ಮಂಡ್ಯ: ಅಂತರರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತ ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇಂದು ವಿಧಿವಶರಾಗಿದ್ದಾರೆ. 89 ವರ್ಷದ ಗಡ್ಡಪ್ಪ ಅವರ ನಿಜವಾದ ಹೆಸರು ಚನ್ನೇಗೌಡ.

ಉಸಿರಾಟ ಹಾಗೂ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ ಅವರು ಕೆಲ ಸಮಯದ ಹಿಂದೆ ಬಿದ್ದು ಹಾಸಿಗೆ ಹಿಡಿದಿದ್ದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಪ್ತರು ತಿಳಿಸಿದ್ದಾರೆ.
ಚನ್ನೇಗೌಡ ಅವರು ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದವರಾಗಿದ್ದು, ಅವರ ಅಂತಿಮ ವಿಧಿವಿಧಾನಗಳು ನೊದೆ ಕೊಪ್ಪಲು ಗ್ರಾಮದಲ್ಲಿಯೇ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇನ್ನು ಗಡ್ಡಪ್ಪ ತಿಥಿ, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿದಂತೆ ಒಟ್ಟು 8 ಸಿನಿಮಾಗಳಲ್ಲಿ ನಟಿಸಿದ್ದರು.













