• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತವರಣವಿದೆ: ಸಿಎಂ ಸಿದ್ದರಾಮಯ್ಯ

Any Mind by Any Mind
July 17, 2023
in ರಾಜಕೀಯ
0
Congress Guarantees ; ನಾಳೆ ಸಂಪುಟ ಸಭೆಯಲ್ಲಿ ಜಾರಿ ಆಗುತ್ತಾ ಕಾಂಗ್ರೆಸ್‌ ನ ಐದು ಗ್ಯಾರಂಟಿಗಳು..?
Share on WhatsAppShare on FacebookShare on Telegram

ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು.

ADVERTISEMENT

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ ಎಂದು ವಿವರಿಸಿದರು.

ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಫಾಕ್ಸ್ ಕಾನ್ ಕಂಪನಿಯ ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ನೆಟ್ (ಎಫ್ಐಟಿ) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ ಸೃಷ್ಟಿಸಲಿದ್ದು ಘಟಕ ಸ್ಥಾಪನೆಗೆ 100 ಎಕರೆ ಜಾಗ ಬೇಕಾಗುತ್ತದೆ. ತುಮಕೂರಿನ ಜಪಾನ್ ಇಂಡಸ್ಟ್ರಿಯಲ್ ಟೌನ್ ಷಿಪ್ ನಲ್ಲಿ ನಿಯೋಗದ ಸದಸ್ಯರು ಇಂದೇ ಲಭ್ಯ ಭೂಮಿಯನ್ನು ವೀಕ್ಷಿಸಲಿದ್ದಾರೆ.

ಫೋನ್ ಪರದೆ, ಹೊರ ಕವಚ ಹಾಗೂ ಇತರ ಯಾಂತ್ರೀಕೃತ ಬಿಡಿಭಾಗಗಳನ್ನು ಎಫ್ಐಐ ಘಟಕ ತಯಾರಿಸಲಿದೆ. ದೇವನಹಳ್ಳಿ ಬಳಿಯ ಉದ್ದೇಶಿತ ಐಫೋನ್ ತಯಾರಿಕಾ ಘಟಕವು ‘ಎಂಡ್ ಅಸೆಂಬ್ಲಿ’ ಘಟಕವಾಗಿದ್ದರೆ, ಎಫ್ ಐಐ ಘಟಕವು ಅದಕ್ಕೆ ಪೂರಕ ಘಟಕವಾಗಿರಲಿದೆ. ಈ ಸಂದರ್ಭದಲ್ಲಿ ಭಾರಿ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸೆಮಿ‌ ಕಂಡಕ್ಟರ್ ಸೇರಿದಂತೆ ಬೇರೆ ಯಾವುದೇ ಉದ್ದಿಮೆಯನ್ನು ಸ್ಥಾಪಿಸಲು ಬಯಸಿದರೆ ಅಗತ್ಯ ಎಲ್ಲಾ ನೆರವನ್ನೂ ಒದಗಿಸುವ ಭರವಸೆ ನೀಡಿದರು.

ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತಿಯಲ್ಲಿ ಸಭೆ ನಡೆಯಿತು.ಎಫ್ಐಐ ಪ್ರಧಾನ ವ್ಯವಸ್ಥಾಪಕರುಗಳಾದ ಮೈಕೇಲ್ ಲಿಂಗ್, ಜೇಸನ್ ಲಾವು, ಆಂಜಿ ಲಿನ್, ನಿರ್ದೇಶಕರಾದ ಸೆಂಥಿಲ್ ಕುಮಾರ, ಭರತ್ ದಂಡಿ ಮತ್ತಿತರರು ಇದ್ದರು.ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.

Tags: HKPatiliPhonePriyank Khargesiddaramaiah
Previous Post

ಸಾಮಾಜಿಕ ವ್ಯಾಧಿಗೆ ಕಾನೂನಾತ್ಮಕ ಚಿಕಿತ್ಸೆ ಸಾಧ್ಯವೇ ? – ಭಾಗ 1

Next Post

ಕುಮಾರಸ್ವಾಮಿ ವಿಪಕ್ಷ ನಾಯಕ ಫಿಕ್ಸ್​.. ಶುಭ ಕೋರಿದ ಸಚಿವರು..

Related Posts

ಸಂಧಾನಕ್ಕೆ ರೆಡಿಯಾಗ್ತಾರಾ ಸಿಎಂ ವಿಜಯ್‌ ಪತ್ನಿ? ದಾಂಪತ್ಯ ಸರಿಯಾಗಲು ಖಡ್ಗ ಕಾಣಿಕೆ ಕೊಟ್ರಾ ದಳಪತಿ!
Top Story

ಸಂಧಾನಕ್ಕೆ ರೆಡಿಯಾಗ್ತಾರಾ ಸಿಎಂ ವಿಜಯ್‌ ಪತ್ನಿ? ದಾಂಪತ್ಯ ಸರಿಯಾಗಲು ಖಡ್ಗ ಕಾಣಿಕೆ ಕೊಟ್ರಾ ದಳಪತಿ!

by ಪ್ರತಿಧ್ವನಿ
June 13, 2026
0

ತಮಿಳುನಾಡು ಸಿಎಂ ವಿಜಯ್‌ ಅವರ ಬದುಕಲ್ಲಿ ಹೊಸ ಭರವಸೆ ಮೂಡುತ್ತಾ? ಇಂಥದ್ದೊಂದು ಪ್ರಶ್ನೆ ಸದ್ಯ ಗಿರಕಿ ಹೊಡೆಯುತ್ತಿದೆ. ಅದಕ್ಕೆ ಕಾರಣ, ವಿಚ್ಛೇದನ. ಹೌದು, ಕಳೆದ ಕೆಲವು ತಿಂಗಳುಗಳಿಂದ...

Read moreDetails
ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

ಜೈವಿಕ ತಂತ್ರಜ್ಞಾನ, ಕೈಗಾರಿಕೆ – ಶೈಕ್ಷಣಿಕ ಕ್ಷೇತ್ರದ ಬಲವರ್ಧನೆಗಾಗಿ 27 ಕೋಟಿಗೂ ಅಧಿಕ ಅನುದಾನ : ಪ್ರಿಯಾಂಕ್‌ ಖರ್ಗೆ

June 13, 2026
Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

Actor Doddanna: ಸಾವು ವದಂತಿ ಬೆನ್ನಲ್ಲೇ ದೇವಾಲಯ ಸುತ್ತಿದ ನಟ ದೊಡ್ಡಣ್ಣ

June 13, 2026
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಇದು ಸಾಮಾನ್ಯ ಮನುಷ್ಯನ ಬಜೆಟ್ ಉಳಿವಿನ ಹೋರಾಟ: ಬಿಜೆಪಿ ವಿರುದ್ಧ ಸುರ್ಜೆವಾಲ ಕಿಡಿ

June 13, 2026
ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

ಭಾಷಾ ಸೌಜನ್ಯ-ಅಧಿಕಾರ ದರ್ಪ ಮತ್ತು ಉತ್ತರದಾಯಿತ್ವ..!

June 13, 2026
Next Post
ಕರ್ನಾಟಕದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿ ಅನಿವಾರ್ಯವೇ..? ಏನಿದು ಲೆಕ್ಕಾಚಾರ..?

ಕುಮಾರಸ್ವಾಮಿ ವಿಪಕ್ಷ ನಾಯಕ ಫಿಕ್ಸ್​.. ಶುಭ ಕೋರಿದ ಸಚಿವರು..

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada