ಏಪ್ರಿಲ್ 22 ರ ಭಯೋತ್ಪಾದಕ ದಾಳಿಗೆ (Pahalgam terror attack) ಪ್ರತಿಕಾರವಾಗಿ ಭಾರತ ಆಪರೇಷನ್ ಸಿಂಧೂರ (Operation sindhoor) ನಡೆಸಿ ಒಟ್ಟು 9 ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿ 90 ಕ್ಕೂ ಹೆಚ್ಚು ಉಗ್ರರನ್ನು ಹತ್ಯೆಗೈದಿದ್ದು, ಭಾರತದ ಸೇನೆಯ ಈ ಪ್ರತೀಕಾರದ ದಾಳಿಗೆ ದೇಶದಾದ್ಯಂತ ಸಂಭ್ರಮ ಮನೆ ಮಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjuna kharge), ನಮ್ಮ ನೆಲದಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ, ಉಗ್ರವಾದವನ್ನು ಇದೇ ರೀತಿ ಎದುರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ. ಹೀಗಾಗಿ ಭಯೋತ್ಪಾದಕ ಶಿಬಿರಗಳ ಮೇಲೆ ಪ್ರತಿದಾಳಿ ನಡೆಸಿದ ನಮ್ಮ ಭಾರತೀಯ ಸೇನೆಗೆ ನಮ್ಮ ಸಲಾಂ ಎಂದು ಖರ್ಗೆ ಬರೆದುಕೊಂಡಿದ್ದಾರೆ.

ಕಾಶ್ಮೀರದ ಪಹಲ್ಗಾಮ್ ದಾಳಿಯ ನಂತರ, ಭಾರತವನ್ನು ರಕ್ಷಿಸುವ ಪ್ರತಿಯೊಂದು ನಿರ್ಣಾಯಕ ಹೆಜ್ಜೆಗೂ ಕಾಂಗ್ರೆಸ್ ಪಕ್ಷ ನಮ್ಮ ಭಾರತೀಯ ಸೇನೆ ಮತ್ತು ರಾಷ್ಟ್ರದೊಂದಿಗೆ ದೃಢವಾಗಿ ನಿಂತಿದೆ.. ಜೈ ಹಿಂದ್ ಎಂದು ಎಕ್ಸ್ ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪೋಸ್ಟ್ ಮಾಡಿದ್ದಾರೆ.