• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಇದೇ ನನ್ನ ಕೊನೆ ಚುನಾವಣೆ, ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿರುವೆ : ಸಿಎಂ ಸಿದ್ದರಾಮಯ್ಯ

Any Mind by Any Mind
June 10, 2023
in ರಾಜಕೀಯ
0
ಇದೇ ನನ್ನ ಕೊನೆ ಚುನಾವಣೆ, ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿರುವೆ : ಸಿಎಂ ಸಿದ್ದರಾಮಯ್ಯ
Share on WhatsAppShare on FacebookShare on Telegram

ಮೈಸೂರು : ಭ್ರಷ್ಟಾಚಾರ, ದುರಾಡಳಿತ, ಅಭಿವೃದ್ಧಿಹೀನ ಹಾಗೂ ಸಮಾಜ ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಈ ಬಾರಿ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣ ವಿಧಾನಸಭಾ ಕ್ಷೇತ್ರದ ಸುತ್ತೂರಿನಲ್ಲಿ ನಡೆದ ಬೃಹತ್​ ಕೃತಜ್ಞತಾ ಸಮರ್ಪಣಾ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ADVERTISEMENT

ಇದು ನನ್ನ ಕೊನೆ ಚುನಾವಣೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ. 2013 ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದು ಸಮಾಜದ ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣ ಕಾರ್ಯಕ್ರಮ ರೂಪಿಸಿದ್ದೆ. ಈ ಬಾರಿ ಇನ್ನಷ್ಟು ಪರಿಣಾಮಕಾರಿಯಾದ ಕಲ್ಯಾಣ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ನಾಡಿಗೆ ನೀಡಲಿದೆ. ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ನಾನು ಮಾದರಿಯನ್ನಾಗಿ ಇಟ್ಟುಕೊಂಡು ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದೆ ಎಂದರು.

ಮುಖ್ಯಮಂತ್ರಿ ಕುರ್ಚಿ ಸುಖದ ಸುಪ್ಪತ್ತಿಗೆ ಅಲ್ಲ. ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ. ಪ್ರಧಾನಿ ನರೇಂದ್ರ ಮೋದಿಯವರು , ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ. ರಾಜ್ಯ ದಿವಾಳಿ ಆಗ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ.

ಕಾಂಗ್ರೆಸ್ ಘೋಷಿಸಿದ ಬಡವರ-ಮಧ್ಯಮ ವರ್ಗದವರ ಪರವಾದ ಯೋಜನೆ ಘೋಷಿಸಿದಾಗ ಪ್ರಧಾನ ಮಂತ್ರಿ ಮೋದಿಯವರು ಜನರಿಗೆ ಅನುಕೂಲ ಮಾಡುವ ನಮ್ಮ ಯೋಜನೆಗೆ ತಮ್ಮ ಸಹಕಾರ ನೀಡಬೇಕಿತ್ತು. ಆದರೆ ಮೋದಿ ಅವರಿಗೆ ಬಡವರ-ಮಧ್ಯಮ ವರ್ಗದವರ ಪ್ರಗತಿ, ಅಭಿವೃದ್ಧಿ ಬೇಕಾಗಿಲ್ಲ . ಅದಕ್ಕೇ ಬಿಜೆಪಿಯವರು ಜನರಲ್ಲಿ ತಮ್ಮ ಸಂಪ್ರದಾಯದಂತೆ ಸುಳ್ಳುಗಳನ್ನು ಎರಚಾಡುತ್ತಾ ಗೊಂದಲ ಸೃಷ್ಟಿಸುತ್ತಿದ್ದಾರೆ. ಜನರಿಗೆ ಅನುಕೂಲ ಆಗುವುದು ಅವರಿಗೆ ಬೇಕಾಗಿಲ್ಲ ಎಂದು ಟೀಕಿಸಿದರು.

ಬಿಜೆಪಿ ತನ್ನ ಜಾಯಮಾನದಲ್ಲೇ ಮಾಡದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು

ವೇದಿಕೆಯಲ್ಲಿ ಮಾಜಿ ಶಾಸಕ ಯತೀಂದ್ರ, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್, ಮಾಜಿ ಮಂತ್ರಿಗಳಾದ ಪುಟ್ಟರಂಗಶೆಟ್ಟಿ, ಶಾಸಕರಾದ ಕೃಷ್ಣಮೂರ್ತಿ, ಕೆಪಿಸಿಸಿ ವಕ್ತಾರ ಲಕ್ಷ್ಮಣ್, ವಿಧಾನ ಪರಿಷತ್ ಸದಸ್ಯರಾದ ತಿಮ್ಮಯ್ಯ, ಮಾಜಿ ಲೋಕಸಭಾ ಸದಸ್ಯರಾದ ಶಿವಣ್ಣ, ಶಾಸಕರುಗಳಾದ ಗುಂಡ್ಲುಪೇಟೆ ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು, ರವಿ ಶಂಕರ್, ಹರೀಶ್ ಗೌಡ, ಪರಿಷತ್ ಸದಸ್ಯ ನಾಗರಾಜ್ ಯಾದವ್ ಸೇರಿದಂತೆ ಸಾಕಷ್ಟು ಮುಖಂಡರು ಉಪಸ್ಥಿತರಿದ್ದರು.

Tags: BJPCM SiddaramaiahMysoreSatturVarunaYathindra Siddaramaiahಕಾಂಗ್ರೆಸ್​ಬಿಜೆಪಿಮೈಸೂರುಯತೀಂದ್ರ ಸಿದ್ದರಾಮಯ್ಯವರುಣಸಿಎಂ ಸಿದ್ದರಾಮಯ್ಯಸುತ್ತೂರು
Previous Post

ಮಹಿಳೆಯರಿಗೆ ಉಚಿತ ಬಸ್​.. ಸರ್ಕಾರಕ್ಕೆ ನಷ್ಟವೇ ಆಗಲ್ಲ.. ಹೇಗೆ..?

Next Post

ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟ ಪ್ರಕರಣ: ಬೆಳ್ತಂಗಡಿ ಬಿಜೆಪಿ ಶಾಸಕ ಪೂಂಜಾಗೆ ರಿಲೀಫ್​

Related Posts

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?
Top Story

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

by ಪ್ರತಿಧ್ವನಿ
April 9, 2026
0

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ರಾಮನಾಥಪುರ ಗ್ರಾಮದಲ್ಲಿ 4 ಎಕರೆ 12 ಗುಂಟೆ ಜಮೀನಿನ ವಿಚಾರದಲ್ಲಿ ಅಕ್ರಮವಾಗಿ ಖಾತೆ ಹಾಗೂ ಪಹಣಿ ತಯಾರಿಸಿ...

Read moreDetails
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
ಕರಾವಳಿಯಲ್ಲಿ ರಕ್ತದೋಕುಳಿ.. ಹಿಂದೂ ಕಾರ್ಯಕರ್ತನ ಹತ್ಯೆ

ಸಿದ್ದರಾಮಯ್ಯ  ಸಿಎಂ ಮುಂದುವರಿಕೆ ಬಗ್ಗೆ  ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದೇನು ?

April 7, 2026
Next Post
ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟ ಪ್ರಕರಣ: ಬೆಳ್ತಂಗಡಿ ಬಿಜೆಪಿ ಶಾಸಕ ಪೂಂಜಾಗೆ ರಿಲೀಫ್​

ಸಿಎಂ ಸಿದ್ದರಾಮಯ್ಯ ವಿರುದ್ಧ ನಾಲಗೆ ಹರಿಬಿಟ್ಟ ಪ್ರಕರಣ: ಬೆಳ್ತಂಗಡಿ ಬಿಜೆಪಿ ಶಾಸಕ ಪೂಂಜಾಗೆ ರಿಲೀಫ್​

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada