• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!

ಪ್ರತಿಧ್ವನಿ by ಪ್ರತಿಧ್ವನಿ
August 6, 2026
in ಕರ್ನಾಟಕ
0
ಗಣೇಶ ಹಬ್ಬಕ್ಕೆ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಈ ಸೂಚನೆಗಳು!
Share on WhatsAppShare on FacebookShare on Telegram

ಬೆಂಗಳೂರು: ಸೆಪ್ಟೆಂಬರ್ 14ರಂದು ರಾಜ್ಯಾದ್ಯಂತ ಆಚರಿಸಲಾಗುವ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಪರಿಸರ ಸಂರಕ್ಷಣೆಗೆ ಒತ್ತು ನೀಡಿರುವ ರಾಜ್ಯ ಸರ್ಕಾರ, ಪ್ಲಾಸ್ಟರ್ ಆಫ್ ಪ್ಯಾರಿಸ್ (POP) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ, ಸಾಗಾಟ ಮತ್ತು ವಿಸರ್ಜನೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ.

ADVERTISEMENT

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಇಲಾಖೆಯ ಕಾರ್ಯದರ್ಶಿಗೆ ಈ ಕುರಿತು ಲಿಖಿತ ನಿರ್ದೇಶನ ನೀಡಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ, ಬಣ್ಣರಹಿತ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ಪೂಜೆ ಹಾಗೂ ವಿಸರ್ಜನೆಗೆ ಮಾತ್ರ ಅವಕಾಶ ಕಲ್ಪಿಸುವಂತೆ ಸೂಚಿಸಿದ್ದಾರೆ.

ಹಬ್ಬದ ಸಂದರ್ಭದಲ್ಲಿ ಯಾವುದೇ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ಜನಜಾಗೃತಿ ಮೂಡಿಸುವ ಜೊತೆಗೆ, ಪಿಒಪಿ ಮೂರ್ತಿಗಳ ತಯಾರಿಕೆ, ಸಂಗ್ರಹ, ಸಾಗಾಟ ಮತ್ತು ಮಾರಾಟವನ್ನು ತಡೆಯಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಸಚಿವರು ತಮ್ಮ ಸೂಚನೆಯಲ್ಲಿ, ಪಿಒಪಿ ಮೂರ್ತಿಗಳ ತಯಾರಿಕೆಯಲ್ಲಿ ಬಳಸುವ ಕ್ಯಾಲ್ಸಿಯಂ ಸಲ್ಫೇಟ್, ಜಿಪ್ಸಮ್ ಹಾಗೂ ರಾಸಾಯನಿಕ ಬಣ್ಣಗಳಲ್ಲಿ ಪಾದರಸ, ಕ್ಯಾಡ್ಮಿಯಂ, ಸೀಸ ಸೇರಿದಂತೆ ಹಲವು ಅಪಾಯಕಾರಿ ಅಂಶಗಳಿದ್ದು, ಇವು ಜಲಮೂಲಗಳನ್ನು ಕಲುಷಿತಗೊಳಿಸಿ ಪರಿಸರ ಹಾಗೂ ಸಾರ್ವಜನಿಕ ಆರೋಗ್ಯಕ್ಕೆ ಹಾನಿ ಉಂಟುಮಾಡುತ್ತವೆ ಎಂದು ಉಲ್ಲೇಖಿಸಿದ್ದಾರೆ.ಕೆರೆ, ನದಿ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ಪಿಒಪಿ ಮೂರ್ತಿಗಳನ್ನು ವಿಸರ್ಜಿಸುವುದರಿಂದ ಜಲಚರಗಳ ಜೀವಕ್ಕೆ ಅಪಾಯ ಉಂಟಾಗುವುದರ ಜೊತೆಗೆ ಕುಡಿಯುವ ನೀರಿನ ಗುಣಮಟ್ಟವೂ ಹದಗೆಡುತ್ತದೆ. ಈ ಹಿನ್ನೆಲೆಯಲ್ಲಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ–1974ರ ಕಲಂ 33(ಎ) ಅನ್ವಯ ರಾಜ್ಯದ ಯಾವುದೇ ಜಲಮೂಲದಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆ ನಿಷೇಧಿಸಲಾಗಿದೆ ಎಂದು ಅವರು ನೆನಪಿಸಿದ್ದಾರೆ.

ಈಗಾಗಲೇ 2023ರ ಸೆಪ್ಟೆಂಬರ್ 15ರಂದು ಪಿಒಪಿ ಮೂರ್ತಿಗಳ ತಯಾರಿಕೆ, ಮಾರಾಟ, ಸಾಗಾಟ ಹಾಗೂ ವಿಸರ್ಜನೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹೈಕೋರ್ಟ್ ಕೂಡ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳು ಪರಿಸರ ಮತ್ತು ಜಲಮೂಲಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

Tags: Clay GaneshaEco Friendly GaneshaEnvironment NewsEshwar KhandreGanesh Chaturthi 2026ganesh festivalGanesh IdolGram Panchayatkannada newsKarnataka Ganesh FestivalKarnataka Governmentkarnataka newsPollution Control BoardPOP Ganesha BanPOP Idol Ban
Previous Post

ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

Next Post

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ

Related Posts

ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?
Top Story

ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನ ತ್ಯಾಗ..? ರಾಜೀನಾಮೆ ಕೊಡ್ತಾರಾ ಕೆ.ಹೆಚ್‌ ಮುನಿಯಪ್ಪ..?

by ಪ್ರತಿಧ್ವನಿ
August 6, 2026
0

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು, 19 ನೂತನ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಒಟ್ಟು 33...

Read moreDetails
ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

ಸಂಕಷ್ಟದಲ್ಲಿ ನವಲಗುಂದ ರೈತರು: ಪರಿಹಾರದ ಭರವಸೆ ನೀಡಿದ ಸಚಿವ ಸಂತೋಷ ಲಾಡ್

August 6, 2026
ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

ಗ್ರೀನ್‌ ಸ್ಟೀಲ್‌ ಉತ್ಪಾದನೆಯಲ್ಲಿ ಸ್ವಾವಲಂಭನೆಯತ್ತ ಭಾರತ: ಹೆಚ್‌.ಡಿ ಕುಮಾರಸ್ವಾಮಿ

August 6, 2026
Lalbagh Flower Show 2026: ಇಂದಿನಿಂದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಈ ಬಾರಿಯ ವಿಶೇಷತೆಯೇನು..?

Lalbagh Flower Show 2026: ಇಂದಿನಿಂದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಈ ಬಾರಿಯ ವಿಶೇಷತೆಯೇನು..?

August 6, 2026
ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

August 6, 2026
Next Post
ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ

ಜೆನ್-ಜಿ ಮತದಾರರೇ ರಾಜಕೀಯದ ಹೊಸ ಕಿಂಗ್‌ಮೇಕರ್? 2029ರ ಚುನಾವಣೆಗೆ ಹೊಸ ಲೆಕ್ಕಾಚಾರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!