• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇದಾವುದು ಹೊಸ ಧರ್ಮ ಸನಾತನ: ನಟ ಕಿಶೋರ್‌ ಕುಮಾರ್‌ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in Top Story, ಇದೀಗ, ದೇಶ, ರಾಜಕೀಯ, ಸಿನಿಮಾ
0
‌ ಕಿಶೋರ್‌ ಕುಮಾರ್

‌ ಕಿಶೋರ್‌ ಕುಮಾರ್

Share on WhatsAppShare on FacebookShare on Telegram

ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ತಲೆ ಕಡಿಯಬೇಕು ಎಂದಿರುವ ಅಯೋಧ್ಯೆ ಸ್ವಾಮಿ ವಿರುದ್ಧ ನಟ ಕಿಶೋರ್ ಕುಮಾರ್ ಕಿಡಿಕಾರಿದ್ದು ಯಾವುದು ಈ ಹೊಸ ಧರ್ಮ ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗೋಣ. ವಿಶ್ವಮಾನವರಾಗೋಣ ಎಂದು ಕಿಶೋರ್ ಹೇಳಿದ್ದಾರೆ.

ಈ ಬಗ್ಗೆ ಬುಧವಾರ (ಸೆಪ್ಟೆಂಬರ್ 6) ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು, ಇಷ್ಟೂ ದಿನ ಹಿಂದೂ ಹಿಂದೂ ಎಂದು ಅರಚುತಿದ್ದವರೆಲ್ಲ ಯಾಕೋ ಆ ಪದ ಬಿಟ್ಟೇ ಬಿಟ್ಟರೆನಿಸುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಹಾಗಾದರೆ ನಾವು ಹಿಂದೂಗಳಲ್ಲವೇ? ಇದಾವುದು ಹೊಸ ಧರ್ಮ? ಸನಾತನ? ಎಂದು ಪ್ರಶ್ನಿಸಿದ್ದಾರೆ.

“ಕೆಲಸ ಮಾಡಲು ಯೋಗ್ಯತೆಯಿಲ್ಲದೆ ಈ ಪದಗಳ ರಾಜಕೀಯ ಲಾಭ ಪಡೆಯಲು ತುದಿಗಾಲಲ್ಲಿ ನಿಂತಿರುವವರನ್ನು ಇದರ ಸಂಪೂರ್ಣ ನಿಖರ ಅರ್ಥ ಹೇಳಲು ಕೇಳಿಬಿಡಿ ಸಾಕು. ವಾಟ್ಸ್ ಆ್ಯಪ್ ವಿಶ್ವವಿದ್ಯಾಲಯದಿಂದ ಹೊರಬಂದು, ಹಿಂದೂ ಪದದ ನಿಜ ಅರ್ಥ, ಮೂಲ, ಅದರ ಹಿಂದಿನ ದ್ವೇಷದ ರಾಜಕೀಯ ಪ್ರಚಲಿತವಾಗುತ್ತಿದ್ದಂತೆ ಅದನ್ನು ಬಿಟ್ಟು ಸನಾತನ ಪದ ಹಿಡಿದ ದ್ವೇಷದ ವರ್ತಕರು ಅದನ್ನೂ ರಾಜಕೀಯ ಲಾಭಕ್ಕಾಗಿ ಬಳಸಿದ್ದೇ ಈ ಅನಾವಶ್ಯಕ ಚರ್ಚೆಗೆ ಕಾರಣ” ಎಂದು ಹೇಳಿದ್ದಾರೆ.

‘ರಾಜಕೀಯದ ದೃಷ್ಟಿಯಿಂದ ಉದಯನಿಧಿಯವರ ಭಾಷಾ ಪ್ರಯೋಗದ ತೀಕ್ಷ್ಮತೆ ಸ್ವಲ್ಪ ಕಡಿಮೆಯಾಗಬಹುದಿತ್ತು ಎನಿಸಿದರೂ, ಅವರು ಖಂಡಿಸಿದ್ದು ಇವರ ದ್ವೇಷದ ಜಾತಿವಾದದ, ಅಸ್ಪಷ್ಟತೆಯ, ಅಸಮಾನತೆಯ ವೈದಿಕ ರಾಜಕೀಯವು ಕಿಡ್ನಾಪ್ ಮಾಡಿದ ಸನಾತನವನ್ನು, ಆದಿ ಅಂತ್ಯವಿಲ್ಲದ ಸನಾತನ ಪದವನ್ನಲ್ಲ ಎಂಬುದು ಸ್ಪಷ್ಟ ಎಂದು ಹೇಳಿದ್ದಾರೆ.

“ಸನಾತನ ಧರ್ಮದ ಹೇಳಿಕೆಯನ್ನು ಸನಾತನಿಗಳ ಮಾರಣಹೋಮಕ್ಕೆ ಹೋಲಿಸಿದ ಇವರ ದ್ವೇಷದ ವಕ್ತಾರನಿಗೆ ಇವರ ಪಕ್ಷದ ಪ್ರಧಾನಿ ಊರಲ್ಲೆಲ್ಲ ಕಾಂಗ್ರೆಸ್ ಮುಕ್ತವೆಂದು ಕೂಗಾಡುತ್ತಾ ತಿರುಗಿದಾಗ ಕಾಂಗ್ರೆಸಿಗರ ಮಾರಣಹೋಮಕ್ಕೆ ಕರೆ ನೀಡಿದ್ದರೇ ಎಂದು ಕೇಳಬೇಕಲ್ಲ” ಎಂದು ಪ್ರಶ್ನಿಸಿದ್ದಾರೆ.

ಧರ್ಮವೆನ್ನುವುದು ಅಧರ್ಮದ ವಿರುದ್ಧ ಪದವಾದರೆ, ಅಧರ್ಮವೆನ್ನುವುದು ಕೆಟ್ಟ ಕೆಲಸವೆಂದಾದರೆ, ಒಳ್ಳೆಯ ಕೆಲಸ ಮಾಡುವುದಷ್ಟೇ ಧರ್ಮವೇ ಹೊರತು ಹಲವು ನಂಬಿಕೆಯ ಮೂಟೆಗಳಲ್ಲ. ಈ ದಾರಿತಪ್ಪಿಸುವ ಧರ್ಮಾಂಧ ರಾಜಕೀಯದಲ್ಲಿ ನಮ್ಮ ಜ್ವಲಂತ ಸಮಸ್ಯೆಗಳೂ, ಜಾತಿವಾದದ, ರಾಜಕೀಯ, ಆರ್ಥಿಕ, ಸಾಮಾಜಿಕ ಕ್ರೌರ್ಯದ, ಅಸಮಾನತೆಯ ಸಮಸ್ಯೆಗಳೆಲ್ಲ ಕೊಚ್ಚಿ ಹೋಗುವ ಮುನ್ನ ಎಚ್ಚರಗೊಳ್ಳುವ, ಮನುಷ್ಯರನ್ನು ಮನುಷ್ಯರಾಗಿ, ಕಾಣುವ ಮನುಷ್ಯ ಧರ್ಮದವರಾಗುವ ವಿಶ್ವಮಾನವರಾಗುವ ಎಂದು ಹೇಳಿದ್ದಾರೆ.

Tags: Actor Kishore KumarKishore KumarSanatana Dhramaಕಿಶೋರ್‌ ಕುಮಾರ್‌ನಟ ಕಿಶೋರ್‌ ಕುಮಾರ್‌ಸನಾತನ ಧರ್ಮ
Previous Post

ʼಜಿ 20 ಇಂಡಿಯಾ’ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಲು ಪ್ರಧಾನಿ ಮೋದಿ ಮನವಿ

Next Post

ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನ ರೈತರು ಅನ್ನೋಕಾಗುತ್ತಾ..? ಡಿ.ಕೆ ಶಿವಕುಮಾರ್ ವಿವಾದಿತ ಹೇಳಿಕೆ..!

Related Posts

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ
ರಾಜಕೀಯ

ಸಿಎಂ ರಾಜೀನಾಮೆಗೂ ಮುನ್ನ ರಾಜ್ಯಪಾಲರ ದಿಢೀರ್ ಮುಂಬೈ ಪ್ರವಾಸ! ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ

by ಪ್ರತಿಧ್ವನಿ
May 28, 2026
0

ರಾಜ್ಯ ರಾಜಕಾರಣದಲ್ಲಿ ಭಾರೀ ಹೈಡ್ರಾಮಾ ಮತ್ತು ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ನಡುವೆಯೇ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ದಿಢೀರ್ ಮುಂಬೈ ಪ್ರವಾಸ ಹೊಸ ಸಂಚಲನಕ್ಕೆ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
Next Post
ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನ  ರೈತರು ಅನ್ನೋಕಾಗುತ್ತಾ..? ಡಿ.ಕೆ ಶಿವಕುಮಾರ್ ವಿವಾದಿತ ಹೇಳಿಕೆ..!

ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನ ರೈತರು ಅನ್ನೋಕಾಗುತ್ತಾ..? ಡಿ.ಕೆ ಶಿವಕುಮಾರ್ ವಿವಾದಿತ ಹೇಳಿಕೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada