• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ಡಿಸಿಎಂ

ಪ್ರತಿಧ್ವನಿ by ಪ್ರತಿಧ್ವನಿ
October 15, 2025
in Top Story, ಕರ್ನಾಟಕ, ರಾಜಕೀಯ
0
ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ: ಡಿಸಿಎಂ
Share on WhatsAppShare on FacebookShare on Telegram

ಬೆಂಗಳೂರಿಗೆ ಸರಿಸಮನಾದ ಮತ್ತೊಂದು ನಗರ ದೇಶದಲ್ಲಿಲ್ಲ: ನಾರಾ ಲೋಕೇಶ್ ಗೆ ತಿರುಗೇಟು

ADVERTISEMENT

ಟ್ವೀಟ್ ಮಾಡುವವರು ಕಳೆದ 25 ವರ್ಷಗಳಿಂದ ಬೆಳೆದು ಬಂದಿರುವುದು ಬೆಂಗಳೂರಿನಲ್ಲೇ: ಕಿರಣ್ ಮಜುಂದಾರ್ ಷಾ ವಿರುದ್ಧ ಕಿಡಿ

ಟ್ವೀಟ್ ಮಾಡಿ ನಮ್ಮನ್ನು ಬೆದರಿಸುವುದೇ ಅವರಿಗೆ ಮುಖ್ಯವಾದರೆ ಮಾಡಲಿ

ಬೆಂಗಳೂರು, ಅ.15:

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ ಅವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.

ವಿಧಾನಸೌಧದದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು.

ಬೆಂಗಳೂರಿನ ವಿಚಾರವಾಗಿ ಆಂಧ್ರ ಪ್ರದೇಶ ಐಟಿ ಸಚಿವ ನಾರಾ ಲೋಕೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾರಾ ಲೋಕೇಶ್ ಆಗಲಿ, ಬೇರೆಯವರಾಗಲಿ, ಯಾರ ಹೇಳಿಕೆಗೂ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಬೆಂಗಳೂರಿನಲ್ಲಿ 25 ಲಕ್ಷ ಐಟಿ ವೃತ್ತಿಪರರು, 2 ಲಕ್ಷ ವಿದೇಶಿಗರು ಕೆಲಸ ಮಾಡುತ್ತಿದ್ದಾರೆ. ದೇಶದ ಪ್ರಗತಿಯಲ್ಲಿ ಬೆಂಗಳೂರಿನ ಕೊಡುಗೆ ಅಪಾರವಾಗಿದೆ. ಕೇಂದ್ರ ಸರ್ಕಾರಕ್ಕೆ ಸುಮಾರು 40% ತೆರಿಗೆ ಆದಾಯ ಇಲ್ಲಿಂದಲೇ ಹೋಗುತ್ತಿದೆ. ಅವರು ತಮ್ಮ ಬಗ್ಗೆ ಮಾರ್ಕೆಟಿಂಗ್ ಮಾಡಿಕೊಳ್ಳಲು ಮಾತನಾಡುತ್ತಾರೆ. ಅವರು ಏನಾದರೂ ಮಾಡಿಕೊಳ್ಳಲಿ. ಅವರಿಗೆ ಕೇಂದ್ರ ಸರ್ಕಾರವೂ ಸಹಾಯ ಮಾಡಲಿ. ಆದರೆ ಬೆಂಗಳೂರಿಗೆ ಸರಿಸಮನಾಗಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು

“ಎಷ್ಟು ವಿದೇಶಿ ನಾಯಕರು ನನ್ನನ್ನು ಸಂಪರ್ಕಿಸುತ್ತಿದ್ದಾರೆ ಎಂದು ನಮಗೆ ಗೊತ್ತಿದೆ. ನಾನು ಐಟಿ ಸಚಿವರು, ಬೃಹತ್ ಕೈಗಾರಿಕೆ ಸಚಿವರು ಕೂತು ಚರ್ಚೆ ಮಾಡುತ್ತೇವೆ. ವಿದೇಶಿ ಕಂಪನಿಗಳು ಇಷ್ಟು ದಿನ ಬೆಂಗಳೂರಿನಲ್ಲಿ ಬಾಡಿಗೆ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದವು. ಅಮೆರಿಕದಲ್ಲಿನ ಬೆಳವಣಿಗೆ ನಂತರ ಈಗ ಅವರು ಸ್ವಂತ ಜಾಗ ಖರೀದಿಗೆ ಮುಂದಾಗುತ್ತಿದ್ದಾರೆ. ತಮ್ಮದೇ ಸ್ವಂತ ಕ್ಯಾಂಪಸ್ ಹೊಂದಲು ಮುಂದಾಗಿದ್ದಾರೆ ಇದು ಬೆಂಗಳೂರಿನ ಶಕ್ತಿ” ಎಂದು ತಿಳಿಸಿದರು.

ಬೆಂಗಳೂರಿನ ಬಗ್ಗೆ ಟ್ವೀಟ್ ಮಾಡಿ ಬೆದರಿಸುವವರು, ಕಳೆದ 25 ವರ್ಷಗಳಿಂದ ಎಲ್ಲಿದ್ದರು?

ಬೆಂಗಳೂರಿನ ಮೂಲಸೌಕರ್ಯಗಳ ಬಗ್ಗೆ ಕಿರಣ್ ಮಜುಂದಾರ್ ಷಾ ಅವರು ಟ್ವೀಟ್ ಮೂಲಕ ಟೀಕೆ ಮಾಡುವ ವಿಚಾರವಾಗಿ ಕೇಳಿದಾಗ, “ಅವರು ತಮ್ಮ ಟ್ವೀಟ್ ಮಾಡುವ ಮೂಲಕ ಅವರಿಗೆ ನೆರವಾಗಿರುವ ದೇಶ ಹಾಗೂ ರಾಜ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಅವರ ಟೀಕೆ ತಮಗೆ ತಾವೇ ಹಾಗೂ ಈ ನಗರಕ್ಕೆ ದ್ರೋಹ ಬಗೆದುಕೊಂಡಂತೆ. ಕಳೆದ 25 ವರ್ಷಗಳಿಂದ ಅವರು ಎಲ್ಲಿದ್ದರು? ಅವರ ಬೆಳವಣಿಗೆಯಲ್ಲಿ ಹೆಚ್ಚಿನ ಕೊಡುಗೆ ನೀಡಿರುವುದು ಬೆಂಗಳೂರು. ಬೆಂಗಳೂರು ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿ, ಉದ್ಯಮಿಗಳನ್ನು ದೊಡ್ಡ ಮಟ್ಟಕ್ಕೆ ಬೆಳೆಸಿದೆ. ಟೀಕಿಸುವವರಿಗೆ ಸರ್ಕಾರಗಳು ಎಷ್ಟು ಜಾಗ ಕೊಟ್ಟಿದೆ, ಎಷ್ಟು ನೆರವು ನೀಡಿದೆ ಎಂಬುದನ್ನು ಸ್ಮರಿಸಬೇಕು” ಎಂದು ಕಿಡಿಕಾರಿದರು.

CM Siddaramaiah : Priyank Khargeಗೆ ಏನ್​ ಪ್ರೊಟೆಕ್ಷನ್​​​ ಕೊಡ್ಬೇಕೋ ಕೊಡ್ತೀವಿ! #pratidhvani

ರಸ್ತೆಗುಂಡಿ ಮುಚ್ಚುವ ಬಗ್ಗೆ ಕೇಳಿದಾಗ, “ನಾವು ನಮ್ಮ ಕೈಯಲ್ಲಾದಷ್ಟು ನಾವು ಮಾಡುತ್ತಿದ್ದೇವೆ. ನಾವು ಮಹದೇವಪುರ ಹಾಗೂ ಕೆ.ಆರ್ ಪುರವನ್ನೇ ಪ್ರತ್ಯೇಕ ಪಾಲಿಕೆ ಮಾಡಿದ್ದು, ಇಲ್ಲೇ ಐಟಿ ಹಬ್ ಇವೆ. ಕೇವಲ 50 ವಾರ್ಡ್ ಗಳನ್ನು ಹೊಂದಿರುವ ಈ ಪಾಲಿಕೆ ತನ್ನ ಆದಾಯವನ್ನು ತಾನೇ ಬಳಸಿಕೊಳ್ಳಬಹುದಾಗಿದೆ. ಬೇರೆ ಪ್ರದೇಶಗಳ ಜೊತೆ ಹಂಚಿಕೊಳ್ಳುವ ಪ್ರಮೇಯವಿಲ್ಲ. ಈ ಭಾಗದ ಜನಸಂಖ್ಯೆ, ಅವರ ಸಮಸ್ಯೆಗಳೇನು ಎಂದು ನಮಗೆ ಅರಿವಿದೆ. ಅವರಿಗೆ ನೆರವಾಗಬೇಕು ಎಂದು ನಾವು ಈ ಕ್ರಮ ಕೈಗೊಂಡಿದ್ದೇವೆ. ಐಟಿಯಿಂದ ಬರುವ ಒಂದೂವರೆ ಸಾವಿರ ಕೋಟಿ ಆದಾಯವನ್ನು ಈ ವಾರ್ಡ್ ಗಳ ಅಭಿವೃದ್ಧಿಗೆ ಬಳಸಬಹುದಾಗಿದೆ. ಆಮೂಲಕ ಆ ಭಾಗದ ಅಭಿವೃದ್ಧಿಗೆ ನಾವು ಕ್ರಮ ಕೈಗೊಂಡಿದ್ದೇವೆ. ಇದಕ್ಕಾಗಿಯೇ ನಾವು ಜಿಬಿಎ ಮಾಡಿ ಆಮೂಲಕ ಬೆಂಗಳೂರಿನಲ್ಲಿ ಐದು ಪಾಲಿಕೆಗಳನ್ನು ರಚಿಸಿದ್ದೇವೆ. ಇನ್ನು ಎಲ್ಲಾ ಸಂಸ್ಥೆಗಳು ತಮ್ಮ ಸಿಎಸ್ಆರ್ ನಿಧಿಯನ್ನು ಏನು ಮಾಡುತ್ತಿವೆ ಎಂದು ಬಹಿರಂಗಪಡಿಸಲಿ. ನಾನು ಯಾರನ್ನು ಪ್ರಶ್ನೆ ಮಾಡುವುದಿಲ್ಲ. ಎಲ್ಲರೂ ಸ್ವಲ್ಪ ತಾಳ್ಮೆಯಿಂದ ಇರಬೇಕು. ನಿಮಗೆ ಟ್ವೀಟ್ ಮಾಡಿ ನಮ್ಮನ್ನು ಬೆದರಿಸುವುದೇ ಮುಖ್ಯವಾದರೆ, ಅದು ಅವರಿಗೆ ಬಿಟ್ಟ ವಿಚಾರ. ನಮ್ಮದು ಪ್ರಗತಿಪರ ಸರ್ಕಾರ. ಪ್ರಧಾನಮಂತ್ರಿಗಳೇ ಬೆಂಗಳೂರನ್ನು ಜಾಗತಿಕ ನಗರ ಎಂದು ಹೇಳಿರುವಾಗ ಇವರು ಪ್ರಧಾನಮಂತ್ರಿ ಹೇಳಿಕೆಗೆ ತದ್ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಇದು ಚೀನಾ ಇಲ್ಲ, ಪ್ರಜಾಪ್ರಭುತ್ವ ರಾಜ್ಯ. ಚೀನಾದಲ್ಲಿ ಅವರು ತಮಗೆ ಬೇಕಾದ ರಸ್ತೆ ಕಿತ್ತು, ಬೇಕಾದ ಹಾಗೆ ಮಾಡಬಹುದು. ಆದರೆ ಕರ್ನಾಟಕದಲ್ಲಿ ಆ ರೀತಿ ಮಾಡಲು ಆಗುವುದಿಲ್ಲ. ರಸ್ತೆ ಅಗಲೀಕರಣಕ್ಕೆ ಅವರು ತಮ್ಮ ಜಾಗವನ್ನು ಬಿಟ್ಟುಕೊಡುವರೇ? ಯಾರೊಬ್ಬರೂ ನೀಡುವುದಿಲ್ಲ. ಎಲ್ಲದಕ್ಕೂ ತನ್ನದೇ ಆದ ಇತಿಮಿತಿಗಳಿರುತ್ತವೆ. ಅವರು ಎಲ್ಲಿ ಬೆಳೆದಿದ್ದಾರೆ, ಎಲ್ಲಿ ಕೆಲಸ ಮಾಡಿದ್ದಾರೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಅವರು ತಾವು ಬೆಳೆದು ಬಂದ ದಾರಿಯನ್ನು ಮರೆಯಬಾರದು. ಅವರ ಮೂಲ ಹಾಗೂ ಬೆಳೆದು ಬಂದ ಹಾದಿ ಬೆಂಗಳೂರು” ಎಂದು ತಿಳಿಸಿದರು.

ಗೂಗಲ್ ಎಐ ಹಬ್ ಆಂಧ್ರ ಪ್ರದೇಶ ಪಾಲಾಗಿದೆ ಎಂದು ಕೇಳಿದಾಗ, “ಆಂಧ್ರ ಪ್ರದೇಶಕ್ಕೆ ಹೋಗುವವರಿಗೆ ನಾವು ಬೇಡ ಎನ್ನಲು ಸಾಧ್ಯವೇ? ಅವರು ಹೆಚ್ಚಿನ ವಿನಾಯಿತಿ ಕೊಡುತ್ತಾರೆ ಎಂದು ಹೋಗುವುದಾದರೆ ಹೋಗಲಿ. ಅವರಿಗೂ ಎಲ್ಲ ಕಡೆ ನೋಡಿ ಅನುಭವವಾಗಲಿ” ಎಂದು ತಿಳಿಸಿದರು.

ನಮ್ಮ ರಾಜ್ಯಕ್ಕೆ 1 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಹೂಡಿಕೆ ಕೈತಪ್ಪಿದೆ ಎಂದು ಕೇಳಿದಾಗ. “ವಿದೇಶಿ ಪ್ರತಿನಿಧಿಗಳು ನನ್ನನ್ನು, ಪ್ರಿಯಾಂಕ್ ಖರ್ಗೆ, ಎಂ.ಬಿ. ಪಾಟೀಲ್ ಅವರನ್ನು ನಿರಂತರವಾಗಿ ಭೇಟಿ ಮಾಡುತ್ತಲೇ ಇದ್ದಾರೆ. 12ರಂದು ಸಿಂಗಾಪುರದ ಉದ್ಯಮಿಗಳ ನಿಯೋಗ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅನೇಕ ಖಾಸಗಿ ವಿವಿಗಳು, ಸಂಸ್ಥೆಗಳು ಬೆಂಗಳೂರಿನಲ್ಲಿ ತಮ್ಮ ಸಂಸ್ಥೆ ಆರಂಭಿಸಲು ಬರುತ್ತಿದ್ದಾರೆ. ಬೆಂಗಳೂರನ್ನು ಯಾರೂ ಬಿಟ್ಟು ಹೋಗುವುದಿಲ್ಲ. ನಾವು ದೊಡ್ಡ ದೊಡ್ಡ ವಿನಾಯಿತಿ ನೀಡುತ್ತೇವೆ ಎಂದು ಜಾಹೀರಾತು ಹಾಕಿ ನಾವು ಯಾರನ್ನೂ ಕರೆಯುವ ಅಗತ್ಯವಿಲ್ಲ. ಬೆಂಗಳೂರಿನಲ್ಲಿರುವ ಎಲ್ಲಾ ಸೌಲಭ್ಯಗಳು ಹೂಡಿಕೆದಾರರನ್ನು ಆಕರ್ಷಿಸುತ್ತಿದೆ” ಎಂದರು.

Dr GParameshwar : ಸಚಿವ ಪ್ರಿಯಾಂಕ್‌ ಖರ್ಗೆ ಜೀವ ಬೆದರಿಕೆ ಕರೆ: ಗೃಹ ಸಚಿವ ಹೇಳಿದ್ದೇನು..! #drgparameshwar

ಕಾಂಗ್ರೆಸ್ ಶಾಸಕರಿಗೆ ಅನುದಾನ ನೀಡಿದ್ದು, ನಮಗೆ ನೀಡಿಲ್ಲ ಎಂದು ಜೆಡಿಎಸ್ ಶಾಸಕರು ನ್ಯಾಯಾಲಯದಲ್ಲಿ ಅರ್ಜಿ ಹಾಕಿರುವ ಬಗ್ಗೆ ಕೇಳಿದಾಗ, “ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರ ನೀಡಲಿದ್ದಾರೆ. ಯಾರಿಗೆ ಎಷ್ಟು ಅನುದಾನ ನೀಡಬೇಕು ಎಂದು ಸಿಎಂ ತೀರ್ಮಾನ ಮಾಡಿದ್ದಾರೆ. ಈ ವಿಚಾರದಲ್ಲಿ ನಮಗೆ ಪಾಠ ಹೇಳಿಕೊಟ್ಟವರು ಬಿಜೆಪಿಯವರಲ್ಲವೇ? ನಾವು ಅವರಷ್ಟು ಕ್ರೂರಿಗಳಲ್ಲ. ನಾವು ಹೃದಯ ಶ್ರೀಮಂತಿಕೆ ಪ್ರದರ್ಶಿಸಿದ್ದೇವೆ” ಎಂದರು.

ನೀವು ಕೇಂದ್ರ ಸರ್ಕಾರದ ವಿರುದ್ಧ ನ್ಯಾಯಾಲಯದ ಮೆಟ್ಟಿಲು ಹತ್ತಿದಂತೆ ಅವರು ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅವರು ಅರ್ಜಿ ಹಾಕಿ ಕೇಳಲಿ. ಅದರಲ್ಲಿ ತಪ್ಪೇನಿಲ್ಲ. ನಾವು ಕೇಂದ್ರ ಸರ್ಕಾರದ ಬಳಿ ನಮ್ಮ ಹಕ್ಕು ಕೇಳುತ್ತಿದ್ದೇವೆ. ಬೆಂಗಳೂರಿಗೆ ಅನುದಾನ ನೀಡುತ್ತಿಲ್ಲ ಎಂದು ಬಿಜೆಪಿ ಶಾಸಕರು ಹಾಗೂ ಸಂಸದರು ಕೇಂದ್ರ ಸರ್ಕಾರದ ಮೇಲೆ ಇದೇ ರೀತಿ ನ್ಯಾಯಾಲಯದಲ್ಲಿ ಅರ್ಜಿ ಹಾಕಲಿ. ಅವರು ಅರ್ಜಿಯನ್ನೇ ಕೊಟ್ಟಿಲ್ಲ, ಇನ್ನು ಕೋರ್ಟ್ ಮೆಟ್ಟಿಲೇರುತ್ತಾರಾ” ಎಂದು ತಿಳಿಸಿದರು.

Tags: BJPCongress PartyDCM DK Shivakumardcm dk shivakumar bookDK Shivakumardk shivakumar cm newsdk shivakumar controversydk shivakumar familydk shivakumar in jp parkdk shivakumar interviewdk shivakumar latestdk shivakumar latest newsdk shivakumar newsdk shivakumar on rssdk shivakumar rss anthemdk shivakumar rss songdk shivakumar speechdk shivakumar statementdk shivakumar today newsdk shivakumar todays newsdk shivakumar wifedk shivakumar wife templeusha dk shivakumarಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಶಾಂತಿ, ನೆಮ್ಮದಿ, ಮಳೆ- ಬೆಳೆ-ಗಾಗಿ ದೇವಿಗೆ ಪ್ರಾರ್ಥನೆ ಸಿ.ಎಂ.ಸಿದ್ದರಾಮಯ್ಯ

Next Post

ಜನರ ಆಸ್ತಿ ದಾಖಲೆಗಳ ರಕ್ಷಣೆಗೆ ಸರ್ಕಾರದಿಂದ 6ನೇ ಗ್ಯಾರಂಟಿ

Related Posts

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
0

ಮೇಷ ರಾಶಿಯ ಈ ದಿನದ ಭವಿಷ್ಯ ಮೇಷ ರಾಶಿಯವರಿಗೆ ಇಂದು ಹೆಚ್ಚು ಕೆಲಸದ ಒತ್ತಡ ಉಂಟಾಗುತ್ತದೆ. ಸಮಾಧಾನದಿಂದ ಇರಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯದ ಬಗ್ಗೆ...

Read moreDetails
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು

November 17, 2025
ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

November 17, 2025
Next Post
ಜನರ ಆಸ್ತಿ ದಾಖಲೆಗಳ ರಕ್ಷಣೆಗೆ ಸರ್ಕಾರದಿಂದ 6ನೇ ಗ್ಯಾರಂಟಿ

ಜನರ ಆಸ್ತಿ ದಾಖಲೆಗಳ ರಕ್ಷಣೆಗೆ ಸರ್ಕಾರದಿಂದ 6ನೇ ಗ್ಯಾರಂಟಿ

Recent News

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!
Top Story

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

by ಪ್ರತಿಧ್ವನಿ
November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?
Top Story

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

by ಪ್ರತಿಧ್ವನಿ
November 17, 2025
ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!
Top Story

ಬೆಂಗಳೂರಿನಲ್ಲಿ ಕಸ ಸುಟ್ಟರೆ ಕಠಿಣ ಕ್ರಮ: ಒಂದು ಲಕ್ಷ ದಂಡ, ಐದು ವರ್ಷ ಜೈಲು!

by ಪ್ರತಿಧ್ವನಿ
November 17, 2025
ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?
Top Story

ಬೆಂಗಳೂರು-ತುಮಕೂರು ಮೆಟ್ರೋ ವಿಸ್ತರಣೆಗೆ ತೇಜಸ್ವಿ ಸೂರ್ಯ ವಿರೋಧ ಯಾಕೆ..?

by ಪ್ರತಿಧ್ವನಿ
November 17, 2025
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ
Top Story

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ

by ಪ್ರತಿಧ್ವನಿ
November 17, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

Daily Horoscope: ಇಂದು ಕಚೇರಿಯಲ್ಲಿ ಎಚ್ಚರಿಕೆಯಿಂದ ಇರಬೇಕಾದ ರಾಶಿಗಳಿವು..!

November 18, 2025
ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

ಪ್ರಧಾನಿ ಮೋದಿ ಎದುರು ಸಿಎಂ ಸಿದ್ದು 5 ಬೇಡಿಕೆಗಳು ಏನು..?

November 17, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada