• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮಂತ್ರಿ ಪದವಿಗೆ ಶಿಷ್ಟಾಚಾರವಿದೆ, ಹಾಗಂತ ಕೊಂಬು, ಕೋಡು ಇರಲ್ಲ‌ : ಡಿಕೆಶಿಗೆ ಕುಮಾರಸ್ವಾಮಿ ಟಾಂಗ್..

ಪ್ರತಿಧ್ವನಿ by ಪ್ರತಿಧ್ವನಿ
January 9, 2026
in ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಮಂತ್ರಿ ಪದವಿಗೆ ಶಿಷ್ಟಾಚಾರವಿದೆ, ಹಾಗಂತ ಕೊಂಬು, ಕೋಡು ಇರಲ್ಲ‌ : ಡಿಕೆಶಿಗೆ ಕುಮಾರಸ್ವಾಮಿ ಟಾಂಗ್..
Share on WhatsAppShare on FacebookShare on Telegram

ಬೆಂಗಳೂರು : ಬಿಜೆಪಿಯೊಂದಿಗೆ ಜೆಡಿಎಸ್‌ ಪಕ್ಷವನ್ನು ವಿಲೀನಗೊಳಿಸಿ ಎಂಬ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಹೇಳಿಕೆಗೆ ಕೇಂದ್ರ ಸಚಿವ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ನಮ್ಮ ವಿಲೀನದ ಚಿಂತೆ ಪಕ್ಕಕ್ಕೆ ಇಡಿ. ನನ್ನ ಮತ್ತು ನಿಮ್ಮ ಆಡಳಿತಾನುಭವದ ಬಗ್ಗೆ ಮಾತನಾಡೋಣ. ನಾನು ಎರಡು ಸಣ್ಣ ಅವಧಿಗೆ ಮುಖ್ಯಮಂತ್ರಿ, ಅಲ್ಪ ಅವಧಿಗೆ ಪ್ರತಿಪಕ್ಷ ನಾಯಕ. ಈಗ ಕೇಂದ್ರ ಮಂತ್ರಿ. ನೀವೂ ಸುದೀರ್ಘ ಅವಧಿಗೆ ಶಾಸಕ, ಅನೇಕ ಬಾರಿ ಮಂತ್ರಿ. ಈಗ ಮಂತ್ರಿ ಉಪ ಮುಖ್ಯಮಂತ್ರಿ!. ನಮ್ಮಿಬ್ಬರ ಆಡಳಿತ ಅನುಭವದ ಬಗ್ಗೆ ನೀವು ಹೇಳುವುದಲ್ಲ, ಜನರನ್ನೇ ಕೇಳಬೇಕು. ಕೊಳ್ಳೆ, ಸುಲಿಗೆ, ಬೇಲಿ, ಚದರಡಿ, ಕಮಿಷನ್, ಫಿಕ್ಸಿಂಗ್, ಒದ್ದು ಕಿತ್ತುಕೊಳ್ಳುವುದು ನನ್ನ ಎಕ್ಸ್ ಪೀರಿಯನ್ಸ್ ಅಲ್ಲಾ ಡಿಕೆಶಿರವರೇ ಎಂದು ಕುಮಾರಸ್ವಾಮಿ ಟಾಂಗ್‌ ನೀಡಿದ್ದಾರೆ.

ಏನೋ.. ಜನರ ಆಶೀರ್ವಾದ ಮತ್ತು ದೇವರ ದಯೆಯಿಂದ ಸಿಕ್ಕಿದ ಅವಕಾಶದಲ್ಲಿ ಜನರಿಗೆ ಕೈಲಾದ ಸಹಾಯ ಮಾಡುವ ಹುಲು ರಾಜಕಾರಣಿ ನಾನಷ್ಟೇ. ನಿಮಗೆ ಸಿದ್ಧಿಸಿರುವ ಅಂತಹ ಭಾರೀ ಅನುಭವ ನನಗಿಲ್ಲ.. ವಿನಮ್ರವಾಗಿ ಒಪ್ಪಿಕೊಳ್ಳುವೆ. ನಿಮಗೆ ಭೂ ಕಬ್ಜಾ, ಒತ್ತುವರಿ ಕರತಲಾಮಲಕ. ಅದೇ ರೀತಿ ಮತ್ತೊಬ್ಬ ಸಚಿವರ ಖಾತೆಯನ್ನು ಒತ್ತುವರಿ ಮಾಡುವುದರಲ್ಲಿಯೂ ನೀವು ನಿಸ್ಸೀಮರು. ಅದನ್ನಷ್ಟೇ ನಾನು ಹೇಳಿದ್ದೇನೆ. ತಾವು ಡಿಸಿಎಂ ಆಗಿರಬಹುದು. ಆದರೆ ಮಂತ್ರಿ ಪದವಿಗೆ ಇರುವಷ್ಟೇ ಶಿಷ್ಟಾಚಾರ, ಅಧಿಕಾರ ವ್ಯಾಪ್ತಿ ಆ ಹುದ್ದೆಗಿದೆ ಎನ್ನುವುದು ಗೊತ್ತಿಲ್ಲವೇ? ಅದಕ್ಕೇನು ಎಕ್ಸ್’ಟ್ರಾ ಕೊಂಬು, ಕೋಡು ಇರಲ್ಲ. ಇರಲಿ ಎಂದು ತಾವು ಸಿಕ್ಕಿಸಿಕೊಳ್ಳೋದಕ್ಕೂ ಬರಲ್ಲ. ನಿಮ್ಮ ಎಕ್ಸ್’ಪೀರಿಯನ್ಸ್ ಗೆ ಈ ಸಣ್ಣ ವಿಷಯವೂ ತಟ್ಟಲಿಲ್ಲವೇ ಮಿಸ್ಟರ್ ಡಿಕೆಶಿ ಅವರೇ!!?? ಎಂದು ಕಿಡಿ ಕಾರಿದ್ದಾರೆ.

ಬಳ್ಳಾರಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆಯನ್ನು ಗೃಹ ಸಚಿವರೇ ನಡೆಸಬೇಕಿತ್ತು. ಅದು ಅವರ ಅಧಿಕಾರ ವ್ಯಾಪ್ತಿ. ಅವರು ಬಿಟ್ಟರೆ ಮುಖ್ಯಮಂತ್ರಿಗಳು ಅಂಥಹ ಸಭೆ ನಡೆಸಬಹುದು. ನೀವು ಸಭೆ ನಡೆಸಿದ್ದು ಶಿಷ್ಟಾಚಾರ, ಅಧಿಕಾರದ ಸ್ಪಷ್ಟ ಉಲ್ಲಂಘನೆ. ಇದನ್ನು ಆಡಳಿತಾನುಭವ, ಸೀನಿಯಾರಿಟಿ ಎಂದು ಬೆನ್ನು ತಟ್ಟಿಕೊಳ್ಳುತ್ತೀರಾ? ಹೋಗಲಿ, ನೀವು ಮೀಟಿಂಗ್ ಮಾಡಿ ಎಂದು ಗೃಹ ಸಚಿವರು, ಸಿಎಂ ಅವರು ಹೇಳಿದ್ದರಾ? ಇಲ್ಲವಲ್ಲ. ಅದಕ್ಕಾಗಿಯೇ ಅವರೇನು ಹೆಬ್ಬೆಟ್ಟು ಗೃಹ ಮಂತ್ರಿಗಳಾ? ಅಥವಾ ರಬ್ಬರ್ ಸ್ಟ್ಯಾಂಪ್ ಗೃಹ ಮಂತ್ರಿಗಳಾ? ಎಂದು ಪ್ರಶ್ನಿಸಿದ್ದಾರೆ.

ಒಬ್ಬ ಹಿರಿಯ ಮಂತ್ರಿಯ ಖಾತೆಯನ್ನು ನೀವು ಹೀಗೆ ಅಕ್ರಮವಾಗಿ ಒತ್ತುವರಿ ಮಾಡುವುದಕ್ಕೆ ಸಂವಿಧಾನದಲ್ಲಿ ವಿಶೇಷ ತಿದ್ದುಪಡಿ ಏನನ್ನಾದರೂ ಮಾಡಿಸಿದ್ದೀರಾ? ನಿಮ್ಮದು ಭಾರೀ ಅನುಭವ, ಸಿಕ್ಕಾಪಟ್ಟೆ ಸೀನಿಯಾರಿಟಿ!! ಇಂಥ ಸಣ್ಣ ವಿಷಯ ನಿಮಗೇಕೆ ತಿಳಿಯಲಿಲ್ಲ ಮಿಸ್ಟರ್ ಡಿಕೆಶಿ ಅವರೇ? ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಕುಮಾರಸ್ವಾಮಿ ಡಿಕೆ ಶಿವಕುಮಾರ್‌ ವಿರುದ್ಧ ಲೇವಡಿ ಮಾಡಿದ್ದಾರೆ.

Tags: Ballari violenceBJP JDS Alliancecongress karnatakaDCM DK ShivakumarDr G ParameshwarHD KumaraswamyJDS KarnatakaKarnataka PoliceKarnataka PoliticsPratidhvanitwitter warUnion Minister
Previous Post

Namma Metro: ಬೆಂಗಳೂರು–ತುಮಕೂರು ಮೆಟ್ರೋ : ಇಲ್ಲಿದೆ ಬಿಗ್‌ ಅಪ್ಡೇಟ್‌

Next Post

ಬಳ್ಳಾರಿ ಬ್ಯಾನರ್ ಗಲಾಟೆಗೆ ಅಧಿಕಾರಿಗಳ ತಲೆದಂಡ: ಸಚಿವರ ಮುಂದೆ ಕಣ್ಣೀರಿಟ್ಟ DIGP

Related Posts

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ
ರಾಜಕೀಯ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಪ್ರತಿಧ್ವನಿ
April 24, 2026
0

ಬೆಂಗಳೂರು: ಒಳ ಮೀಸಲಾತಿ ಹಂಚಿಕೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಪರಿಶಿಷ್ಟ ಜಾತಿಗಳ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
Next Post
ಬಳ್ಳಾರಿ ಬ್ಯಾನರ್ ಗಲಾಟೆಗೆ ಅಧಿಕಾರಿಗಳ ತಲೆದಂಡ: ಸಚಿವರ ಮುಂದೆ ಕಣ್ಣೀರಿಟ್ಟ DIGP

ಬಳ್ಳಾರಿ ಬ್ಯಾನರ್ ಗಲಾಟೆಗೆ ಅಧಿಕಾರಿಗಳ ತಲೆದಂಡ: ಸಚಿವರ ಮುಂದೆ ಕಣ್ಣೀರಿಟ್ಟ DIGP

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada