ಚಳಿಗಾಲ (Winter) ಮುಗಿದು ಇನ್ನೇನು ಬೇಸಿಗೆ (Summer) ಸಮೀಪಿಸುತ್ತಿರುವ ಹಿನ್ನಲೆಯಲ್ಲಿ, ಪ್ರಸ್ತುತ ವರ್ಷ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯನ್ ಬಿಸಿಲು ಅಧಿಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಪೂರ್ವ ಮುಂಗಾರಿನಲ್ಲಿ (Early mansoon) ಕೂಡ ಸಾಮಾನ್ಯ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಂದಾಯ ಸಚಿವರ ಕೃಷ್ಣ ಬೈರೇಗೌಡ (Krishna byregowda) ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ಸಚಿವ ಸಂಪುಟ ಉಪಸಮಿತಿ ಸಭೆ ನಡೆದಿದೆ.

ಈ ವೇಳೆ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚೆ ನಡೆಸಲಾಯ್ತು.
ಈ ವಿಚಾರಗಳಿಗೆ ಸಂಬಂಧಪಟ್ಟಂತೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳ ತಂಡ, ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ-ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ ಎಂದಿದ್ದಾರೆ.

ಆದರೆ ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಹೀಗಾಗಿ ಜನ ಸದ್ಯಕ್ಕೆ ಬಿರು ಬೇಸಿಗೆಯ ತಾಪಕ್ಕೆ ಹೊಂದಿಕೊಳ್ಳಬೇಕಿದೆ.