• Home
  • About Us
  • ಕರ್ನಾಟಕ
Monday, November 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಇದು ದೂರದೃಷ್ಟಿ ಇಲ್ಲದ ಬಜೆಟ್ : ಸಿದ್ದರಾಮಯ್ಯ

Any Mind by Any Mind
March 4, 2022
in ಕರ್ನಾಟಕ
0
ಕರೋನಾ 3ನೇ ಅಲೆ ತಗ್ಗಿದ ನಂತರ ಪಾದಯಾತ್ರೆ ಮುಂದುವರಿಸುತ್ತೇವೆ : ಸಿದ್ದರಾಮಯ್ಯ
Share on WhatsAppShare on FacebookShare on Telegram

ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮುಖ್ಯಮಂತ್ರಿಯಾಗಿ ತಮ್ಮ ಮೊದಲ ಬಜೆಟ್ ಮಂಡಿಸಿದ್ದಾರೆ. ಅವರು ತಮ್ಮ ಮಾತುಗಳ ಮೂಲಕ ಜನರಲ್ಲಿ ಬಹಳಷ್ಟು ನಿರೀಕ್ಷೆ ಮೂಡಿಸಿದ್ದರು. ‘ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣ ಮಾಡುತ್ತೇವೆ’, ಭವಿಷ್ಯಕ್ಕಾಗಿ ಧೃಡ ಹೆಜ್ಜೆ ಇಡುತ್ತೇವೆ ಎಂದು ಹೇಳಿದ್ದರು. ಆದರೆ ಬಜೆಟ್ ನೋಡಿದ ಮೇಲೆ ಅವರ ಮಾತುಗಳು ಹುಸಿಯಾಗಿವೆ. ಇದು ಅತ್ಯಂತ ನೀರಸ, ಅಭಿವೃದ್ಧಿಯ ವಿರೋಧಿ, ದೂರದೃಷ್ಟಿ ಇಲ್ಲದ ಬಜೆಟ್ (Budget) ಆಗಿದೆ.

ADVERTISEMENT

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿದ ರಾಜ್ಯ ಬಜೆಟ್ ಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ (Siddaramaiah) ಮಾತನಾಡಿ, ಬಜೆಟ್ ಎಂದರೆ ಜನರಿಗೆ ಕನಸು ಕಟ್ಟಿಕೊಡುವಂತಿರಬೇಕು, ನಾಡಿನ ಎಲ್ಲ ಜನರ ಭವಿಷ್ಯದ ಮುನ್ಸೂಚನೆಯಂತಿರಬೇಕು. ನಮ್ಮ ಸರ್ಕಾರದ ಅವಧಿಯಲ್ಲಿ ಇಲಾಖಾವಾರು ಮಾಹಿತಿಯನ್ನು ಜನರಿಗೆ ಪಾರದರ್ಶಕವಾಗಿ ಕೊಡುತ್ತಿದ್ದೆವು. ಹಿಂದಿನ ಬಜೆಟ್ ನಲ್ಲಿ ಯಾವ ಇಲಾಖೆಗೆ ಎಷ್ಟು ಹಣ ನೀಡಿದ್ದೆವು, ಎಷ್ಟು ಖರ್ಚಾಗಿತ್ತು, ಮುಂದೆ ಎಷ್ಟು ನೀಡುತ್ತಿದ್ದೇವೆ, ಹೀಗೆ ಇಲಾಖೆಯ ಪ್ರಗತಿಯನ್ನು ಪಾರದರ್ಶಕವಾಗಿ ನೀಡಿದ್ದೆವು, ಈಗ ಹಾಗಿಲ್ಲ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆದ ಮೇಲಿಂದ ವಲಯವಾರು ಬಜೆಟ್ ಮಂಡನೆ ಮಾಡಲು ಆರಂಭಿಸಿದರು. ಇದರಿಂದ ಹಿಂದೆ ಇದ್ದ ಪಾರದರ್ಶಕತೆ ಈಗ ಇಲ್ಲವಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರಗಳು ಎಂದು ಮಾಡಿದ್ದಾರೆ.

ಮೊದಲನೆಯದು: ರಾಜ್ಯದ ಸಮಗ್ರ ಸಾಮಾಜಿಕ, ಆರ್ಥಿಕ ಅಭಿವೃದ್ಧಿ.
ಎರಡನೆಯದು: ದುರ್ಬಲ ವರ್ಗದವರ ರಕ್ಷಣೆ ಮತ್ತು ಏಳಿಗೆ.
ಮೂರನೆಯದು: ರಾಜ್ಯದ ಹಿಂದುಳಿದ ಪ್ರದೇಶಗಳನ್ನು ಗುರುತಿಸಿ, ಅವುಗಳ ಅಭಿವೃದ್ಧಿ ಮಾಡುವುದು.
ನಾಲ್ಕನೆಯದು: ಕೃಷಿ, ಕೈಗಾರಿಕಾ, ಸೇವಾ ವಲಯಗಳಲ್ಲಿ ಜನರನ್ನು ಪಾಲುದಾರರಾಗಿ ಮಾಡುವುದು.
ಐದನೆಯದು: ಹೊಸ ಚಿಂತನೆ, ಹೊಸ ಚೈತನ್ಯ, ಹೊಸ ಮುನ್ನೋಟದೊಂದಿಗೆ ನವ ಭಾರತಕ್ಕಾಗಿ ನವ ಕರ್ನಾಟಕ ನಿರ್ಮಾಣ ಮಾಡುವುದು.

ಆದರೆ ಬಜೆಟ್ ನ ಅಂಶಗಳು ಈ ಪಂಚ ಸೂತ್ರಗಳಿಗೆ ತದ್ವಿರುದ್ಧವಾಗಿದೆ. ಸ್ವಾತಂತ್ರ್ಯ ಬಂದ ನಂತರದಿಂದ 2018-19 ರ ನಮ್ಮ ಸರ್ಕಾರದ ಕೊನೆಯ ಬಜೆಟ್ ವರೆಗೆ ರಾಜ್ಯದ ಮೇಲಿದ್ದ ಒಟ್ಟು ಸಾಲ ರೂ. 2,42,000 ಕೋಟಿ. ಮುಂದಿನ ವರ್ಷದ ಮಾರ್ಚ್ ವೇಳೆಗೆ ರಾಜ್ಯದ ಒಟ್ಟು ಸಾಲ ರೂ. 5,18,000 ಕೋಟಿ ಆಗುತ್ತೆ. 2017-18 ರಲ್ಲಿ ಸಾಲದ ಮೇಲಿನ ಬಡ್ಡಿ ರೂ. 13,000 ಕೋಟಿ ಇತ್ತು, ಈಗದು ರೂ. 29,000 ಗೂ ಹೆಚ್ಚಾಗಿದೆ. ಅಸಲು ಸೇರಿದರೆ ಸುಮಾರು ರೂ. 45,000 ಕೋಟಿ ಪ್ರತೀ ವರ್ಷ ಪಾವತಿ ಮಾಡಬೇಕಿದೆ. ಈಗಿನ ಬಜೆಟ್ ಗಾತ್ರ ರೂ. 2,65,720 ಕೋಟಿ ಇದೆ. ಬಿಜೆಪಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರೂ. 2,66,000 ಕೋಟಿ ಸಾಲ ಮಾಡಿದೆ.

ನಮ್ಮ ಐದು ವರ್ಷಗಳ ಆಡಳಿತದಲ್ಲಿ ರಾಜಸ್ವ ಉಳಿಕೆ ಬಜೆಟ್ ಇತ್ತು, ಬಿಜೆಪಿ ಬಂದಮೇಲೆ ರಾಜಸ್ವ ಕೊರತೆ ಆರಂಭವಾಗಿದೆ. ಇದು ನಮ್ಮ ಮತ್ತು ಬಿಜೆಪಿ ಸರ್ಕಾರದ ನಡುವಿನ ವ್ಯತ್ಯಾಸ. ಈಗ ರಾಜಸ್ವ ಕೊರತೆ ಇರುವುದರಿಂದ ಸಾಲ ಪಡೆದು ಅಭಿವೃದ್ಧಿ ಕಾರ್ಯಗಳಿಗೆ ಮತ್ತು ಆಸ್ತಿ ಸೃಜನೆಗೆ ಹಣ ಖರ್ಚು ಮಾಡುವಂತಾಗಿದೆ. ಮುಂಬರುವ ಸಾಲಿನಲ್ಲಿ ರೂ. 15,000 ಕೋಟಿ ರಾಜಸ್ವ ಕೊರತೆ ಆಗುತ್ತೆ ಎಂದು ಬಜೆಟ್ ನಲ್ಲಿ ಹೇಳಿದ್ದಾರೆ. ಕಳೆದ ಬಾರಿ ಬದ್ಧತಾ ಖರ್ಚು 102% ಆಗಿತ್ತು ಎಂದು ಹೇಳಿದ್ದರು, ಆದರೆ ಈ ಬಾರಿ ಅದರ ಬಗ್ಗೆ ಎಲ್ಲೂ ಮಾಹಿತಿ ನೀಡಿಯೇ ಇಲ್ಲ. ನಮ್ಮ ಸರ್ಕಾರದ ಅವಧಿಯಲ್ಲಿ ಬದ್ಧತಾ ಖರ್ಚು ಸುಮಾರು 80% ಇತ್ತು.

Also read : ಈ ಬಜೆಟ್ನಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, SC-ST ಜನರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ : ಬಿ.ಕೆ. ಹರಿಪ್ರಸಾದ್

ಈ ವರ್ಷದ ಜೂನ್ 30ರ ವರೆಗೆ ಮಾತ್ರ ನಮ್ಮ ರಾಜ್ಯಕ್ಕೆ ಜಿ.ಎಸ್.ಟಿ ಪರಿಹಾರ ಸಿಗುತ್ತದೆ. ಹಾಗಾಗಿ ಮುಂದಿನ ದಿನಗಳು ಇನ್ನಷ್ಟು ಕಷ್ಟದಾಯಕವಾಗಿರಲಿದೆ. ಇದೇ ಕಾರಣಕ್ಕೆ ಜಿ.ಎಸ್.ಟಿ ಪರಿಹಾರವನ್ನು (GST composition) ಇನ್ನೂ ಐದು ವರ್ಷ ಮುಂದುವರೆಸಲು ಕೇಂದ್ರ ಸರ್ಕಾರವನ್ನು ಒತ್ತಾಯ ಮಾಡಿ ಎಂದು ನಾನು ಸಲಹೆ ನೀಡಿದ್ದೆ. ಆದರೆ ಈ ಬಾರಿಯ ಕೇಂದ್ರದ ಬಜೆಟ್ ನಲ್ಲಿ ಇದನ್ನು ಮುಂದುವರೆಸುವ ಬಗ್ಗೆ ಯಾವ ಪ್ರಸ್ತಾಪವೂ ಇಲ್ಲ, ರಾಜ್ಯ ಸರ್ಕಾರ ಕೂಡ ಮೂರು ವರ್ಷ ಮುಂದುವರೆಸಲು ಮನವಿ ಮಾಡಿದ್ದೀವಿ ಎಂದಷ್ಟೇ ಹೇಳಿದೆ. ಒಂದು ವೇಳೆ ಕೇಂದ್ರ ಸರ್ಕಾರ ಜಿ.ಎಸ್.ಟಿ ಪರಿಹಾರ ಕೊಡದೆ ಹೋದರೆ ರಾಜಸ್ವ ಸಂಗ್ರಹ ಕಡಿಮೆಯಾಗಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗುತ್ತವೆ. ವರ್ಷಕ್ಕೆ ಸುಮಾರು ರೂ. 10 ರಿಂದ 12 ಸಾವಿರ ಕೋಟಿ ನಷ್ಟವಾಗುತ್ತದೆ. ಜಿ.ಎಸ್.ಟಿ ಸಭೆಯಲ್ಲಿ ಎಲ್ಲಾ ಮುಖ್ಯಮಂತ್ರಿಗಳು ಸೇರಿ ಗಲಾಟೆ ಮಾಡಿ ಇನ್ನೂ ಐದು ವರ್ಷ ಮುಂದುವರೆಸುವಂತೆ ಒತ್ತಾಯ ಮಾಡಬೇಕಿತ್ತು. ಇವರು ಅದನ್ನು ಮಾಡಿಲ್ಲ. ಇದೇ ಕಾರಣಕ್ಕೆ ನಾನು ಈ ಸರ್ಕಾರವನ್ನು ಹೇಡಿಗಳ ಸರ್ಕಾರ ಎಂದು ಕರೆದದ್ದು.

ಬಿಜೆಪಿಯವರು ನೀರಾವರಿ ಬಗ್ಗೆ ಬಹಳ ಮಾತಾಡುತ್ತಿದ್ದರು. 2018 ರ ನಮ್ಮ ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಇಟ್ಟಿದ್ದ ಹಣ ರೂ. 18,112 ಕೋಟಿ. ಈ ಸರ್ಕಾರ ಬಜೆಟ್ ನಲ್ಲಿ ಇಟ್ಟಿರುವ ಹಣ ರೂ. 20,601 ಕೋಟಿ. ನಮ್ಮ ಬಜೆಟ್ ಗಾತ್ರ ರೂ. 2.02 ಲಕ್ಷ ಕೋಟಿ, ಈಗಿನ ಬಜೆಟ್ ಗಾತ್ರ ರೂ. 2.65 ಲಕ್ಷ ಕೋಟಿ. ಬಿಜೆಪಿಯವರು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀರಾವರಿಗೆ ಐದು ವರ್ಷಗಳಲ್ಲಿ ಒಂದೂವರೆ ಲಕ್ಷ ಕೋಟಿ ಖರ್ಚು ಮಾಡ್ತೀವಿ ಎಂದಿದ್ದರು. ಅಂದರೆ ಈ ವರ್ಷ ಕನಿಷ್ಠ ರೂ. 30,000 ಕೋಟಿಯಾದರೂ ಇಡಬೇಕಲ್ವ? ಈ ವರೆಗೆ ಬಿಜೆಪಿ ಸರ್ಕಾರ ಖರ್ಚು ಮಾಡಿರುವುದು ಸುಮಾರು ರೂ. 40,000 ಕೋಟಿ. ಈ ವರ್ಷದ 20,000 ಕೋಟಿ ರೂಪಾಯಿ ಸೇರಿಸಿದ್ರೂ ರೂ. 60,000 ಕೋಟಿ ಆಗುತ್ತೆ. ಸಾಕ? ಹಿಂದೆ ನಮ್ಮ ಸರ್ಕಾರ ಇದ್ದಾಗ ಗೋವಿಂದ ಕಾರಜೋಳ ನೀರಾವರಿ ಬಗ್ಗೆ ಭಾಷಣ ಮಾಡುವಾಗ ನೀರಾವರಿ ಕನಿಷ್ಠ ರೂ. 25,000 ಕೋಟಿ ಇಡಿ ಎನ್ನುತ್ತಿದ್ದರು. ಈಗ ಏನಂತಾರೆ? ನನ್ನ ಪ್ರಕಾರ ಕನಿಷ್ಠ ರೂ. 10,000 ಕೋಟಿಗೂ ಅಧಿಕ ಮೊತ್ತದ ಬಾಕಿ ಬಿಲ್ ಗಳಿವೆ. ಅದನ್ನೂ ಕೊಟ್ಟರೆ ಹೊಸ ನೀರಾವರಿ ಯೋಜನೆಗಳಿಗೆ ಉಳಿಯೋದು ಕೇವಲ ರೂ. 10,000 ಕೋಟಿ. ಇದರಲ್ಲಿ ಸಣ್ಣ ನೀರಾವರಿ ಯೋಜನೆಗಳು ಬೇರೆ ಸೇರಿದೆ. ಅದಕ್ಕೆ ಕನಿಷ್ಠ ರೂ. 3,000 ಕೋಟಿ ಬೇಕು. ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಬಡಾಯಿ ಬಜೆಟ್ ಇದು.

ಮೇಕೆದಾಟು ಯೋಜನೆ ಜಾರಿಯಾಗಬೇಕು ಎಂಬುದು ನಮ್ಮ ಒತ್ತಾಯ. ಆದರೆ ಪರಿಸರ ಅನುಮತಿ ಪತ್ರ ಪಡೆಯದೆ ಯೋಜನೆ ಹೇಗೆ ಆರಂಭ ಮಾಡುತ್ತಾರೆ? ಬಜೆಟ್ ನಲ್ಲಿ ಹಣ ಇಟ್ಟ ಕೂಡಲೆ ಯೋಜನೆ ಆರಂಭ ಆಗುತ್ತಾ? ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವ ಸಮಸ್ಯೆ ಇಲ್ಲ ಆದರೂ ಅದನ್ನೂ ಆರಂಭ ಮಾಡಿಲ್ಲ. ಬಹಳಷ್ಟು ಇಲಾಖೆಗಳಿಗೆ ನಾವು 2018 ರ ಬಜೆಟ್ ನಲ್ಲಿ ಕೊಟ್ಟಷ್ಟು ಹಣವನ್ನೂ ಕೊಟ್ಟಿಲ್ಲ.

2018- 19 ರಲ್ಲಿ ನಾವು ಆಹಾರ ಇಲಾಖೆಗೆ ರೂ. 3,882 ಕೋಟಿ ಇಟ್ಟಿದೆವು. ಈ ಸರ್ಕಾರ 2,998 ಕೋಟಿ ಇಟ್ಟಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನಾವು 5,371 ಕೋಟಿ ರೂಪಾಯಿ ನೀಡಿದ್ದೆವು, ಈಗಿನ ಬಜೆಟ್ ನಲ್ಲಿ ರೂ. 4,713 ಕೋಟಿ ಇಟ್ಟಿದ್ದಾರೆ. ರೂ.658 ಕೋಟಿ ಕಡಿಮೆಯಾಗಿದೆ. ವಸತಿ ಯೋಜನೆಗೆ ನಮ್ಮ ಸರ್ಕಾರ ರೂ. 3,942 ಕೋಟಿ ನೀಡಿತ್ತು, ಈಗಿನ ಬಜೆಟ್ ನಲ್ಲಿ ರೂ. 3,594 ಕೋಟಿ ಇಟ್ಟಿದ್ದಾರೆ. ಅಂದರೆ ರೂ. 348 ಕೋಟಿ ಕಡಿಮೆ ಆಗಿದೆ. ನಗರಾಭಿವೃದ್ಧಿ ಯೋಜನೆಗಳಿಗೆ ನಾವು ರೂ. 17,196 ಕೋಟಿ ಇಟ್ಟಿದ್ದೆವು, ಈ ಸರ್ಕಾರ ರೂ. 16,076 ಕೋಟಿ ಇಟ್ಟಿದೆ. ಅಂದರೆ ರೂ. 1,120 ಕೋಟಿ ಅನುದಾನ ಕಡಿಮೆ ಆಗಿದೆ. ಯಡಿಯೂರಪ್ಪ ಅವರು ಬೆಂಗಳೂರಿನ ಚಿತ್ರಣವನ್ನೇ ಬದಲಾಯಿಸ್ತೀನಿ ಅಂತ ಹೇಳಿದ್ದೇ ಹೇಳಿದ್ದು. ಇದೇನಾ ಅವರ ಅಭಿವೃದ್ಧಿ? ಎಂದು ಪ್ರಶ್ನಿಸಿದ್ದಾರೆ.

ಪರಿಶಿಷ್ಟ ಜಾತಿ ಮತ್ತು ವರ್ಗದವರಿಗೆ ಅವರ ಜನಸಂಖ್ಯೆಗೆ ಅನುಗುಣವಾಗಿ ಎಸ್.ಸಿ.ಪಿ / ಟಿ.ಎಸ್.ಪಿ ಯೋಜನೆಗೆ ನಾವು ಹಣ ಮೀಸಲಿಡುತ್ತಿದ್ದೆವು. ನಮ್ಮ ಸರ್ಕಾರದ ಕಡೇ ಬಜೆಟ್ ನಲ್ಲಿ ಈ ವರ್ಗದವರಿಗೆ ರೂ. 29,000 ಕೋಟಿಗೂ ಅಧಿಕ ಅನುದಾನ ನೀಡಿದ್ದೆ. ಈ ಸರ್ಕಾರ ನಾಲ್ಕು ವರ್ಷದ ನಂತರ ಕೂಡ ರೂ. 28,000 ಕೋಟಿಯಲ್ಲೇ ಇದೆ. ಬಜೆಟ್ ಗಾತ್ರ ಹೆಚ್ಚಾದಂತೆ ಈ ಯೋಜನೆಗೆ ನೀಡುವ ಹಣ ಕೂಡ ಹೆಚ್ಚಾಗಬೇಕು. ನನ್ನ ಪ್ರಕಾರ ಈ ಸಲದ ಬಜೆಟ್‌ನಲ್ಲಿ ಕನಿಷ್ಟ ರೂ. 40,000 ಕೋಟಿ ಆದರೂ ಆಗಬೇಕಿತ್ತು. ಹಿಂದುಳಿದ ಜಾತಿಗಳ ಕಲ್ಯಾಣದ ಅನುದಾನ ಕಡಿಮೆಯಾಗಿದೆ, ಇನ್ನು ಅಲ್ಪಸಂಖ್ಯಾತರ ಹೆಸರೇ ಹೇಳಲ್ಲ ಇವರು. ನಮ್ಮ ಸರ್ಕಾರದ 2018 ರ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಕಲ್ಯಾಣಕ್ಕಾಗಿ ರೂ. 3,150 ಕೋಟಿ ಅನುದಾನ ಇಟ್ಟಿದ್ದೆ.

ದೀನದಯಾಳು ಉಪಾಧ್ಯಾಯ ಅವರ ಹೆಸರಿನಲ್ಲಿ ಸಾವಿರ ವಿದ್ಯಾರ್ಥಿಗಳ ಹಾಸ್ಟೆಲ್ ಮಾಡುವುದಾಗಿ ಹೇಳಿದ್ದಾರೆ, ಆದರೆ ಇದನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಿಲ್ಲ. 200 – 300 ಮಕ್ಕಳ ಹಾಸ್ಟೆಲ್ ಮಾಡಿದರೆ ಅದೇ ದೊಡ್ಡದು. ನಾಲ್ಕು ಕಡೆ ಸಾವಿರ ವಿದ್ಯಾರ್ಥಿಗಳ ಹಾಸ್ಟೆಲ್ ಮಾಡ್ತೀವಿ ಎಂದಿದ್ದಾರೆ, ಇದು ಅವಾಸ್ತವಿಕ ಮತ್ತು ಅಸಾಧ್ಯವಾದ ಕೆಲಸ.

Also Read : ಮೇಕೆದಾಟು ಯೋಜನೆಗೆ ಬಜೆಟ್ನಲ್ಲಿ 1 ಸಾವಿರ ಕೋಟಿ ಅನುದಾನ ಸ್ವಾಗತಾರ್ಹ : ಡಿ.ಕೆ. ಶಿವಕುಮಾರ್

ಹಿಂದುಳಿದ ಜಾತಿಗಳೆಲ್ಲವೂ ಸೇರಿ ಅವುಗಳ ಅಭಿವೃದ್ಧಿ ನಿಗಮಗಳಿಗೆ ರೂ. 400 ಕೋಟಿ ನೀಡಿದ್ದರು. ಈ ವರ್ಷ ಅದೂ ಇಲ್ಲ. ಗೋಹತ್ಯೆ ನಿಷೇಧ ನಂತರ ಗೋಶಾಲೆ ಮಾಡುವುದಾಗಿ ಹೇಳಿದ್ದರು. ರಾಜ್ಯದಲ್ಲಿ ಈಗ 31 ಗೋಶಾಲೆಗಳಿವೆ, ಈ ಬಜೆಟ್‌ನಲ್ಲಿ ಅದನ್ನು 100 ಮಾಡುತ್ತೇವೆ ಎಂದಿದ್ದಾರೆ. ನನ್ನ ಪ್ರಕಾರ ಈಗ ರಾಜ್ಯದಲ್ಲಿರುವ ಬರಡು ದನಗಳನ್ನು ಗೋಶಾಲೆಗೆ ಕಳುಹಿಸಿದರೆ ಕನಿಷ್ಠ 500 ಗೋಶಾಲೆಗಳ ಅಗತ್ಯ ಇದೆ. ಇದನ್ನು ಮಾಡದಿದ್ದರೆ ಉತ್ತರ ಪ್ರದೇಶದಲ್ಲಿ ಆದಂತೆ ಬೀದಿ ಬೀದಿಯಲ್ಲಿ ದನಗಳು ಇರುತ್ತವೆ. ಪುಣ್ಯಕೋಟಿ ಹೆಸರಿನಲ್ಲಿ ಗೋವುಗಳನ್ನು ದತ್ತು ಪಡೆಯುವವರಿಗೆ ಸರ್ಕಾರ ರೂ. 11,000 ಕೊಡುವುದಾಗಿ ಹೇಳಿದೆ, ಈ ಹಣವನ್ನು ರೈತರಿಗೇ ಕೊಟ್ಟಿದ್ದರೆ ಅವರೇ ಸಾಕ್ತಿದ್ದರು. ಇದರಿಂದ ಜಾನುವಾರುಗಳ ಮಾಲಿಕರಾದ ರೈತರಿಗೆ ಅನ್ಯಾಯ ಆಗುತ್ತದೆ.

ಇದು ಅತ್ಯಂತ ನಿರಾಶಾದಾಯಕ, ಅಡ್ಡ ಕಸುಬಿ ಬಜೆಟ್. ಈ ಬಜೆಟ್ ಗೆ ಅಭಿವೃದ್ಧಿಯ ಮುನ್ನೋಟವೇ ಇಲ್ಲ. ಬಿಜೆಪಿಯವರ ಮಾತುಗಳಿಗೇ ಈ ಬಜೆಟ್ ವಿರುದ್ಧವಾಗಿದೆ.

ಮೇಕೆದಾಟು ಯೋಜನೆಗೆ ಪರಿಸರ ಅನುಮತಿ ಪತ್ರ ಪಡೆದು ರೂ. 5,000 ಕೋಟಿ ಬಜೆಟ್‌ನಲ್ಲಿ ಮೀಸಲಿಟ್ಟರೆ ಸರ್ಕಾರಕ್ಕೆ ಬದ್ಧತೆ ಇದೆ ಒಪ್ಪಿಕೊಳ್ಳುವುದಾಗಿ ಪಾದಯಾತ್ರೆ ವೇಳೆ ನಾವು ಹೇಳಿದ್ವಿ. ಈ ಸರ್ಕಾರ ಬರೀ ರೂ. 1,000 ಕೋಟಿ ಅನುದಾನ ತೆಗೆದಿಟ್ಟಿದೆ. ಪರಿಸರ ಅನುಮತಿ ಪತ್ರ ಪಡೆದಿಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಕೇಸಿದೆ ಹಾಗಾಗಿ ಯೋಜನೆ ಜಾರಿ ಮಾಡೋಕಾಗ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಚಿವ ಕಾರಜೋಳ ಹೇಳ್ತಿದ್ದಾರೆ, ಆದರೆ ನನಗಿರುವ ಮಾಹಿತಿ ಪ್ರಕಾರ ಸುಪ್ರೀಂ ಕೋರ್ಟ್ ನಿಂದ ಯೋಜನೆ ಜಾರಿ ಮಾಡಬಾರದು ಎಂದು ಯಾವ ತಡೆಯಾಜ್ಞೆಯೂ ಇಲ್ಲ.

ಕೊರೊನಾದಿಂದ ಜನ ತತ್ತರಿಸಿ ಹೋಗಿರುವ ಕಾರಣ ತೆರಿಗೆ ಹೆಚ್ಚು ಮಾಡಲು ಆಗಲ್ಲ ಎಂದು ಬಜೆಟ್‌ನಲ್ಲಿ ಹೇಳಿದ್ದಾರೆ. ನಮ್ಮ ಸರ್ಕಾರ ಕೂಡ ಅಬಕಾರಿ ತೆರಿಗೆ ಹೆಚ್ಚು ಮಾಡಿದ್ದು ಬಿಟ್ಟರೆ ೫ ವರ್ಷಗಳಲ್ಲಿ ಬೇರೆ ತೆರಿಗೆ ಯಾವುದನ್ನೂ ಹೆಚ್ಚಳ ಮಾಡಿಲ್ಲ. ಈ ವರ್ಷ ಸರ್ಕಾರ ಆರ್ಥಿಕವಾಗಿ ಕೊಂಚ ಚೇತರಿಕೆ ಆಗಿದೆ. ಜಿಡಿಪಿ ಬೆಳವಣಿಗೆಯನ್ನು ಕೊರೊನಾ ಇದ್ದ ವರ್ಷಕ್ಕೆ ಹೋಲಿಕೆ ಮಾಡಬಾರದು, ಕೊರೊನಾ ಪೂರ್ವದಲ್ಲಿ ಹೇಗಿತ್ತು ಅದಕ್ಕೆ ಹೋಲಿಕೆ ಮಾಡಬೇಕು. ಕೊರೊನಾ ಇದ್ದಾಗ ಆರ್ಥಿಕವಾಗಿ ಕುಸಿತ ಆಗಿರುತ್ತೆ, ಅದಕ್ಕೆ ಹೋಲಿಕೆ ಮಾಡಿ ಹೇಳಿದರೆ ಏನು ಉಪಯೋಗ?

ಯಡಿಯೂರಪ್ಪ ಅವರ ಬಗ್ಗೆ ನಾನು ಏನೂ ಮಾತನಾಡಲ್ಲ, ಅವರು ಹಿರಿಯರಿದ್ದಾರೆ, ವಯಸ್ಸಾಗಿದೆ. ಬಿಜೆಪಿ ಪಕ್ಷದಲ್ಲಿ ಇದ್ದಾರೆ ಎನ್ನುವ ಕಾರಣಕ್ಕೆ ಅವರು ಸಮರ್ಥನೆ ಮಾಡಿಕೊಳ್ತಾರೆ ಅಷ್ಟೆ.

Tags: Basavaraj BommaiBJPbudgetCongress PartyCovid 19GST compositionsiddaramaiahಕರೋನಾಕೋವಿಡ್-19ಬಜೆಟ್ಬಸವರಾಜ ಬೊಮ್ಮಾಯಿಬಿಜೆಪಿಸಿದ್ದರಾಮಯ್ಯ
Previous Post

ಈ ಬಜೆಟ್ನಲ್ಲಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, SC-ST ಜನರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ : ಬಿ.ಕೆ. ಹರಿಪ್ರಸಾದ್

Next Post

2023ರ ಚುನಾವಣೆ | ಕಾಂಗ್ರೆಸ್ ಪಕ್ಷ ಪ್ರಚಾರದ ಹೊಣೆ ಹೊತ್ತ ಪ್ರಶಾಂತ್ ಕಿಶೋರ್ ಮಾಜಿ ಸಹವರ್ತಿ !

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
2023ರ ಚುನಾವಣೆ | ಕಾಂಗ್ರೆಸ್ ಪಕ್ಷ ಪ್ರಚಾರದ ಹೊಣೆ ಹೊತ್ತ ಪ್ರಶಾಂತ್ ಕಿಶೋರ್ ಮಾಜಿ ಸಹವರ್ತಿ !

2023ರ ಚುನಾವಣೆ | ಕಾಂಗ್ರೆಸ್ ಪಕ್ಷ ಪ್ರಚಾರದ ಹೊಣೆ ಹೊತ್ತ ಪ್ರಶಾಂತ್ ಕಿಶೋರ್ ಮಾಜಿ ಸಹವರ್ತಿ !

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada