• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ತಿಮ್ಮನ ಮೊಟ್ಟೆಗಳು ಪ್ರೀಮಿಯರ್ ಶೋ ಅಮೇರಿಕಾದ ಡಾಲಸ್ ನಲ್ಲಿ..!!

ಪ್ರತಿಧ್ವನಿ by ಪ್ರತಿಧ್ವನಿ
January 28, 2025
in Top Story, ಇದೀಗ, ಕರ್ನಾಟಕ, ದೇಶ, ವಿದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಶ್ರೀ ಕೃಷ್ಣ ಪ್ರೊಡಕ್ಷನ್ಸ್ ಬ್ಯಾನರಿನ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಅವರ ನಿರ್ಮಾಣದಲ್ಲಿ ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದ “ತಿಮ್ಮನ ಮೊಟ್ಟೆಗಳು” ಚಿತ್ರ ಅಮೇರಿಕಾದ ಡಾಲಸ್ ನಲ್ಲಿ ಅದ್ದೂರಿ ಪ್ರೀಮಿಯರ್ ಶೋನೊಂದಿಗೆ ಬಿಡುಗಡೆಯಾಗಿದೆ.

ADVERTISEMENT


ಮನುಷ್ಯ ಮತ್ತು ಪ್ರಕೃತಿ ನಡುವಿನ ಸಂಬಂಧಗಳ ಬಗ್ಗೆ ಬೆಳಕು ಚೆಲ್ಲುವ ಸುಂದರ ಕೌಟುಂಬಿಕ ಕಥಾನಕವನ್ನ ಹೊಂದಿರುವ ಚಿತ್ರ ಕೊಲ್ಕತ್ತಾ ಅಂತರಾಷ್ಟ್ರಿಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು. ಹಾಗೂ ದೆಹಲಿಯಲ್ಲಿ ನಡೆದ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವದಲ್ಲಿ ಸ್ಪೆಷಲ್ ಜೂರಿ ಮೆನ್ಸನ್ ಅವಾರ್ಡ್ ಕೂಡ ಪಡೆದುಕೊಂಡಿತ್ತು.


ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದ ಆಯ್ದ ಒಂದು ಕಥೆ ತಿಮ್ಮನ ಮೊಟ್ಟೆಗಳು ಸಿನಿಮಾವಾಗಿದೆ. ಪ್ರವೀಣ್ ಎಸ್ ಅವರ ಛಾಯಾಗ್ರಹಣ, ಬಿ ಎಸ್ ಕೆಂಪರಾಜು ಅವರ ಸಂಕಲನ ಹಾಗೂ ಹೇಮಂತ್ ಜೋಯಿಸ್ ಅವರ ಸುಮಧುರ ಸಂಗೀತ ಚಿತ್ರಕ್ಕಿದೆ. ವಾಸುಕಿ ವೈಭವ್, ಐಶ್ವರ್ಯ ರಂಗರಾಜನ್, ಆದರ್ಶ್ ಅಯ್ಯಂಗಾರ್ ಮತ್ತು ಚಿನ್ಮಯಿ ಚಂದ್ರಶೇಖರ್ ಹಾಡಿರುವ ಹಾಡುಗಳು ಇಂಪಾಗಿದ್ದು ಕಥೆಗೆ ಪೂರಕವಾಗಿವೆ. ಸುಚೇಂದ್ರ ಪ್ರಸಾದ್, ಕೇಶವ್ ಗುತ್ತಳಿಕೆ, ಆಶಿಕಾ ಸೋಮಶೇಕರ್, ಪ್ರಗತಿ ಪ್ರಭು, ಶೃಂಗೇರಿ ರಾಮಣ್ಣ, ರಘು ರಾಮನಕೊಪ್ಪ, ಮಾಸ್ಟರ್ ಹರ್ಷ, ವಿನಯ್ ಕಣಿವೆ ಮುಂತಾದವರ ಅಭಿನಯ ಚಿತ್ರಕ್ಕಿದೆ.


ಡಾಲಸ್ ನಲ್ಲಿರುವ ಕನ್ನಡಿಗರು ಲುಂಗಿ ತೊಟ್ಟು, ಹೆಗಲ ಮೇಲೊಂದು ಟವಲ್ ಇಟ್ಟು, ತಲೆಯ ಮೇಲೊಂದು ಮಂಡಾಳೆಯನ್ನ ಹಾಕಿಕೊಂಡು ಮಲೆನಾಡಿನ ಸಾಮಾನ್ಯ ವ್ಯಕ್ತಿಯಂತೆ ಚಿತ್ರ ವೀಕ್ಷಿಸಲು ಬಂದದ್ದು ಎಲ್ಲರ ಗಮನ ಸೆಳೆಯಿತು. ಚಿತ್ರ ನೋಡಿದವರೆಲ್ಲಾ ಮಾನವೀಯ ಮೌಲ್ಯಗಳು, ಪ್ರಕೃತಿ ಮತ್ತು ಮನುಷ್ಯ ನಡುವಿನ ಸಂಬಂಧಗಳು, ದೈವಾರಾಧನೆ ಮತ್ತು ಮನುಷ್ಯನ ನಂಬಿಕೆಗಳ ಬಗ್ಗೆ ಚಿತ್ರದಲ್ಲಿ ಮೂಡಿಬಂದಿರುವ ಬಗೆಯ ಬಗ್ಗೆ ಭಾವನಾತ್ಮಕವಾಗಿ ತಮ್ಮ ಅನಿಸಿಕೆ ಹಂಚಿಕೊಂಡರು.


ಚಿತ್ರದ ಕಥೆಯಲ್ಲಿ ಕಾಳಿಂಗ ಹಾವಿನ ಪಾತ್ರ ಬಹುಮುಖ್ಯವಾಗಿದ್ದು ಚಿತ್ರದ ಓಟಕ್ಕೆ ಸಹಕಾರಿಯಾಗಿದೆ. ಸದ್ಯದಲ್ಲೇ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯಾಗುವುದೆಂದು ಚಿತ್ರತಂಡ ಹೇಳಿಕೊಂಡಿದೆ.

Tags: AmericaDollaskannada cinemaKrishna ProductionsPremier ShowRakshith ThirthahalliThimmana Mottegalu
Previous Post

FACT CHECK: ಮಹಾ ಕುಂಭಮೇಳದಲ್ಲಿ ಭಾಗವಹಿಸಿದ ಸಾರ್ವಜನಿಕ ವ್ಯಕ್ತಿಗಳ ಎಐ-ರಚಿಸಿದ ಚಿತ್ರಗಳು ಎಷ್ಟು ಸತ್ಯ? ಇದು ನಿಜನಾ? ಸುಳ್ಳಾ??

Next Post

ಕುಡಿಯವ ನೀರಿನ ದರ ಹೆಚ್ಚಳದ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

Related Posts

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ
Top Story

ಪತಿಯ ಶವದ ಜೊತೆಗೆ 10 ದಿನ ಕಳೆದ ಪತ್ನಿ: ಚಿಕ್ಕಮಗಳೂರಿನಲ್ಲಿ ಮನಕಲುಕುವ ಘಟನೆ

by ಪ್ರತಿಧ್ವನಿ
April 9, 2026
0

ಚಿಕ್ಕಮಗಳೂರು: ಜಿಲ್ಲೆಯ ಬಣಕಲ್ ಪ್ರದೇಶದಲ್ಲಿ ಮಾನವೀಯತೆ ಕಲುಕುವ ಘಟನೆ ಬೆಳಕಿಗೆ ಬಂದಿದೆ. ವೃದ್ಧನೊಬ್ಬರು ಮೃತಪಟ್ಟ ಬಳಿಕ, ಅವರ ಮಾನಸಿಕ ಅಸ್ವಸ್ಥ ಪತ್ನಿ ಸುಮಾರು 10 ದಿನಗಳ ಕಾಲ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

April 7, 2026
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ಆಕ್ರಮಣಕಾರಿ ಆಳ್ವಿಕೆಯತ್ತ ಟ್ರಂಪ್ 2.0

ಭಾರತ-ಪಾಕಿಸ್ತಾನ ಯುದ್ಧ ತಡೆದದ್ದು ನನ್ನಿಂದಲೇ: ಟ್ರಂಪ್ ಪುನಃ ಹೇಳಿದ್ದೇನು ?

April 7, 2026
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
Next Post

ಕುಡಿಯವ ನೀರಿನ ದರ ಹೆಚ್ಚಳದ ಬಗ್ಗೆ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada