• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು:ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
October 12, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಮಡಿಕೇರಿ:”ಅನವಶ್ಯಕ ವಿಚಾರ ಇಟ್ಟುಕೊಂಡು ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ಮಾಡುತ್ತಿರುವವರೇ ದುಷ್ಟಶಕ್ತಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.ಮಡಿಕೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು.

ADVERTISEMENT

ಶುಕ್ರವಾರ ಪ್ರತಿಕೆಗಳಿಗೆ ನೀಡಿರುವ ಸರ್ಕಾರದ ಜಾಹೀರಾತಿನಲ್ಲಿ ದುಷ್ಟಶಕ್ತಿಗಳು ಎಂದು ಹೇಳಿದ್ದು ಆ ದುಷ್ಟಶಕ್ತಿಗಳು ಯಾರು ಎಂದು ಕೇಳಿದಾಗ, ಈ ರೀತಿ ಉತ್ತರಿಸಿದರು. “ದುಃಖವನ್ನು ನಿವಾರಿಸುವ ದುರ್ಗಾ ದೇವಿ, ದುಷ್ಟರನ್ನು ದೂರಮಾಡಿ ಎಲ್ಲರಿಗೂ ಒಳ್ಳೆಯದನ್ನು ಮಾಡಿ ಹರಸಲಿ. ನಮ್ಮ ರಾಜ್ಯ ಶಾಂತಿಯ ತೋಟವಾಗಿ ಪರಿವರ್ತನೆ ಆಗಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿ ಅವರು ಕಾಂಗ್ರೆಸ್ ಪಕ್ಷವೇ ದುಷ್ಟಶಕ್ತಿಗೆ ಪ್ರಚೋದನೆ ನೀಡುತ್ತಿದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ವಿರೋಧ ಪಕ್ಷದವರಿಗೆ ಉತ್ತರ ನೀಡಲು ಬಯಸುವುದಿಲ್ಲ. ಸಕಾರಾತ್ಮಕ ವಿಚಾರದ ಬಗ್ಗೆ ಮಾತ್ರ ಮಾತನಾಡುತ್ತೇನೆ” ಎಂದು ತಿಳಿಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧದ ಪ್ರಕರಣ ಹಿಂಪಡೆದಿರುವ ಬಗ್ಗೆ ಕೇಳಿದಾಗ, “ಬಿಜೆಪಿ ನಾಯಕರ ಮೇಲಿರುವ ಪ್ರಕರಣಗಳನ್ನು ನಾವು ಹಿಂದಕ್ಕೆ ಪಡೆದಿದ್ದೇವೆ. ಈ ಬಗ್ಗೆ ಗೃಹಸಚಿವರು ಹೆಚ್ಚಿನ ಮಾಹಿತಿ ನೀಡುತ್ತಾರೆ” ಎಂದರು.

ಬಿಜೆಪಿ ನಿಲುವೇನು?: ಜಾತಿ ಗಣತಿ ವಿಚಾರ ಇಟ್ಟುಕೊಂಡು ಕಾಂಗ್ರೆಸ್ ಬ್ರಿಟೀಷರಂತೆ ಒಡೆದು ಆಳುವ ನೀತಿ ಅನುಸರಿಸುತ್ತಿದೆಯೇ ಎಂದು ಕೇಳಿದಾಗ, “ಜಾತಿ ಗಣತಿ ವಿಚಾರದಲ್ಲಿ ತಮ್ಮ ನಿಲುವೇನು ಎಂದು ಬಿಜೆಪಿ ತಿಳಿಸಲಿ. ಆನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

ಕಾಂಗ್ರೆಸ್ ನವರು ಸರ್ಕಾರವನ್ನು ಮೋಸದಿಂದ ಸ್ಥಿರಗೊಳಿಸಲು ಹೊರಟಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮುಂದೆ ಚರ್ಚೆ ಮಾಡೋಣ, ದುರ್ಗಾ ಮಾತೇ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ” ಎಂದು ತಿಳಿಸಿದರು.

ಮೈಸೂರು ದಸರಾದಂತೆ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಲಿ:

ನಮ್ಮ ಕೊಡಗಿನ ಸಂಸ್ಕೃತಿಯ ಸಂಕೇತ ಮಡಿಕೇರಿ ದಸರಾಕ್ಕೆ ಚಾಲನೆ ನೀಡಲು ಇಂದು ಮಡಿಕೇರಿಗೆ ಭೇಟಿ ನೀಡಿದ್ದೇನೆ. ಈ ವಿಶೇಷ ಸಂದರ್ಭ ಹಾಗೂ ನಮ್ಮ ಸಂಸ್ಕೃತಿಯ ಸಂಕೇತದ ಆಚರಣೆಗೆ ಪ್ರೋತ್ಸಾಹ ನೀಡಬೇಕು ಎಂದು ಬಂದಿದ್ದೇನೆ.ಜಿಲ್ಲಾ ನಾಯಕರು ಹಾಗೂ ಕಾರ್ಯಕರ್ತರು ನನಗೆ ಸ್ವಾಗತ ಕೋರಿದ್ದು, ಮೈಸೂರು ದಸರಾ ಮಾದರಿಯಲ್ಲೇ ಮಡಿಕೇರಿ ದಸರಾ ಕೂಡ ಖ್ಯಾತಿ ಪಡೆಯಬೇಕು. ಇದಕ್ಕಾಗಿ ಈ ಭಾಗದ ಜನರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ.

ಮೈಸೂರು ದಸರಾ ಹಾಗೂ ಮಡಿಕೇರಿಗೆ ಮೂರುವರೆ ಲಕ್ಷ ವಾಹನಗಳು ಬಂದಿವೆ ಎಂಬ ಅಂಕಿಅಂಶಗಳು ನಮಗೆ ಲಭ್ಯವಾಗಿವೆ.ಬರಗಾಲ ಹೋಗಿ ಉತ್ತಮ ಮಳೆಯಾಗುತ್ತಿದೆ.ಈ ಬಾರಿ ಕಾಫಿಗೆ ಉತ್ತಮ ಬೆಲೆ ಬಂದಿದೆ.ಕಾವೇರಿ ತುಂಬಿ ಹರಿಯುತ್ತಿದ್ದು, ನಾನು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಸೇರಿ ಆ ತಾಯಿಗೆ ಬಾಗಿನ ಅರ್ಪಿಸಿದ್ದೇವೆ’ ಎಂದು ತಿಳಿಸಿದರು.

Tags: BJPCongress PartyDCM DK ShivakumarEvil spiritsI will only talk about positive issues..Prahlad Joshi
Previous Post

ತಮಿಳುನಾಡಿನಲ್ಲಿ ಆಗಸದಲ್ಲೇ ಹಾರಾಡಿದ ವಿಮಾನ..! 141 ಜೀವ ಸದ್ಯ ಸೇಫ್‌

Next Post

ಶಬರಿ ಮಲೆಯಲ್ಲಿ ಆನ್‌ಲೈನ್‌ ಬುಕಿಂಗ್‌ ಇಲ್ಲದೆ ಎಲ್ಲರಿಗೂ ಪ್ರವೇಶ ನೀಡಿದ ದೇವಾಲಯ ಮಂಡಳಿ

Related Posts

ಶ್ರೀಕೃಷ್ಣ ಮುಸ್ಲಿಂ, ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದರು ಎಂದ ಮೌಲಾನಾ!
Top Story

ಶ್ರೀಕೃಷ್ಣ ಮುಸ್ಲಿಂ, ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದರು ಎಂದ ಮೌಲಾನಾ!

by ಪ್ರತಿಧ್ವನಿ
September 22, 2026
0

ಉತ್ತರ ಪ್ರದೇಶದ ಇಟಾವಾ ಮೂಲದ ಮೌಲಾನಾ ಜರ್ಜೀಸ್ ಅನ್ಸಾರಿ ಅವರು ಶ್ರೀಕೃಷ್ಣ ಪರಮಾತ್ಮ ಮುಸ್ಲಿಂ ಆಗಿದ್ದರು ಹಾಗೂ ದಿನಕ್ಕೆ ಐದು ಬಾರಿ ನಮಾಜ್ ಮಾಡುತ್ತಿದ್ದರು ಎಂದು ಹೇಳಿರುವ...

Read moreDetails
ವಿಧಾನ ಪರಿಷತ್‌ನಲ್ಲಿ ಗುಡುಗಿದ ಕಾರ್ಮಿಕ ಸಚಿವ;ಸಂತೋಷ್ ಲಾಡ್ ಅಬ್ಬರಕ್ಕೆ ಬಿಜೆಪಿ ನಾಯಕರು ಗಪ್ ಚುಪ್

ವಿಧಾನ ಪರಿಷತ್‌ನಲ್ಲಿ ಗುಡುಗಿದ ಕಾರ್ಮಿಕ ಸಚಿವ;ಸಂತೋಷ್ ಲಾಡ್ ಅಬ್ಬರಕ್ಕೆ ಬಿಜೆಪಿ ನಾಯಕರು ಗಪ್ ಚುಪ್

September 22, 2026
ಪಲ್ಲವಿ ಲಕ್ಷ್ಮಿಕಾಂತ್‌ ಸಾವಿಗೆ ಏನು‌ ಕಾರಣ? ಕೊನೆಯ ಕ್ಷಣಗಳ ಬಗ್ಗೆ ಮಲ್ಲಮ್ಮ ಹೇಳಿದ್ದೇನು?

ಪಲ್ಲವಿ ಲಕ್ಷ್ಮಿಕಾಂತ್‌ ಸಾವಿಗೆ ಏನು‌ ಕಾರಣ? ಕೊನೆಯ ಕ್ಷಣಗಳ ಬಗ್ಗೆ ಮಲ್ಲಮ್ಮ ಹೇಳಿದ್ದೇನು?

September 22, 2026
ತಾಯಿ ಸೆಂಟಿಮೆಂಟ್ ನಿಂದ ರಾಜಕೀಯ? ಬಿಜೆಪಿಗೆ ರಾಹುಲ್ ಗಾಂಧಿ ಮೇಲೆ ಇಷ್ಟು ದೊಡ್ಡ ಭಯವೇ?

ತಾಯಿ ಸೆಂಟಿಮೆಂಟ್ ನಿಂದ ರಾಜಕೀಯ? ಬಿಜೆಪಿಗೆ ರಾಹುಲ್ ಗಾಂಧಿ ಮೇಲೆ ಇಷ್ಟು ದೊಡ್ಡ ಭಯವೇ?

September 22, 2026
ಬರಪೀಡಿತ ಜಿಲ್ಲೆ ಘೋಷಿಸಲು ಕೇಂದ್ರದ ಮಾನದಂಡಗಳೇ ಆಧಾರ : ದಿನೇಶ್ ಗೂಳಿಗೌಡ ಸ್ಪಷ್ಟನೆ

ಬರಪೀಡಿತ ಜಿಲ್ಲೆ ಘೋಷಿಸಲು ಕೇಂದ್ರದ ಮಾನದಂಡಗಳೇ ಆಧಾರ : ದಿನೇಶ್ ಗೂಳಿಗೌಡ ಸ್ಪಷ್ಟನೆ

September 22, 2026
Next Post

ಶಬರಿ ಮಲೆಯಲ್ಲಿ ಆನ್‌ಲೈನ್‌ ಬುಕಿಂಗ್‌ ಇಲ್ಲದೆ ಎಲ್ಲರಿಗೂ ಪ್ರವೇಶ ನೀಡಿದ ದೇವಾಲಯ ಮಂಡಳಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada