ನವದೆಹಲಿ: ಇಂದು ಕೇಂದ್ರ ಸರ್ಕಾರ 2026ರ ಬಜೆಟ್ ಮಂಡನೆ ಮಾಡಿದ್ದು, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್(Nirmala Sitharaman) ಅವರು ತಮ್ಮ ದಾಖಲೆಯ 9ನೇ ಬಜೆಟ್‌ನಲ್ಲಿ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಯಾಗಲಿದ್ದು, ಆದಾಯ ತೆರಿಗೆ ರಿಟರ್ನ್ ಸಲ್ಲಿಸಲು ಜುಲೈ 31ರವರೆಗೆ ಅವಕಾಶ ನೀಡಲಾಗಿದೆ.

ಇನ್ನು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಟಿಸಿಎಸ್ ದರವನ್ನು ಶೇ.2ರಷ್ಟು ಕಡಿತಗೊಳಿಸಲಾಗಿದೆ. ಅಲ್ಲದೇ ಇನ್ನು ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇರುವುದಿಲ್ಲ ಎಂದು ಕೇಂದ್ರ ಬಜೆಟ್‌ನಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್: ಮಧ್ಯಮ ವರ್ಗಕ್ಕೆ ಬಿಗ್ ರಿಲೀಫ್
ಈ ಬಾರಿಯ ಬಜೆಟ್‌ನಲ್ಲಿ ವಿದೇಶಿ ಪ್ರವಾಸಿಗರಿಗೆ ಗುಡ್ ನ್ಯೂಸ್ ನೀಡಲಾಗಿದ್ದು, ವಿದೇಶಿ ಪ್ರಯಾಣದ ಮೇಲೆ ಟಿಸಿಎಸ್ ದರವನ್ನು ಶೇ.5ಕ್ಕೆ ಇಳಿಸಲಾಗಿದೆ. ಘೋಷಿತ ಆದಾಯವನ್ನು ಒಂದು ಕೋಟಿ ರೂಪಾಯಿಗಳಿಗೆ ಮಿತಿಗೊಳಿಸುವ ಪ್ರಸ್ತಾವವೂ ಬಜೆಟ್‌ನಲ್ಲಿ ಸೇರಿದೆ. ಭಾರತದ ಡೇಟಾ ಸೆಂಟರ್‌ಗಳ ಮೂಲಕ ಜಾಗತಿಕ ಗ್ರಾಹಕರಿಗೆ ಕ್ಲೌಡ್ ಸೇವೆ ನೀಡುವ ಕಂಪನಿಗಳಿಗೆ 2047ರವರೆಗೆ ತೆರಿಗೆ ರಜೆ ಘೋಷಿಸಲಾಗಿದೆ.

ಮುನ್ಸಿಪಲ್ ಬಾಂಡ್‌ಗಳ ವಿತರಣೆಗಾಗಿ 100 ಕೋಟಿ ರೂಪಾಯಿ ಪ್ರೋತ್ಸಾಹಧನ ನೀಡಲಾಗುತ್ತದೆ. ಫ್ಯೂಚರ್ಸ್ ವ್ಯಾಪಾರದ ಮೇಲೆ ಇರುವ STT ದರವನ್ನು 0.02% ರಿಂದ 0.05%ಕ್ಕೆ ಹೆಚ್ಚಿಸಲಾಗಿದೆ. ಎಕ್ಸ್‌ಕ್ಲೂಸಿವ್ ಎಕನಾಮಿಕ್ ಝೋನ್‌ನಲ್ಲಿ ಮೀನುಗಾರಿಕಾ ಹಡಗುಗಳು ಹಿಡಿಯುವ ಮೀನಿಗೆ ಸುಂಕ ವಿನಾಯಿತಿಯನ್ನು ಕೇಂದ್ರದ ಬಜೆಟ್‌ನಲ್ಲಿ ಘೋಷಿಸಲಾಗಿದೆ.






