ಮೈಸೂರಿನ(Mysore) ಶ್ರೀಕ್ಷೇತ್ರ ಸುತ್ತೂರಿನಲ್ಲಿ ನಡೆಯುತ್ತಿರುವ ಆದಿಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ(Suttur Jathre) ಕೇಂದ್ರ ಗೃಹ ಮತ್ತು ಸಹಕಾರ ಸಚಿವ(Home and Cooperation Minister) ಅಮಿತ್ ಶಾ(AmitShah) ಅವರು ಫೆ.11ರಂದು ಭಾಗವಹಿಸಲಿದ್ದಾರೆ.
ಸುತ್ತೂರು ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಫೆ.10ರ ಶನಿವಾರ ರಾತ್ರಿಯೇ ಮೈಸೂರಿಗೆ ಆಗಮಿಸುವ ಸಾಧ್ಯತೆ ಇದೆ. ಫೆ.11ರಂದು ಶ್ರೀ ಸುತ್ತೂರು ಕ್ಷೇತ್ರಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಅವರು, ಮಧ್ಯಾಹ್ನ 12ಕ್ಕೆ ನಡೆಯುವ ಸಮಾರಂಭದಲ್ಲಿ ಸುತ್ತೂರು ಕ್ಷೇತ್ರದಲ್ಲಿ ನಿರ್ಮಿಸಿರುವ ಪಾರ್ವತಮ್ಮ ಮತ್ತು ಡಾ. ಶಾಮನೂರು ಶಿವಶಂಕರಪ್ಪ ಅತಿಥಿಗೃಹವನ್ನು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಉದ್ಘಾಟಿಸಲಿದ್ದಾರೆ.

ಈ ಮೊದಲು ಅಮಿತ್ ಶಾ ಅವರ ಕಾರ್ಯಕ್ರಮ ಫೆಬ್ರವರಿ 10ರ ಶನಿವಾರದಂದು ನಿಶ್ಚಯವಾಗಿತ್ತು. ಆದರೆ ಸಂಸತ್ ಅಧಿವೇಶನ ಮುಂದುವರಿದಿರುವ ಕಾರಣ ಈ ಕಾರ್ಯಕ್ರಮವನ್ನು ಒಂದು ದಿನ ಮುಂದೂಡಲಾಗಿದೆ. ಅಮಿತ್ ಶಾ ಅವರು ಭಾಗವಹಿಸಲಿರುವ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಕೇಂದ್ರ ಸಚಿವ ಪ್ರಲ್ಹಾದ್ ವಿ. ಜೋಷಿ, ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಸಂಸದ ಡಾ. ಪ್ರಭಾಕರ್ ಕೋರೆಯವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
#SutturJathre #AmitShah #UnionHomeMinister #MinisterofCooperation