ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (Dk Shivakumar) ನಡುವೆ ಹಗ್ಗಜಗ್ಗಾಟ ಜೋರಾಗಿರುವ ಬೆನ್ನಲೇ ಇದೀಗ ಮಲ್ಲಿಕಾರ್ಜುನ ಖರ್ಗೆ (Mallikarjuna kharge) ಅವರನ್ನು ಈ ರೇಸ್ ಗೆ ಎಳೆತಂದಿರುವ ಬಿಜೆಪಿ ಕಾಂಗ್ರೆಸ್ ಆಂತರಿಕ ಕಿತ್ತಾಟ ಮತ್ತು ದಲಿತರಿಗೆ ಮಾಡಿದ ಅನ್ಯಾಯ ಏನು ಎಂಬುದನ್ನು ಅಸ್ತ್ರವಾಗಿಸಿಕೊಂಡಿದೆ.

ರಾಜ್ಯದಲ್ಲಿ ವರ್ಷ ಸಿಎಲ್ ಪಿ ನಾಯಕರಾಗಿ ಸೇವೆ ಸಲ್ಲಿಸಿದರೂ ಮಾನ್ಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಾಂಗ್ರೆಸ್ ಪಕ್ಷ ಇದುವರೆಗೂ ಮುಖ್ಯಮಂತ್ರಿ ಮಾಡಲಿಲ್ಲ.8 ವರ್ಷ ಸತತವಾಗಿ ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಗೃಜ ಸಚಿವ ಪರಮೇಶ್ವರ್ ವರನ್ನು ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿ ಮಾಡಲಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಇನ್ನು 7 ಬಾರಿ ಸತತವಾಗಿ ಸಂಸದರಾದರೂ ಹಿರಿಯ ನಾಯಕ ಮುನಿಯಪ್ಪ ಅವರನ್ನು ಕಾಂಗ್ರೆಸ್ ಪಕ್ಷ ಕನಿಷ್ಠ ಪಕ್ಷ ಕೇಂದ್ರದಲ್ಲಿ ಕ್ಯಾಬಿನೆಟ್ ದರ್ಜೆ ಮಂತ್ರಿಯೂ ಮಾಡಲಿಲ್ಲ.ಅಂತೂ ಇಂತೂ ದಲಿತ ವಿರೋಧಿ ಪಕ್ಷದಲ್ಲಿ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂದು ಆರ್.ಅಶೋಕ್ ಕಾಂಗ್ರೆಸ್ ಡೋಂಗಿ ದಲಿತಪರ ನಿಲುವನ್ನು ಟೀಕಿಸಿದ್ದಾರೆ.