ತಾಕತ್ತು ಇದ್ದರೆ ಸಚಿವ ಡಾ.ಅಶ್ವತ್ಥನಾರಾಯಣ ಅವರು ನನ್ನ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ ಎಂದು ಇದೇ ವೇಳೆ ಹೆಚ್.ಡಿ.ಕುಮಾರಸ್ವಾಮಿ ನೇರ ಸವಾಲು ಹಾಕಿದ್ದಾರೆ.
ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಹಮ್ಮಿಕೊಂಡಿದ್ದ ʼಜನತಾ ಜಲಧಾರೆʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಏನೇ ದಾಖಲೆ ಇದ್ದರೂ ಬಿಡುಗಡೆ ಮಾಡಲಿ. ನಾನು ಸಮ್ಮಿಶ್ರ ಸರ್ಕಾರದಲ್ಲಿ ಅವರ ರೀತಿ ಲೂಟಿ ಹೊಡೆದಿಲ್ಲ. ಲೂಟಿ ಮಾಡ್ತಿರುವವರು ಅವರು. ಅವರಿಗೆ ತಾಕತ್ತು ಇದ್ದರೆ ನಾಳೆ ಬೆಳಗ್ಗೆಯೇ ನನ್ನ ವಿರುದ್ಧದ ದಾಖಲೆ ಬಿಡುಗಡೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಸವಾಲು ಹಾಕಿದರು.

“ಪ್ರಾಧ್ಯಾಪಕರ ನೇಮಕಾತಿಯಲ್ಲಿ 450 ಕೋಟಿ ಅಕ್ರಮ ಆಗಿದೆ. ನೀವು ನನ್ನ ಬಗ್ಗೆ ಮಾತನಾಡಿದರೆ ಹುಷಾರ್, ನನ್ನ ಬಳಿ ಇರುವ ದಾಖಲೆಗಳು ನಿಮ್ಮ ಬಳಿಯೂ ಇಲ್ಲ. ಮಾತನಾಡುವ ಮುನ್ನ ಎಚ್ಚರಿಕೆಯಿಂದ ಮಾತನಾಡಿ” ಎಂದು ಸಚಿವರಿಗೆ ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ಕೊಟ್ಟರು.