ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಡಿಕೆ ಶಿವಕುಮಾರ್ ರಾಜ್ಯದ 24ನೇ ಸಿಎಂ ಆಗಿ ಅಧಿಕಾರ ನಡೆಸಲಿದ್ದಾರೆ. ಇಂದು ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.

ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಉಡುಗೆ ಸಾಕಷ್ಟು ಜನರನ್ನು ಆಕರ್ಷಿಸಿತ್ತು. ಸಾಂಪ್ರದಾಯಿಕ ಪಂಚೆ, ಶಲ್ಯದೊಂದಿಗೆ ಮಿಂಚಿದ ಡಿಕೆ ಶಿವಕುಮಾರ್ ಭಾವಚಿತ್ರಗಳು ಹೇಗೆ ಕಂಡು ಬಂದವು ಇಲ್ಲಿವೆ ನೋಡಿ..!
ಪ್ರಮಾಣ ವಚನಕ್ಕೂ ಮುನ್ನ ನೆರೆದಿದ್ದ ಜನ ಸಮೂಹದತ್ತ ಶಿರಬಾಗಿ ನಮಸ್ಕರಿಸಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್..
ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಬಳಿಕ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸುತ್ತಿರುವುದು.
ಲೋಕಭವನದ ಗಾಜಿನ ಮನೆಯಲ್ಲಿ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪೌರಕಾರ್ಮಿಕರೊಂದಿಗೆ ಬೆರೆತು ಅವರ ಕುಶಲೋಪರಿ ವಿಚಾರಿಸಿದರು. ಈ ವೇಳೆ ಕಾರ್ಮಿಕರು ಸಿಎಂ ಡಿಕೆ ಶಿವಕುಮಾರ್ ಅವರಿಗೆ ಶುಭಕೋರಿದರು.
ಪ್ರಮಾಣ ವಚನ ಹಾಗೂ ಗೋಪ್ಯತಾ ವಚನ ಪಡೆದ ಬಳಿಕ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಅಧಿಕೃತ ಪ್ರಮಾಣ ವಚನ ಪುಸ್ತಕಕ್ಕೆ ಸಹಿ ಹಾಕುತ್ತಿರುವುದು.

ಲೋಕ ಭವನದ ಗಾಜಿನ ಮನೆಯಲ್ಲಿ ಲೋಕಸಭೆಯ ವಿಪಕ್ಷ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿಯವರನ್ನು ಅಪ್ಪಿಕೊಂಡು ಡಿಕೆ ಶಿವಕುಮಾರ್ ಧನ್ಯವಾದಗಳನ್ನು ತಿಳಿಸುತ್ತಿರುವುದು.
ಇಂದಿನ ಪ್ರಮಾಣ ವಚನ ಸಮಾರಂಭದಲ್ಲಿ ನಾಡಿನ ಎಲ್ಲ ಧರ್ಮಗಳ ಸ್ವಾಮೀಜಿಗಳು, ಚಿತ್ರರಂಗದ ನಾಯಕ, ನಾಯಕಿಯತರು ಜನಪ್ರತಿನಿಧಿಗಳು, ಉದ್ಯಮಿಗಳು ಸೇರಿದಂತೆ ವಿವಿಧ ವಲಯಗಳಿಂದ ಗಣ್ಯರು ಭಾಗಿಯಾಗಿದ್ದರು.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿಕೆ ಶಿವಕುಮಾರ್ ಅವರಿಗೆ ನಿಕಟ ಪೂರ್ವ ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರಾದ ಸಿದ್ದರಾಮಯ್ಯ ಅವರು ಶುಭಾಶಯಗಳನ್ನು ಕೋರಿದರು.

ಪ್ರಮಾಣ ವಚನಕ್ಕೂ ಮೊದಲು ವೇದಿಕೆಗೆ ಶಿರ ಸಾಷ್ಟಾಂಗ ನಮಸ್ಕಾರದ ಮೂಲಕ ಡಿಕೆ ಶಿವಕುಮಾರ್ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.







