗೆ ಈ ಲೋಕದಲ್ಲಿರುವವರೇ ಅಲ್ಲ. ಬೇರೆ ಲೋಕದಿಂದ ಬಂದ ಒಂದು ಶಕ್ತಿಯ ವಿರುದ್ಧ ಹೋರಾಡಬೇಕು. ಇನ್ನು ಈ ಚಿತ್ರದ ಟ್ರೇಲರ್ ನೋಡಿದಾಗ, ನನಗೆ “ಆಪ್ತಮಿತ್ರ” ಚಿತ್ರ ನೆನಪಾಯಿತು. ರಾಧಿಕಾ ಕುಮಾರಸ್ವಾಮಿ ನಿರ್ಮಾಪಕಿ ಹಾಗೂ ನಾಯಕಿಯಾಗಿ ಎರಡು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕಾಳಿ ಪಾತ್ರದಲ್ಲಂತೂ ಅವರ ಅಭಿನಯ ಮನೋಜ್ಞ. ಅವರು ಆ ಪಾತ್ರದಲ್ಲಿ ಅಭಿನಯಿಸುತ್ತಿದ್ದಾಗ ಅವರೊಂದಿಗೆ ಮಾತನಾಡಲಿಕ್ಕೆ ಭಯವಾಗುತ್ತಿತ್ತು ಎಂದರು ನಟ ರಮೇಶ್ ಅರವಿಂದ್.

ಈ ಚಿತ್ರ ಇಷ್ಟು ಅದ್ದೂರಿಯಾಗಿ ಬರಲು ಕಾರಣ ನಮ್ಮ‌ ನಿರ್ಮಾಪಕರು‌ ಮೊದಲು ಅವರಿಗೆ ಧನ್ಯವಾದ ಹೇಳುತ್ತೇನೆ. ಇನ್ನು, ಕಲಾವಿದರಿಗೆ ನಾನು ಬಹಳ ತೊಂದರೆ ಕೊಟ್ಟಿದ್ದೇನೆ. ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ಅನು ಪ್ರಭಾಕರ್, ರವಿಶಂಕರ್, ರಂಗಾಯಣ ರಘು ಹೀಗೆ ಎಲ್ಲಾ ಕಲಾವಿದರು ತಮ್ಮ ಪಾತ್ರಗಳಿಗೆ ಜೀವ ತುಂಬಿದ್ದಾರೆ. ತಂತ್ರಜ್ಞರ ಕಾರ್ಯವೈಖರಿಯೂ‌ ಅದ್ಭುತವಾಗಿದೆ ಎಂದು ನಿರ್ದೇಶಕ ಶ್ರೀಜೈ ತಿಳಿಸಿದರು.

ಹೃದಯ ಹೃದಯ” ಚಿತ್ರ ತೆರೆಕಂಡು ಇಪ್ಪತ್ತೈದು ವರ್ಷಗಳಾಗಿದೆ. ನಾನು ಈಗ ನನ್ನ‌ ಸಿನಿ ಜರ್ನಿಯ ರಜತ ಮಹೋತ್ಸವ ಆಚರಿಸುತ್ತಿದ್ದೇನೆ. ರಮೇಶ್ ಅವರ ಜೊತೆ ಮೊದಲ ಚಿತ್ರದಲ್ಲಿ ಅಭಿನಯಿಸಿದ್ದೆ. ಈಗ ಈ ಚಿತ್ರದಲ್ಲೂ ಅವರ ಜೊತೆ ನಟಿಸಿದ್ದೇನೆ. ರಾಧಿಕಾ ಕುಮಾರಸ್ವಾಮಿ ಅವರು ಅದ್ದೂರಿಯಾಗಿ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಶ್ರೀಜೈ ಅವರ ಕಥೆಯೂ ಬಹಳ ಚೆನ್ನಾಗಿದೆ ಎಂದರು ಅನು ಪ್ರಭಾಕರ್.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'anu prabhakarBhairadevi" film trailer releaseDirector SreejayRadhika Kumaraswamyramesh aravindRangayana RaghuRavi Shankar
Previous Post

ಮಂಜು ಕವಿದ ವಾತಾವರಣ’ಸಂಜು’ ಬದುಕಿನ ಅನಾವರಣ

Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ:ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ರೇಣುಕಾಸ್ವಾಮಿ ಕೊಲೆ ಪ್ರಕರಣ:ಇಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada