• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
June 27, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸ್ಟೂಡೆಂಟ್‌ ಕಾರ್ನರ್
0
Share on WhatsAppShare on FacebookShare on Telegram

ನಾನು ಶಾಶ್ವತ ಪರಿಹಾರದ ಪಂಚರತ್ನ ಘೋಷಿದೆ, ಜನರು ಅಗ್ಗದ ಪಂಚ ಗ್ಯಾರಂಟಿಗೆ ಮಾರುಹೋದರು! ಉಚಿತ ಶಿಕ್ಷಣ ನನ್ನ ಕನಸಾಗಿತ್ತು ಎಂದ ಕೇಂದ್ರ ಸಚಿವರು

ADVERTISEMENT

ಉಚಿತ ಶಿಕ್ಷಣ, ಉಚಿತ ಆರೋಗ್ಯ, ಉಚಿತ ಮನೆ ಸೇರಿದಂತೆ ನಾನು ಪಂಚರತ್ನ ಎಂಬ ಐದು ಶಾಶ್ವತ ಕಾರ್ಯಕ್ರಮಗಳನ್ನು ಕೊಡಲು ನಿರ್ಧರಿಸಿದ್ದೆ. ಆದರೆ, ಜನರು ಪಂಚ ಗ್ಯಾರಂಟಿ ಎಂಬ ಅಗ್ಗದ ಕಾರ್ಯಕ್ರಮಗಳಿಗೆ ಮರು ಹೋದರು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumarswamy) ಅವರು ಬೇಸರ ವ್ಯಕ್ತಪಡಿಸಿದರು.

ಹೆಬ್ಬಗೋಡಿಯಲ್ಲಿ ಕೆ.ಹೆಚ್. ಶಿಕ್ಷಣ ಟ್ರಸ್ಟ್ ನ
ವಿನಾಯಕ ಪಬ್ಲಿಕ್ ಶಾಲೆಯ (Vinayaka Public School) ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು; ಇವತ್ತು ಮಕ್ಕಳ ಶಿಕ್ಷಣ ಕಷ್ಟವಾಗಿದೆ. ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಕೈಗೆಟುಕುವ ರೀತಿಯಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ. ಸರ್ಕಾರಿ ಶಾಲೆಗಳು ಬಹಳ ದುಸ್ಥಿತಿಯಲ್ಲಿ ಇವೆ ಎಂದು ಕಳವಳ ವ್ಯಕ್ತಪಡಿಸಿದರು.

ಎಲ್ ಕೆಜಿ ಯಿಂದ ಪಿಯುಸಿವರೆಗೆ ಒಂದೇ ಸಮುಚ್ಚಯದಲ್ಲಿ ಕನ್ನಡ ಮತ್ತು ಇಂಗ್ಲೀಷ್ ಶಿಕ್ಷಣ ಕೊಡಬೇಕು ಎನ್ನುವುದು ನನ್ನ ಕನಸಾಗಿತ್ತು. ಅದಕ್ಕಾಗಿ ಪಂಚರತ್ನ ಯೋಜನೆಯನ್ನು ರೂಪಿಸಿ ಅದರಲ್ಲಿ ಶಿಕ್ಷಣವನ್ನು ಸೇರಿಸಿದ್ದೆ. ಬಡವರು, ಮಧ್ಯಮ ವರ್ಗದ ಮಕ್ಕಳಿಗೆ ಉಚಿತವಾಗಿ ಹೈಟೆಕ್ ಶಿಕ್ಷಣ ಕೊಡುವುದು ನನ್ನ ಉದ್ದೇಶವಾಗಿತ್ತು ಎಂದು ಸಚಿವರು ಹೇಳಿದರು.

ಆದರೆ, ಕಾಂಗ್ರೆಸ್ ಸರ್ಕಾರ (Congress Govt) ಪಂಚ ಗ್ಯಾರಂಟಿ ಎಂದು ನೀಡುತ್ತಿದೆ. ಅ ಪಂಚ ಗ್ಯಾರಂಟಿ ಕೊಡುವುದಕ್ಕೆ ಜನರ ಮೇಲೆ ಅಪಾರ ಪ್ರಮಾಣದಲ್ಲಿ ತೆರಿಗೆ ವಿಧಿಸುತ್ತಿದೆ. ಈ ರೀತಿ ತೆರಿಗೆ ಹಾಕುವುದೇ ಆಗಿದ್ದರೆ ನಾನೇ ಅಧಿಕಾರದಲ್ಲಿ ಇದ್ದಿದ್ದರೆ ತಿಂಗಳಿಗೆ ಐದು ಸಾವಿರ ರೂಪಾಯಿ ಕೊಡುತ್ತಿದ್ದೆ. ನಿಮ್ಮ ಹಣ ನಿಮಗೆ ಕೊಡುವುದಕ್ಕೆ ಸರ್ಕಾರ ಸುಲಿಗೆ ಮಾಡುತ್ತಿದೆ. ನಾನು ಇಂತ ಅಗ್ಗದ ಕಾರ್ಯಕ್ರಮ ಬಿಟ್ಟು ಶಾಶ್ವತ ಪರಿಹಾರ ಕೊಡುವ ಯೋಜನೆಗಳನ್ನು ಹಾಕಿಕೊಂಡಿದ್ದೆ. ಅದನ್ನು ಕಳೆದ ಚುನಾವಣೆಯಲ್ಲಿ ಜನರು ಗಂಭೀರವಾಗಿ ಪರಿಗಣನೆ ಮಾಡಲಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಮಕ್ಕಳು ಸ್ವಾಮಿ ವಿವೇಕಾನಂದರ ಆದರ್ಶ, ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು. ತಂದೆ ತಾಯಿಗೆ ನೋವು ಕೊಡಬೇಡಿ. ಕಡಿಮೆ ಅಂಕ ಬಂತು ಎಂದು ತಪ್ಪು ನಿರ್ಧರ ಮಾಡಬೇಡಿ. ನಾನು ಕೂಡ ಕೊನೆ ಬೆಂಚಿನ ವಿದ್ಯಾರ್ಥಿ. ಹೆಚ್ಚು ಅಂಕ ಪಡೆಯುತ್ತಿದ್ದ ವಿದ್ಯಾರ್ಥಿ ಆಗಿರಲಿಲ್ಲ. ಆದರೂ ಜೀವನದಲ್ಲಿ ಏನೋ ಒಂದನ್ನು ಸಾಧನೆ ಮಾಡಿದ ಸಂತೋಷ ಇದೆ. ನಾನೆ ಇದ್ದೇನೆ ಅಲ್ಲವೇ? ಕಡಿಮೆ ಅಂಕ ಬಂತು ಧೃತಿಗೆಡಬೇಡಿ ಎಂದು ಸಚಿವರು ಮಕ್ಕಳಿಗೆ ಕಿವಿಮಾತು ಹೇಳಿದರು.

ಯಲಹಂಕದ ರಾಮಕೃಷ್ಣ ವಿವೇಕಾನಂದ ವೇದಾಂತ ಆಶ್ರಮ ಶ್ರೀ ಶ್ರೀ ಅಭಯಾನಂದ ಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಿದ್ದರು. ಇದೇ ವೇಳೆ ಸಚಿವರು ಶಾಲೆಯ ಆಪ್ ಲೋಕಾರ್ಪಣೆ ಮಾಡಿದರು. ಶಾಲೆಯ ಸಂಸ್ಥಾಪಕ ನಾಗರಾಜ್, ನೀರಜ್ ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.

Tags: cm hd kumaraswamyCongress Govtex cm hd kumaraswamyH D KumarswamyHD Kumaraswamyhd kumaraswamy cryinghd kumaraswamy hosurhd kumaraswamy jdshd kumaraswamy livehd kumaraswamy newshd kumaraswamy on dkshd kumaraswamy planhd kumaraswamy speechhd kumaraswamy wifehd kumaraswamyihd kumarswamyhd kumarswamy allegationshd kumarswamy mini mini powderhd kumarswamy newshd kumarswamy trollhd kumarswamy tweetshd kumarswamy vs chaluvarayaswamyhdkumarswamyhosur hd kumaraswamyNagarajNeeraj NagarajRamakrishna Vivekananda Ashrama
Previous Post

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

Next Post

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada