• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಎಸ್.ಸಿ ಪಟ್ಟಿಯಿಂದ ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ; ಕಾಂಗ್ರೆಸ್ ಪ್ರೇರಿತ ರಾಜಕೀಯ ಕುತಂತ್ರ : ಸಿಎಂ ಬೊಮ್ಮಾಯಿ

Any Mind by Any Mind
March 29, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಎಸ್.ಸಿ ಪಟ್ಟಿಯಿಂದ ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ; ಕಾಂಗ್ರೆಸ್ ಪ್ರೇರಿತ ರಾಜಕೀಯ ಕುತಂತ್ರ : ಸಿಎಂ ಬೊಮ್ಮಾಯಿ
Share on WhatsAppShare on FacebookShare on Telegram

ಬೆಂಗಳೂರು:ಮಾ.29 : ಎಸ್.ಸಿ ಪಟ್ಟಿಯಿಂದ ಕೈಬಿಡುವುದಾಗಿ ಕಾಂಗ್ರೆಸ್ ರಾಜಕೀಯ ಪ್ರೇರಿತ ಕುತಂತ್ರ ಮಾಡಿದ್ದು ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಸ್.ಸಿ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಸಮುದಾಯಗಳಿಗೆ ಕಾಂಗ್ರೆಸ್ ನವರು ಸುಳ್ಳು ಮಾಹಿತಿ ಕೊಡುತ್ತಿದ್ದಾರೆ. ಬಂಜಾರ, ಭೋವಿ, ಕೊರಚ ಯಾರನ್ನೂ ಕೂಡ ಪಟ್ಟಿಯಿಂದ ತೆಗೆಯಲಾಗುವುದಿಲ್ಲ. ಈ ಬಗ್ಗೆ ಫೆಬ್ರವರಿ ಮಾಹೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗಿದೆ. ಇವರೆಲ್ಲ ಮಹಾರಾಜರ ಕಾಲದಿಂದಲೂ ಇರುವಂಥ ಸಮುದಾಯಗಳು. ಸಂವಿಧಾನ ಆದ ನಂತರ ಇದ್ದ ಆರು ಸಮುದಾಯಗಳಲ್ಲಿ ಇವೂ ಇದ್ದು, ಇದನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಆಧಾರ ಸಮೇತವಾಗಿ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ADVERTISEMENT

ಅವರಿಗೆ ಗೊತ್ತು
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಎರಡೂ ಪಕ್ಷಗಳ ವರಿಷ್ಠರು ಆಫರ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅವರಿಗೆ ಯಾರು ಯಾವಾಗ ಏನು ಕೊಡುಗೆ ನೀಡುತ್ತಾರೆ, ಅವರು ಏನು ಸ್ವೀಕಾರ ಮಾಡುತ್ತಾರೆ ಎಂದು ಅವರಿಗೇ ಗೊತ್ತು ಎಂದರು. ನಾವು ಬೇರೆ ಪಕ್ಷಗಳ ರೀತಿ ಸುಳ್ಳು ಅಂಕಿ ಸಂಖ್ಯೆಗಳನ್ನು ಹೇಳುವುದಿಲ್ಲ. ನಮಗೆ ಎಲ್ಲಾ ಸಮೀಕ್ಷೆಗಳ ವರದಿ ಬಂದಿದ್ದು, ನಾವು ಬೇರೆ ಪಕ್ಷಗಳಿಗಿಂತ ಮುಂದಿದ್ದೇವೆ ಎಂದರು. ಇದು ಪಕ್ಷದ ಆಂತರಿಕ ವಿಚಾರವಾಗಿದ್ದು, ಬಹಿರಂಗ ಪಡಿಸಲು ಆಗುವುದಿಲ್ಲ ಎಂದರು.

ಸ್ವತಂತ್ರ ಮತ್ತು ನ್ಯಾಯೋಚಿತ ಚುನಾವಣೆಗೆ ಸಹಕಾರ :
ಕಳೆದ ಬಾರಿ 27 ನೇ ತಾರೀಖು ಚುನಾವಣೆ ಘೋಷಣೆಯಾಗಿತ್ತು. 27 ರ ನಂತರ ಯಾವ ದಿನವಾದರೂ ಚುನಾವಣಾ ದಿನಾಂಕ ಘೋಷಣೆಯಾಗುವ ನಿರೀಕ್ಷೆಯಿತ್ತು. ನೀತಿ ಸಂಹಿತೆ ಕೂಡ ಜಾರಿಯಾಗಲಿದ್ದು, ಎಲ್ಲಾ ಪಕ್ಷಗಳೂ ನೀತಿ ಸಂಹಿತೆಯ ಪ್ರಕಾರ ನಡೆದುಕೊಳ್ಳಬೇಕಾಗುತ್ತದೆ. ಸ್ವತಂತ್ರ ಮತ್ತು ನ್ಯಾಯೋಚಿತ ಚುನಾವಣೆಗೆ ಎಲ್ಲರೂ ಸಹಕರಿಸಬೇಕೆಂದು ವಿನಂತಿ ಮಾಡಿದರು. ಪ್ರಮುಖ ಅಭಿವೃದ್ಧಿ ಕಾರ್ಯ ಕ್ರಮಗಳು ನಿರಂತರವಾಗಿ ನಡೆಯುತ್ತಿರುತ್ತವೆ. ಕೆಲವು ಯೋಜನೆಗಳಿಗೆ ಅಡಿಗಲ್ಲು ಹಾಕುವುದು ಎಲ್ಲಾ ಸರ್ಕಾರಗಳ ಕಾಲದಲ್ಲಿಯೂ ಉಳಿಯುತ್ತದೆ.

ಸ್ಪಷ್ಟ ಬಹುಮತ
ಒಂದೂವರೆ ವರ್ಷದಲ್ಲಿ ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ 5-6 ಬಾರಿ ಭೇಟಿ ನೀಡಿದ್ದು, ಕಳೆದ ಮೂರು ತಿಂಗಳಲ್ಲಿ ಪ್ರವಾಸ ಮಾಡದ ಜಿಲ್ಲೆಯೇ ಇಲ್ಲ. ನಮಗೆ ಸಂಪೂರ್ಣ ಹಾಗೂ ಸ್ಪಷ್ಟ ಬಹುಮತ ಬರುವ ವಿಶ್ವಾಸವಿದೆ. ಮತ್ತೊಮ್ಮೆ 2023 ರಲ್ಲಿ ಬಿಜೆಪಿ ಸರ್ಕಾರ ಸ್ಥಾಪನೆಯಾಗಲಿದೆ.

ಏಪ್ರಿಲ್ 9 ಕ್ಕೆ ಪ್ರಧಾನಿಗಳ ಭೇಟಿ
ಚುನಾವಣಾ ಪ್ರಚಾರಕ್ಕೆ ವರಿಷ್ಠರು ಬರುತ್ತಾರೆ. ಏಪ್ರಿಲ್ 9 ರಂದು ಹುಲಿ ಕಾರ್ಯಕ್ರಮಕ್ಕೆ ಪ್ರಧಾನಿಗಳು ಮೈಸೂರಿಗೆ ಬರುವ ಕಾರ್ಯಕ್ರಮ ಮೊದಲೇ ನಿಗದಿಯಾಗಿತ್ತು. ಸರ್ಕಾರದ ಪೂರ್ವನಿಗದಿತ ಕಾರ್ಯಕ್ರಮ ಎಂದರು.

ಗರಿಷ್ಠ ಜನರನ್ನು ತಲುಪುವ ಪ್ರಚಾರ
ಈ ಬಾರಿಯ ಪ್ರಚಾರ ಗರಿಷ್ಠ ಜನರನ್ನು ತಲುಪುವ ಪ್ರಚಾರ. ಡಿಜಿಟಲೈಜೇಶನ್ ಬಳಕೆ, ನಾಯಕರ ವ್ಯಾಪಕ ಪ್ರಚಾರ, ಪ್ರವಾಸ, ಪ್ರತಿ ಮತದಾರರಿಗೆ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಕೇಂದ್ರ ರಾಜ್ಯ ಸರ್ಕಾರಗಳ ಯೋಜನೆಗಳನ್ನು ತಿಳಿಸಿದ್ದಾರೆ. ಪ್ರಚಾರ ವಿವಿಧ ಹಂತಗಳಲ್ಲಿರುತ್ತದೆ. ನಾಯಕರು ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ, ರಾಷ್ಟ್ರೀಯ ನಾಯಕರು ರಾಜ್ಯ ಮಟ್ಟದಲ್ಲಿ ಪ್ರಚಾರ ಮಾಡಲಿದ್ದು, ವ್ಯಾಪಕ ಪ್ರಚಾರ ಆಗಲಿದೆ ಎಂದರು.

ಯೋಜಿತ ಪ್ರಚಾರ
ಪ್ರಧಾನ ಮಂತ್ರಿಗಳ ಕಾರ್ಯಕ್ರಮ ದ ಜೊತೆಗೆ ಅಮಿತ್ ಶಾ, ಜೆ.ಪಿ.ನಡ್ಡಾ ಅವರ ಪ್ರವಾಸ ಕಾರ್ಯಕ್ರಮವನ್ನು ಸಮಿತಿಗಳಲ್ಲಿ ನಿರ್ಧರಿಸಿ ಕರ್ನಾಟಕ ವ್ಯಾಪ್ತಿಯಲ್ಲಿ ಪ್ರಚಾರ ಮಾಡುವಾಗ ಯೋಜಿತವಾಗಿ ಮಾಡಲಾಗುವುದು. ಕಳೆದ ಬಾರಿ ಬಂದಂತೆಯೇ ಈ ಬಾರಿಯೂ ಬರಲಿದ್ದಾರೆ ಎಂದರು.
ಅಭ್ಯರ್ಥಿಗಳ ಪಟ್ಟಿ
ಚುನಾವಣೆ ಘೋಷಣೆಯಾದ ನಂತರ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಈಗಾಗಲೇ ಸಮೀಕ್ಷೆಯ ವರದಿಗಳಿವೆ. ಅದರೊಂದಿಗೆ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಅಭಿಪ್ರಾಯಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಕ್ರೂಢೀಕರಿಸಿ ಪಟ್ಟಿ ಸಂಸದೀಯ ಮಂಡಳಿಗೆ ಕಳುಹಿಸಲಾಗುವುದು. ಒಂದು ವಾರ ಪ್ರಕ್ರಿಯೆ ನಡೆಯಲಿದೆ ಎಂದರು.

ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ
ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಎರಡನೇ ಪಟ್ಟಿ ಸಿದ್ದ ಮಾಡುವಾಗ ನಮ್ಮ ಶಾಸಕರಿಗೆ ಕರೆ ಮಾಡಿದ್ದಾರೆ. ನಮ್ಮ ಶಾಸಕರನ್ನು ಸಂಪರ್ಕಿಸಿರುವುದು ಅವರ ಪರಿಸ್ಥಿತಿ ತೋರಿಸುತ್ತದೆ. ಗಟ್ಟಿಯಾದ ಅಭ್ಯರ್ಥಿ ಗಳಿದ್ದಿದ್ದರೆ ನಮ್ಮ ಶಾಸಕರಿಗೆ ಕರೆ ಮಾಡುತ್ತಿರಲಿಲ್ಲ. ಸಾರಾಸಗಟಾಗಿ ಎಲ್ಲರಿಗೂ ಕರೆ ಮಾಡಿ ನಮ್ಮದಿನ್ನೂ ನಿರ್ಣಯವಾಗಿಲ್ಲ, ನೀವು ಬಂದರೆ ನಿಮಗೆ ಟಿಕೆಟ್ ಕೊಡುವುದಾಗು ಹೇಳಿದ್ದಾರೆ ಎಂದರು. ನಮ್ಮ ಪಕ್ಷದವರು ಅವರು ಬರುವುದಿಲ್ಲ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಗೆ ಅಭ್ಯರ್ಥಿಗಳ ಕೊರತೆ ಎದುರಾಗಿದೆ. ವಲಸಿಗರು ಸೇರಿದಂತೆ ಮೂಲ ಬಿಜೆಪಿ ಶಾಸಕರನ್ನ ಸಂಪರ್ಕ ಮಾಡಿದ್ದಾರೆ. ಈ ಬಾರಿ ಸ್ಪಷ್ಟ ಬಹುಮತದ ಮೇಲೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಜನಸೇವೆಗೆ ಅವಕಾಶ
ಇಷ್ಟು ಜನರ ಅಹವಾಲು ಸ್ವೀಕರಿಸಿದೆ, ನಾಳೆಯಿಂದ ಸ್ವೀಕರಿಸಲು ನೀತಿ ಸಂಹಿತೆ ಅಡ್ಡಿ ಆಗಲಿದೆ. ಇಷ್ಟು ದಿನ ಜನರ ಸೇವೆ ಮಾಡಲು ಅವಕಾಶ ದೊರೆತಿತ್ತು. ಕಾನೂನು ಪ್ರಕಾರ ನಾವು ನಡೆದುಕೊಳ್ಳಬೇಕು ಎಂದರು.

ಕಾದು ನೋಡಿ
ಚುನಾವಣೆ ಒಂದು ಹಂತವೋ, ಎರಡು ಹಂತದ ಚುನಾವಣೆಯೋ ಅನ್ನೋ ಪ್ರಶ್ನೆಗೆ ಕಾದು ನೋಡಿ ಎಂದ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮತ್ತು ನಮ್ಮ ವೇಳಾಪಟ್ಟಿಯನ್ನ ಪಕ್ಷದಿಂದ ನಿಗದಿಯಾಗುತ್ತೆ. ಪಟ್ಟಿ ಬಿಡುಗಡೆ ಬಗ್ಗೆ ದಿನಾಂಕ ಹೇಳಲಾಗುವುದಿಲ್ಲ ಇನ್ನೂ ಮುಂದೆ ಪಟ್ಟಿ ಅಂತಿಮ ಮಾಡಲಾಗುವುದು ಎಂದರು.

Tags: Basavaraj BommaiBJP GovernmentbjpkarnatakaBreaking Newsbreaking news in kannadacm bommaicmbommaiCongress PartyElection Commission of Indiakannada livetvkannada newskannada news livelatestnewsPratidhvanipratidhvaninewsPrtaidhvanidigitalsiddaramaiahSiddaramiahನರೇಂದ್ರ ಮೋದಿಬಿಜೆಪಿ
Previous Post

ಟ್ರೋಲಿಗರಿಗೆ ಪ್ರೀತಿಯಿಂದಲೇ ಉತ್ತರ ಕೊಟ್ಟ ರಮ್ಯಾ.. ಅಜ್ಜಿಯಂದಿರಿಗಾಗಿ ಕನ್ನಡದಲ್ಲೇ ಮಾತ್ನಾಡ್ತೀನಿ ಎಂದ ಪದ್ಮಾವತಿ..!   

Next Post

Siddaramaiah | ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಮಣಿಸಲು 300 ಅಧಿಕಾರಿಗಳನ್ನ ನೇಮಿಸಿದ್ದಾರೆ #pratidhvani

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025
Next Post
Siddaramaiah | ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಮಣಿಸಲು 300 ಅಧಿಕಾರಿಗಳನ್ನ ನೇಮಿಸಿದ್ದಾರೆ #pratidhvani

Siddaramaiah | ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಮಣಿಸಲು 300 ಅಧಿಕಾರಿಗಳನ್ನ ನೇಮಿಸಿದ್ದಾರೆ #pratidhvani

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!