ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ಬೇಕು ಅಂತಾ ವಿರೋಧ ಪಕ್ಷಗಳು ಪ್ರತಿಭಟನೆ ಮಾಡುತ್ತಿರುವ ಈ ಸಮಯದಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿಬಸವರಾಜು ರಾಯರೆಡ್ಡಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನು ಉಳಿದಿರುವ ಮೂರೂವರೆ ವರ್ಷಗಳ ಕಾಲ ಸಿಎಂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ.

ಯಾರೂ ಕೂಡ ಸಿದ್ದರಾಮಯ್ಯ ರಾಜೀನಾಮೆ ಪಡೆಯಲು ಆಗುವುದಿಲ್ಲ. ಹೈಕಮಾಂಡ್ ಕೂಡ ಅಂತಹ ಮನಸ್ಸು ಮಾಡುವುದಿಲ್ಲ ಎಂದಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಕೇಳಿದಾಗ ರಾಜೀನಾಮೆ ಕೊಡುತ್ತೇನೆ ಅಂತ ಯಾರಾದರೂ ಬಾಂಡ್ ಪೇಪರ್ ನಲ್ಲಿ ಬರೆದು ಕೊಟ್ಟಿದ್ದಾರಾ..? ರಾಜೀನಾಮೆ ಕೊಡ್ತೀನಿ ಅಂತ ಯಾರೂ ಬಾಂಡ್ ಪೇಪರ್ ಮೇಲೆ ಬರೆದು ಕೊಟ್ಟಿಲ್ಲ. ಸಿದ್ದರಾಮಯ್ಯ ಅವರೇ ಮುಂದಿನ ಮೂರೂವರೆ ವರ್ಷವೂ ಸಿಎಂ ಆಗಿರುತ್ತಾರೆ. ಆಗಿರಲೇಬೇಕು ಎಂದ್ದಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಸಂಪೂರ್ಣವಾಗಿ ಸಿದ್ದರಾಮಯ್ಯ ಬೆನ್ನಿಗೆ ನಿಂತಿದೆ. ಸಿಎಂ ಸ್ಥಾನಕ್ಕಾಗಿ ಯಾರು ಕೂಡ ನಮ್ಮಲ್ಲಿ ಪ್ರಯತ್ನ ಮಾಡುತ್ತಿಲ್ಲ ಎಂದಿದ್ದಾರೆ. ಇತ್ತೀಚಿಗಷ್ಟೇ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಹೋರಾಟದ ಹಿಂದೆ ಡಿ.ಕೆ ಶಿವಕುಮಾರ್ ಇದ್ದು, ಡಿ.ಕೆ ಶಿವಕುಮಾರ್ ಅವರನ್ನು ಸಿಎಂ ಮಾಡಲು ಪಾದಯಾತ್ರೆ ಮಾಡಲಾಗ್ತಿದೆ ಎಂದು ಟೀಕಾಪ್ರಹಾರ ಮಾಡಿದ್ರು. ಇದೀಗ ಸಿಎಂ ಬಣದಿಂದ ಡಿ.ಕೆ ಶಿವಕುಮಾರ್ ಟೀಂಗೆ ಠಕ್ಕರ್ ಕೊಡುವ ಕೆಲಸ ಆಗಿದೆ.


