ಜಬಲ್‌ಪುರ (ಮಧ್ಯಪ್ರದೇಶ):ವೇಗವಾಗಿ ಬಂದ ಟ್ರಕ್ (speeding truck)ಆಟೋ ರಿಕ್ಷಾಕ್ಕೆ ಡಿಕ್ಕಿ (Collision with a rickshaw)ಹೊಡೆದು ವಾಹನದ ಮೇಲೆ ಬಿದ್ದು ಪಲ್ಟಿಯಾದ ಪರಿಣಾಮ ಮಗು ಸೇರಿದಂತೆ ಏಳು ಕಾರ್ಮಿಕರು ಮೃತಪಟ್ಟು, ಆರು ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಬುಧವಾರ ನಡೆದಿದೆ.ಮಜ್ಗವಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿಹೋರಾ-ಮಜ್ಗವಾನ್ ರಸ್ತೆಯ ನುಂಜಾ ಖಮ್ಹರಿಯಾ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.ಆಟೋರಿಕ್ಷಾದ ಎಲ್ಲಾ ಪ್ರಯಾಣಿಕರು, ಪ್ರತಾಪುರ್ ನಿವಾಸಿಗಳು, ಇಟಾರ್ಸಿಗೆ ರೈಲು ಹತ್ತಲು ಸಿಹೋರಾ ರೈಲು ನಿಲ್ದಾಣಕ್ಕೆ ಹೋಗುತ್ತಿದ್ದರು.
ಈ ಘಟನೆಯು ಪ್ರದೇಶದಲ್ಲಿ ಪ್ರತಿಭಟನೆಗೆ ಕಾರಣವಾಯಿತು, ಇದರಿಂದ ಕೋಪಗೊಂಡ ಗ್ರಾಮಸ್ಥರು ರಸ್ತೆ-ತಡೆಯನ್ನು ಮಾಡಿದರು ಮತ್ತು ಸಿಹೋರಾ-ಮಜ್ಗವಾನ್ ರಸ್ತೆಯಲ್ಲಿ ಸಂಚಾರವನ್ನು ನಿಲ್ಲಿಸಿದರು. ಅಪಘಾತದ ಬಗ್ಗೆ ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಆಗ್ರಹಿಸಿದರು. ಮಾಹಿತಿ ಮೇರೆಗೆ ಮಜ್ಗವಾನ್ ಪೊಲೀಸ್ ಠಾಣೆಯ ತಂಡ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಲು ಯತ್ನಿಸಿತು.
ಎಲ್ಲಾ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಜಬಲ್ಪುರದ ನೇತಾಜಿ ಸುಭಾಷ್ ಚಂದ್ರ ಬೋಸ್ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.ಪೊಲೀಸರು ತನಿಖೆ ಆರಂಭಿಸಿದ್ದು, ಟ್ರಕ್ ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆಯೇ ಅಥವಾ ಇನ್ನಾವುದೇ ಕಾರಣದಿಂದ ಅಪಘಾತ ಸಂಭವಿಸಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಡಿಕ್ಕಿಯ ಪರಿಣಾಮವು ತುಂಬಾ ತೀವ್ರವಾಗಿದ್ದು, ಆಟೋರಿಕ್ಷಾವು ಸಂಪೂರ್ಣ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.