• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, June 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ ಜಾರ್ಜ್

ಪ್ರತಿಧ್ವನಿ by ಪ್ರತಿಧ್ವನಿ
June 29, 2026
in Top Story, ಕರ್ನಾಟಕ, ರಾಜಕೀಯ
0
ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ: ಸಚಿವ ಕೆ.ಜೆ ಜಾರ್ಜ್
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯದ ಜನರಿಗೆ ವಿದ್ಯುತ್ ಪೂರೈಸಲು ಇಂಧನ ಇಲಾಖೆ ಬಲಿಷ್ಠವಾಗಿದ್ದು, ಖಾಸಗೀಕರಣಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.

ADVERTISEMENT
Krishna Byre Gowda on Energy Minister KJ George : ಕೆ.ಜೆ ಜಾರ್ಜ್ ಅವರನ್ನು ಕೊಂಡಾಡಿದ ಕೃಷ್ಣ ಬೈರೇಗೌಡ.!

ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೋಮವಾರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಅಸೋಸಿಯೇಷನ್‌ಗಳ ಒಕ್ಕೂಟ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇಂಧನ ಸಚಿವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ವಿದ್ಯುತ್ ಸರಬರಾಜು ಖಾಸಗೀಕರಣ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಟಾಟಾ ಪವರ್ ಕಂಪನಿಯು ಕರ್ನಾಟಕದಲ್ಲಿ ವಿದ್ಯುತ್‌ ಸರಬರಾಜು (ವಿತರಣೆ) ಮಾಡಲು ಪರವಾನಗಿ ಕೋರಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ) ಕ್ಕೆ ಅರ್ಜಿ ಸಲ್ಲಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ʼಇಂಧನ ಇಲಾಖೆ ಬಲಿಷ್ಠವಾಗಿದೆ. ನಮ್ಮ ಸರ್ಕಾರ ನಿಮ್ಮ (ನೌಕರರ) ಪರವಾಗಿದೆ. ಖಾಸಗೀಕರಣ ವಿಚಾರಕ್ಕೆ ಸಂಬಂಧಿಸಿದಂತೆ ಸೂಕ್ತ ನಿರ್ದೇಶನ ನೀಡಲಾಗಿದ್ದು, ಅದರಂತೆ ಎಸ್ಕಾಂಗಳು ಕೆಇಆರ್ ಸಿ ಮುಂದೆ ಆಕ್ಷೇಪಣೆ ಸಲ್ಲಿಸಿವೆ. ನಾವು ಯಾವುದೇ ಖಾಸಗಿ ಕಂಪನಿಗೆ ಕಡಿಮೆ ಇಲ್ಲ. ನೌಕರರು ಮತ್ತು ಅಧಿಕಾರಿಗಳ ಬೇಡಿಕೆಗಳಿಗೆ ಸ್ಪಂದಿಸಲಿದ್ದೇವೆ. ಮುಂದಿನ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲಾಗುವುದು. ನಾವು ರಾಜ್ಯದ ಸೇವೆ ಮಾಡಲು ಬಂದವರು. ಇಲ್ಲಿ ಖಾಸಗೀಕರಣ ವಿಚಾರ ಬರುವುದಿಲ್ಲʼ ಎಂದು ಸ್ಪಷ್ಟಪಡಿಸಿದರು.

Bidadi Township : ಕೋಟಿ ಕೊಟ್ರು ಜಮೀನು ಬಿಡಲ್ಲ.! #pratidhvani

ʼಇಂಧನ ಇಲಾಖೆ ಈಗಾಗಲೇ ದೂರದೃಷ್ಟಿಯ ಯೋಜನೆಗಳನ್ನು ಸಿದ್ದಪಡಿಸಿದೆ, ಮುಂದಿನ 25 ವರ್ಷಗಳ ಅವಧಿಗೆ ವಿದ್ಯುತ್ ಭ್ರದತೆ ಒದಗಿಸಲು ಯೋಜನೆ ಸಿದ್ದವಾಗಿದೆ. ರೈತರ ಜತೆಗೆ 10,000 ಎಕರೆಯಲ್ಲಿ ಸೌರ ಪಾರ್ಕ್ ಮಾಡಿದ್ದೇವೆ. ರೈತರು ಇನ್ನೂ 10,000 ಎಕರೆ ಕೊಡಲು ಮುಂದೆ ಬಂದಿದ್ದಾರೆ. ವಿದ್ಯುತ್ ಉತ್ಪಾದನೆ ಅತ್ಯುತ್ತಮವಾಗಿದೆ. ಪೀಕ್ ಅವರ್ ವಿದ್ಯುತ್ ಮಾರಾಟವನ್ನು ಹೆಚ್ಚಿಸಿರುವುದರಿಂದ ಇಲಾಖೆಗೆ ಲಾಭವಾಗಿದೆ. ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆಯುವುದು ಮತ್ತು ದೀರ್ಘಾವಧಿ ಒಪ್ಪಂದಗಳ ಮೂಲಕ ವಿದ್ಯುತ್ ಖರೀದಿ ಮೂಲಕ ಇಂಧನ ಭದ್ರತೆಗೆ ಕ್ರಮ ವಹಿಸಲಾಗಿದೆʼ ಎಂದರು.

ʼಗೃಹಜ್ಯೋತಿ ಮೂಲಕ 1.67 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್ ಕೊಟ್ಟಿದ್ದೇವೆ. ಇದಕ್ಕಾಗಿ ಬಜೆಟ್ ನಲ್ಲೇ ಅನುದಾನ ನೀಡಲಾಗಿದೆ. ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ಪೂರೈಸಲು 21,000 ಕೋಟಿ ರೂ. ಅನುದಾನ ಕೊಡುತ್ತಿದ್ದೇವೆ. ನಮ್ಮ ಅಧಿಕಾರಿಗಳು, ಇಂಜಿನಿಯರ್ ಮತ್ತು ನೌಕರರು ತಂಡವಾಗಿ ಕೆಲಸ ಮಾಡುತ್ತಿದ್ದಾರೆ. ಯಾವುದೇ ಸಮಸ್ಯೆ ಎದುರಾದರೆ ಶೀಘ್ರವೇ ಪರಿಹಾರ ನೀಡಲಿದ್ದಾರೆʼ ಎಂದು ಹೇಳಿದರು.

ʼಇಂಧನ ಇಲಾಖೆಯಲ್ಲಿ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ ವೇಗವಾಗಿ ನಡೆಯುತ್ತಿದೆ. 120 ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಯೋಜನೆಗಳು ಜಾರಿಯಾಗಲಿವೆ. ಆ ಮೂಲಕ ವಿದ್ಯುತ್ ಪೂರೈಕೆಯನ್ನು ಸಮರ್ಪಕಗೊಳಿಸಲು ನಮ್ಮ ಸರ್ಕಾರ ಬದ್ಧವಾಗಿದೆʼ ಎಂದು ತಿಳಿಸಿದರು.

Bidadi Township : ಜಮೀನು ಕೊಡ್ತೀವಿ ಟೌನ್ ಶಿಪ್ ಆಗ್ಲಿ.! #pratidhvani

 

Previous Post

ರೈತರಿಗೆ ನೋಯಿಸಬೇಡಿ..ಟೌನ್‌ಶಿಪ್ ಯೋಚನೆ ಕೈ ಬಿಡಿ: ಕೇಂದ್ರ ಸಚಿವ ವಿ.ಸೋಮಣ್ಣ ಸಲಹೆ

Next Post

ಹೊಂಬಾಳೆ ಫಿಲ್ಮ್ಸ್‌ಗೆ ಕೈ ಜೋಡಿಸಿದ ತಮಿಳು ಸ್ಟಾರ್‌ ಸೂರ್ಯ: ಕನ್ನಡ ನಿರ್ಮಾಣ ಸಂಸ್ಥೆ ಜೊತೆ ಜೈ ಅಂದ ಕಾಲಿವುಡ್‌ ಸ್ಟಾರ್

Related Posts

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್
Top Story

ಸಂಕ್ರಾಂತಿಗೆ ಬಿಲ್ಲ ರಂಗ ಬಾಷ ರಿಲೀಸ್? ನಿರ್ಮಾಪಕಿ ರೀಟ್ವೀಟ್‌ಗೆ ಕಿಚ್ಚನ ಫ್ಯಾನ್ಸ್‌ ಫುಲ್‌ ಖುಷ್…‌

by ಪ್ರತಿಧ್ವನಿ
June 29, 2026
0

ಕಿಚ್ಚ ಸುದೀಪ್‌ ಮಾರ್ಕ್‌ ಸಿನಿಮಾ ನಂತರ ಇದೀಗ ಬಿಲ್ಲ ರಂಗ ಬಾಷ ಸಿನಿಮಾದಲ್ಲಿ ಬಿಝಿಯಾಗಿದ್ದಾರೆ. ಸದ್ಯ ಆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಕಳೆದೆರಡು ದಿನಗಳಿಂದ ಬೆಂಗಳೂರಿನಲ್ಲೆ ಒಂದಷ್ಟು...

Read moreDetails
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಜಗತ್ತಿನಾದ್ಯಂತ ಭೂಕಂಪಗಳ ಸರಣಿ; ಭಾರತಕ್ಕೂ ಇದೆಯೇ ಅಪಾಯ? ತಜ್ಞರು ಹೇಳಿದ್ದೇನು

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ಆರ್‌ಎಸ್‌ಎಸ್ ವಿವಾದದಲ್ಲಿ ಪ್ರಿಯಾಂಕ್ ಖರ್ಗೆ ಸಂಕಷ್ಟ; ನ್ಯಾಯಾಲಯದಿಂದ ಸಮನ್ಸ್

June 29, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದರ್ಶನ್

June 29, 2026
ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

ಮತ್ತೆ ಒಂದಾದ ‘ಪ್ರೇಮಂ’ ಜೋಡಿ: ನಿವಿನ್ ಪೌಲಿ 50ನೇ ಸಿನಿಮಾ ‘ವಿಜಯಂ’

June 29, 2026
Next Post
ಹೊಂಬಾಳೆ ಫಿಲ್ಮ್ಸ್‌ಗೆ ಕೈ ಜೋಡಿಸಿದ ತಮಿಳು ಸ್ಟಾರ್‌ ಸೂರ್ಯ: ಕನ್ನಡ ನಿರ್ಮಾಣ ಸಂಸ್ಥೆ ಜೊತೆ ಜೈ ಅಂದ ಕಾಲಿವುಡ್‌ ಸ್ಟಾರ್

ಹೊಂಬಾಳೆ ಫಿಲ್ಮ್ಸ್‌ಗೆ ಕೈ ಜೋಡಿಸಿದ ತಮಿಳು ಸ್ಟಾರ್‌ ಸೂರ್ಯ: ಕನ್ನಡ ನಿರ್ಮಾಣ ಸಂಸ್ಥೆ ಜೊತೆ ಜೈ ಅಂದ ಕಾಲಿವುಡ್‌ ಸ್ಟಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada