ಮಂಡ್ಯ : ವಿ.ಸೋಮಣ್ಣಗೆ ಮನಸಿಲ್ಲದೇ ಇದ್ದರೂ ಹೈಕಮಾಂಡ್ ಎರಡೆರಡು ಹೊಸ ಕ್ಷೇತ್ರಗಳನ್ನು ನೀಡಿತಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಹರಿದಾಡುತ್ತಲೇ ಇದೆ. ಈ ವಿಚಾರವಾಗಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಲು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ನಿರಕಾರಿಸಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯಲ್ಲಿ ಕೇಳಲಾದ ಪ್ರಶ್ನೆಗೆ ಬೇರೆ ಪ್ರಶ್ನೆ ಇದ್ದರೆ ಕೇಳಣ್ಣ ಎಂದು ಹೇಳುವ ಮೂಲಕ ಉತ್ತರ ನೀಡಲು ನಿರಾಕರಿಸಿದ್ದಾರೆ.

ಈ ಬಾರಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯರನ್ನು ಕೈ ಬಿಟ್ಟಿರುವ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಅವರು, ಪಕ್ಷದ ಹಿರಿಯರು ಎಲ್ಲಾ ರೀತಿಯಲ್ಲಿ ಚಿಂತನೆ ಮಾಡಿ ಈ ನಿರ್ಧಾರ ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರೋದ್ರಲ್ಲಿ ಯಾವುದೇ ಸಂದೇಹವಿಲ್ಲ. ಎಲ್ಲಾ ಅಸಮಾಧಾನಿತರ ಜೊತೆ ಪಕ್ಷದ ಹಿರಿಯರು ಮಾತನಾಡಿ ಸಮಸ್ಯೆ ಬಗೆಹರಿಸಲಿದ್ದಾರೆ ಎಂದು ವಿಜಯೇಂದ್ರ ಹೇಳಿದ್ದಾರೆ .






