• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

3ನೇ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸ: ಸಿದ್ದರಾಮಯ್ಯ

Any Mind by Any Mind
August 2, 2021
in ಕರ್ನಾಟಕ, ರಾಜಕೀಯ
0
ಸಂವಿಧಾನ ವಿರೋಧಿಸುವವರು ಮನುಷ್ಯತ್ವ ಇಲ್ಲದವರು: ಸಿದ್ದರಾಮಯ್ಯ
Share on WhatsAppShare on FacebookShare on Telegram

ಕರೋನಾ ಮೂರನೆ ಅಲೆ ನಮ್ಮ ರಾಜ್ಯಕ್ಕೆ ಬರದಂತೆ ತಡೆಯುವುದು ರಾಜ್ಯ ಸರ್ಕಾರದ ಪ್ರಾಥಮಿಕ ಕೆಲಸವಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ADVERTISEMENT

ಕಾರವಾರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಮುಖ್ಯಮಂತ್ರಿಗಳು, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಮಾಡನಾಡಿ, ಅಕ್ಕ ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಮೂರನೆ ಅಲೆ ಈಗಾಗಲೇ ಬಂದಿದ್ದು ಸೋಂಕು ಪ್ರಮಾಣ ಹೆಚ್ಚಾಗಿದೆ. ಈ ರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಬರುವವರ ಪ್ರಮಾಣ ಹೆಚ್ಚಾಗಿರುತ್ತದೆ ಹಾಗಾಗಿ ರಾಜ್ಯದ ಗಡಿಗಳಲ್ಲಿ ಕಟ್ಟೆಚ್ಚರ ವಹಿಸಬೇಕು ಎಂದಿದ್ದಾರೆ.

ಕೇರಳದಿಂದ ರಾಜ್ಯದ ಕರಾವಳಿ, ಚಾಮರಾಜನಗರ, ಕೊಡಗು ಜಿಲ್ಲೆಗಳಿಗೆ ಹೆಚ್ಚು ಜನ ಬರುತ್ತಾರೆ, ರಾಜ್ಯದ ಗಡಿಗಳಲ್ಲಿ ಅವರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಎರಡು ಡೋಸ್ ಲಸಿಕೆ ಪಡೆಯದವರನ್ನು ಗಡಿ ಒಳಗೆ ಬಿಡಬಾರದು ಹಾಗೂ ಪರೀಕ್ಷೆ ನಡೆಸಿ ನೆಗೆಟಿವ್ ಬಂದವರನ್ನು ಮಾತ್ರ ಒಳಗೆ ಬಿಡಬೇಕು ಎಂದು ಹೇಳಿದ್ದಾರೆ.

ಈಗಾಗಲೇ ನಾವು ಸಾಕಷ್ಟು ಕಷ್ಟ ಅನುಭವಿಸಿದ್ದೇವೆ. ಸೂಕ್ತ ಆಸ್ಪತ್ರೆ, ಹಾಸಿಗೆಗಳು, ವೆಂಟಿಲೇಟರ್, ಆಕ್ಸಿಜನ್ ಇಲ್ಲದೆ ಸಾವಿರಾರು ಜನ ಸಾವಿಗೀಡಾಗಿದ್ದಾರೆ, ಇದು ಮತ್ತೆ ಮರುಕಳಿಸದಂತೆ ತಡೆಯಬೇಕು. ಇದನ್ನು ಬಿಟ್ಟು ಮುಖ್ಯಮಂತ್ರಿಗಳು ಮಂತ್ರಿಮಂಡಲ ರಚನೆಗೆ ಓಡಾಡುತ್ತಿದ್ದಾರೆ. ಒಮ್ಮೆ ದೆಹಲಿಗೆ ಹೋಗಲಿ, ಪದೇ ಪದೇ ಹೋಗುವ ಅಗತ್ಯವೇನಿದೆ? ಬಿಜೆಪಿ ಹೈಕಮಾಂಡ್ ಕೂಡ ರಾಜ್ಯದ ಸಮಸ್ಯೆಯನ್ನು ಅರ್ಥಮಾಡಿಕೊಳ್ಳಬೇಕು ಎಂದು ಸರ್ಕಾರಕ್ಕೆ ಹೇಳಿದ್ದಾರೆ.

ಬಿಜೆಪಿ ಶಾಸಕರು ಬೆಂಗಳೂರಿನಲ್ಲಿ ಠಿಕಾಣಿ ಹೂಡಿ, ಮಂತ್ರಿ ಪದವಿಗಾಗಿ ಲಾಬಿ ಮಾಡುತ್ತಿದ್ದಾರೆ. ಒಬ್ಬ ಶಾಸಕನು ತನ್ನ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡುತ್ತಿಲ್ಲ. ಇವರಿಗೆ ಜನರ ಜೀವಕ್ಕಿಂತ ಮಂತ್ರಿಯಾಗುವುದು ಮುಖ್ಯವಾಗಿದೆ ಎಂದು ಕಿಡಿಕಾರಿದ್ದಾರೆ.

ಬಸವರಾಜ ಬೊಮ್ಮಾಯಿಯವರು ಈಗಷ್ಟೇ ಮುಖ್ಯಮಂತ್ರಿಗಳಾಗಿದ್ದಾರೆ. ಅವರ ಬಗ್ಗೆ ಟೀಕೆ ಮಾಡುವುದಿಲ್ಲ.‌ ಆದರೆ ರಾಜ್ಯದ ಸಮಸ್ಯೆಗಳ ಬಗ್ಗೆ ಗಮನ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

ಲಾಕ್ ಡೌನ್ ಹೇರುವಂತ ಪರಿಸ್ಥಿತಿ ನಿರ್ಮಾಣವಾಗದಂತೆ ಸರ್ಕಾರ ನೋಡಿಕೊಳ್ಳಬೇಕು. ಕಳೆದೆರಡು ದಿನಗಳಿಂದ ಸೋಂಕಿನ ಪ್ರಮಾಣ ಎರಡು ಸಾವಿರ ಸಮೀಪದಲ್ಲಿದೆ. ಇದು ಎರಡು ಸಾವಿರದ ಗಡಿ ದಾಟಿದರೆ ಮೂರನೆ ಅಲೆ ಶುರುವಾಗಿದೆ ಎಂದರ್ಥ ಎಂದಿದ್ದಾರೆ.

ರೇಣುಕಾಚಾರ್ಯ ಅವರು ತಮ್ಮ ವಿರುದ್ಧ ಮಾನಹಾನಿಯಾಗುವಂತ ವೀಡಿಯೋ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆ ಉತ್ತರಿಸಿದ ಅವರು, ತಮ್ಮ ವೀಡಿಯೋ ಬರಬಹುದು ಎಂಬ ಅನುಮಾನ ಸುಮ್ಮಸುಮ್ಮನೆ ರೇಣುಕಾಚಾರ್ಯ ಅವರಿಗೆ ಏಕೆ ಬರುತ್ತದೆ? ಎಂದು ಪ್ರಶ್ನಿಸಿದ್ದಾರೆ.

ಯಾವುದೋ ಕಾನೂನು ಬಾಹಿರ, ಅನೈತಿಕ ಕೃತ್ಯ ನಡೆಸಿ, ಸಿಕ್ಕಿಬಿದ್ದಿರಬಹುದು. ಎಷ್ಟೊಂದು ಮಂದಿ ರಾಜಕಾರಣಿಗಳಿದ್ದಾರೆ ಅವರನ್ನೆಲ್ಲಾ ಬಿಟ್ಟು ರೇಣುಕಾಚಾರ್ಯ, ಸದಾನಂದ ಗೌಡರದ್ದೇ ಏಕೆ ವೀಡಿಯೋ ಮಾಡ್ತಾರೆ? ಕಳ್ಳನ ಮನಸ್ಸು ಹುಳ್ ಹುಳ್ಳಗೆ ಎನ್ನುವಂತೆ ಇವರ ಕಥೆಯಾಗಿದೆ ಎಂದಿದ್ದಾರೆ.

ಭಾರತೀಯ ಜನತಾ ಪಕ್ಷದವರು ತಾವು ಮಹಾನ್ ಸುಸಂಸ್ಕೃತರು ಎಂದು ಹೇಳಿಕೊಳ್ಳುತ್ತಾರೆ. ನಮ್ಮಂತ ಸಂಸ್ಕಾರ, ನಡತೆ ಯಾರಿಗೂ ಇಲ್ಲ ಎನ್ನುವಂತೆ ವರ್ತಿಸುತ್ತಾರೆ. ವಾಸ್ತವದಲ್ಲಿ ಇವರಷ್ಟು ಭಂಡರು ಯಾರೂ ಇಲ್ಲ ಎಂದಿದ್ದಾರೆ.

ಜೆಡಿಎಸ್ ಈಗ ಜಾತ್ಯಾತೀತ ಪಕ್ಷವಾಗಿ ಉಳಿದಿಲ್ಲ, ಜಾತ್ಯಾತೀತ ಸಿದ್ದಾಂತ ಬಿಟ್ಟು ತುಂಬಾ ಸಮಯವಾಗಿದೆ. ಹಿಂದೆ ನಾವಿದ್ದ ಕಾಲದಲ್ಲಿ ಇದ್ದ ಜೆಡಿಎಸ್ ಪಕ್ಷ ಈಗಿಲ್ಲ ಎಂದಿದ್ದಾರೆ.

ಬಿಜೆಪಿ ಭ್ರಷ್ಟರ ಪಕ್ಷ, ಅವರ ಸರ್ಕಾರ ಭ್ರಷ್ಟ ಸರ್ಕಾರ. ಯಡಿಯೂರಪ್ಪ ಭ್ರಷ್ಟರಲ್ಲದೆ ಹೋಗಿದ್ದರೆ ಮುಖ್ಯಮಂತ್ರಿ ಹುದ್ದೆಯಿಂದ ಏಕೆ ಕೆಳಗಿಳಿಸುತ್ತಿದ್ದರೆ? ಯವಸ್ಸಾಗಿದ್ದು ಒಂದೇ ಕಾರಣವಾಗಿದ್ದರೆ ಎಪ್ಪತ್ತೈದು ದಾಟಿ ಎರಡು ವರ್ಷ ಕಳೆದಿಲ್ಲವೆ? ಇಷ್ಟು ಕಾಲ ಏಕೆ ಸುಮ್ಮನಿದ್ದರು? ಎಂದು ಪ್ರಶ್ನಿಸಿದ್ದಾರೆ.

Tags: Basavaraj BommaiBJPCongress PartyCovid 19ಕರೋನಾಕೋವಿಡ್-19ಬಿಜೆಪಿಸಿದ್ದರಾಮಯ್ಯ
Previous Post

ಜೆಡಿಎಸ್‌ಗೆ ಗುರಿಯಿಟ್ಟುಕೊಂಡೇ ಬೊಮ್ಮಾಯಿ ಆಯ್ಕೆ ನಡೆಯಿತೇ?

Next Post

ಟೋಕಿಯೋ ಒಲಿಂಪಿಕ್ಸ್: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಟೋಕಿಯೋ ಒಲಿಂಪಿಕ್ಸ್: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ

ಟೋಕಿಯೋ ಒಲಿಂಪಿಕ್ಸ್: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada