• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ಉತ್ತರ ಹಾಗೂ ದಕ್ಷಿಣ ಭಾಗದಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಾಣ, ಶಿಡ್ಲಘಟ್ಟ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕ್ರಮ

ಪ್ರತಿಧ್ವನಿ by ಪ್ರತಿಧ್ವನಿ
January 14, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ಸುರಂಗ ಮಾರ್ಗದಿಂದ ಲಾಲ್ ಬಾಗ್ ಗೆ ಯಾವುದೇ ತೊಂದರೆ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್
Share on WhatsAppShare on FacebookShare on Telegram

“ಬೆಂಗಳೂರು ಉತ್ತರ ಭಾಗದಲ್ಲಿ ಅರಣ್ಯ ಇಲಾಖೆ ಜಾಗದಲ್ಲಿ ಬಸವಣ್ಣನವರ ಹೆಸರಿನಲ್ಲಿ ಲಾಲ್ ಬಾಗ್ ಮಾದರಿ ಉದ್ಯಾನ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇನ್ನು ಬೆಂಗಳೂರಿನ ದಕ್ಷಿಣ ಭಾಗದಲ್ಲೂ ಇದೇ ಮಾದರಿ ಉದ್ಯಾನ ನಿರ್ಮಿಸಲು ಚಿಂತನೆ ನಡೆಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ADVERTISEMENT

ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಏರ್ಪಡಿಸಲಾಗಿರುವ ಫಲಪುಷ್ಪ ಪ್ರದರ್ಶನವನ್ನು ಶಿವಕುಮಾರ್ ಅವರು ಬುಧವಾರ ಉದ್ಘಾಟಿಸಿ ಮಾತನಾಡಿದರು.

“ಬೆಂಗಳೂರು ಉದ್ಯಾನ ನಗರಿ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಪಡೆದಿದೆ. ಹೀಗಾಗಿ ಈ ಉದ್ಯಾನಗಳ ನಿರ್ಮಾಣಕ್ಕೆ ಜಿಬಿಎ, ಪಾಲಿಕೆ ವತಿಯಿಂದ ಆರ್ಥಿಕ ನೆರವು ನೀಡುವುದಾಗಿ ತಿಳಿಸಿದ್ದೇನೆ. ನಾನು ನಗರದ ಪಾರ್ಕ್ ಗಳಿಗೆ ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿ ನೋಡಿ, ಜನರ ಅಭಿಪ್ರಾಯ ಪಡೆದು ಅನೇಕ ಅಭಿವೃದ್ಧಿ ಕೆಲಸ ಕೈಗೊಳ್ಳಲು ಸೂಚಿಸಿದ್ದೇನೆ. ನಮ್ಮ ರಾಜ್ಯದಿಂದ ಹೊರ ದೇಶಗಳಿಗೆ ಪ್ರತಿ ವಾರ 17 ವಿಮಾನದಷ್ಟು ಹೂ, ತರಕಾರಿ ರಫ್ತಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದ ಹೂ, ತರಕಾರಿ ಮಾರುಕಟ್ಟೆ ನಿರ್ಮಿಸಲು ಮುಂದಾಗಿದ್ದೇವೆ” ಎಂದು ತಿಳಿಸಿದರು.

“ಇಂದು ಬೆಂಗಳೂರಿನ ಲಾಲ್ ಬಾಗ್ ನಲ್ಲಿ 219ನೇ ಫಲಪುಷ್ಟ ಪ್ರದರ್ಶನವನ್ನು ಉದ್ಘಾಟಿಸಲಾಗಿದೆ. ಇದು ಬಹಳ ಐತಿಹಾಸಿಕ ಉದ್ಯಾನವಾಗಿದ್ದು, ಕರ್ನಾಟಕ ರಾಜ್ಯದ ಆಸ್ತಿಯಾಗಿದೆ. ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ತೋಟಗಾರಿಕೆ ಇಲಾಖೆಯಿಂದ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಈ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗುತ್ತಿದೆ. ಈ ಬಾರಿ ಪೂರ್ಣಚಂದ್ರ ತೇಜಸ್ವಿ ಅವರ ಸಿದ್ಧಾಂತ ಮೌಲ್ಯಗಳ ಪ್ರತಿಬಿಂಬವನ್ನು ಪುಷ್ಪಪ್ರದರ್ಶನದಲ್ಲಿ ರೂಪಿಸಲಾಗಿದೆ” ಎಂದು ತಿಳಿಸಿದರು.

ಮೆಟ್ರೋ, ಸುರಂಗ ಮಾರ್ಗದಿಂದ ತೊಂದರೆ ಇಲ್ಲ
“ಇನ್ನು ಈ ಭಾಗದಲ್ಲಿ ಮೆಟ್ರೋ ಹಾಗೂ ಸುರಂಗದಿಂದ ಲಾಲ್ ಬಾಗ್ ಗೆ ತೊಂದರೆಯಾಗುತ್ತದೆ ಎಂದು ಕೆಲವರು ರಾಜಕಾರಣ ಮಾಡಿದ್ದಾರೆ. ಈ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಈ ಐತಿಹಾಸಿಕ ಉದ್ಯಾನ ಕಾಪಾಡಲು ಬೇರೆಯವರಿಗಿಂತ ಹೆಚ್ಚಿನ ಆಸಕ್ತಿ ನನಗಿದೆ. ನಾಗರೀಕರ ಸೌಲಭ್ಯಕ್ಕೆ ನಾವು ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇದರಿಂದ ಯಾವುದೇ ತೊಂದರೆಯಾಗುವುದಿಲ್ಲ. ಬೆಂಗಳೂರು ನಗರದ ಜನಸಂಖ್ಯೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಇಲ್ಲಿನ ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸಬೇಕಾಗಿದೆ. ಎಲ್ಲಾ ಪಾರ್ಕ್ ಹಾಗೂ ಕೆರೆ ಉಳಿಸುವುದು ನಮ್ಮ ಕರ್ತವ್ಯ. ಅದಕ್ಕೆ ಅಗತ್ಯ ಕ್ರಮವನ್ನು ನಮ್ಮ ಸರ್ಕಾರ ಕೈಗೊಳ್ಳುತ್ತಿದೆ” ಎಂದು ಭರವಸೆ ನೀಡಿದರು.

“ಬೆಂಗಳೂರಿನ ನಾಗರೀಕರು, ಶಾಲಾ ಮಕ್ಕಳು, ವಿದ್ಯಾರ್ಥಿಗಳು 10 ದಿನಗಳ ಫಲಪುಷ್ಪ ಪ್ರದರ್ಶನದಲ್ಲಿ ಭಾಗವಹಿಸಿ ಇದಕ್ಕೆ ಹೆಚ್ಚಿನ ಉತ್ತೇಜನ ನೀಡಬೇಕು ಎಂದು ಮನವಿ ಮಾಡುತ್ತೇನೆ. ಈ ಉತ್ತಮ ಕೆಲಸ ಮಾಡಿಕೊಂಡು ಬಂದಿರುವ ಸ್ಥಳೀಯ ಶಾಸಕರು, ಸಚಿವರಾದ ರಾಮಲಿಂಗಾರೆಡ್ಡಿ, ಯುವರಾಜ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

ಶಿಡ್ಲಘಟ್ಟ ಪ್ರಕರಣ: ತಪ್ಪು ಮಾಡಿದವರ ವಿರುದ್ಧ ಕ್ರಮ
ಶಿಡ್ಲಘಟ್ಟದಲ್ಲಿ ಪೌರಾಯುಕ್ತೆ ವಿರುದ್ಧ್ ಅವಾಚ್ಯ ಶಬ್ಧ ಬಳಸಿರುವ ಬಗ್ಗೆ ಕೇಳಿದಾಗ, “ಇದು ಪವಿತ್ರವಾದ ಜಾಗ, ಇಲ್ಲಿ ಅಂತಹ ವಿಚಾರ ಚರ್ಚೆ ಬೇಡ. ಯಾರೂ ಕಾನೂನಿಗಿಂತ ದೊಡ್ಡವರಲ್ಲ. ತಪ್ಪು ಮಾಡಿದವರು ಕ್ಷಮೆ ಕೇಳಬೇಕು ಎಂದು ಸೂಚಿಸುತ್ತೇನೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

Tags: congressDK Shivakumarflower showKP Poornachandra TejasviKPCCnamma metroRamalinga ReddyRepublic DayS S MallikarjunShidlaghattaShidlaghatta MLAYuvaraj
Previous Post

‘ಬೀದಿ ನಾಯಿಗಳು ಇಷ್ಟವಾದವರು ಮನೆಗೆ ಯಾಕೆ ಕರೆದೊಯ್ಯಲ್ಲ’

Next Post

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

ಹಣ ಕಡಿತಕ್ಕೂ ಮುನ್ನ ಎಚ್ಚರಿಕೆ ಕಡ್ಡಾಯ: ಆಟೋ-ಡೆಬಿಟ್ ನಿಯಮದಲ್ಲಿ ಆರ್‌ಬಿಐ ದೊಡ್ಡ ಬದಲಾವಣೆ

April 25, 2026
ಡಾ. ರಾಜ್‌ಕುಮಾರ್ ಜಯಂತಿ ಸಂಭ್ರಮದ ನಡುವೆ ಚೇತನ್ ಅಹಿಂಸ ಹೇಳಿಕೆಗೆ ವಿವಾದ

ಲಕ್ಷ್ಮಣ ಸವದಿ ಎದುರೇ ಅವರ ಆಪ್ತನ ಅಕಾಲಿಕ ನಿಧನ

April 24, 2026
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

ಸಂವಿಧಾನ ಸಮಾನತೆ ಮತ್ತು ಮಹಿಳಾ ಮೀಸಲಾತಿ

April 24, 2026
Next Post
Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

Daily Horoscope: ಇಂದು ಎಲ್ಲಾ ಕ್ಷೇತ್ರದಲ್ಲೂ ಲಾಭ ಪಡೆಯುವ ರಾಶಿಗಳಿವು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada