ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿ ಇರುವ ತನಕ ಸಾಹಿತಿಗಳ ಅಭಿವ್ಯಕ್ತ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆ ರಕ್ಷಣೆ ಮಾಡುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಯ ನೀಡಿದರು.

ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಹಿತಿಗಳ ಬಗ್ಗೆ ಅಪಾರ ಗೌರವ ಇರುವುದಾಗಿ ತಿಳಿಸಿದರು. ಅಲ್ಲದೆ ಸಾಹಿತಿಗಳು ಸಮಾಜವನ್ನು ತಿದ್ದುವಂಥವರು ಎಂದು ಶ್ಲಾಷಿಸಿದರು.

ಅಧಿಕಾರದಲ್ಲಿದ್ದಾಗ ನೀಡಿದ್ದ ಭರವಸೆಗಳನ್ನು ಈಡೇರಿಸದಿದ್ದವರು ಈಗ ಟೀಕೆಗಳನ್ನು ಮಾಡುತ್ತಿದ್ದಾರೆ: 15 ಲಕ್ಷ ರೂ.ಗಳನ್ನು ಪ್ರತಿ ಮನೆಗೆ ಕೊಡುತ್ತೇನೆ ಎಂದವರು 9 ವರ್ಷಗಳಾದರೂ ಈಡೇರಿಸಿಲ್ಲ. ಆದಾಯ ದುಪ್ಪಟ್ಟು ಮಾಡುತ್ತೇವೆ, ನಾ ಖಾವೂಂಗಾ, ನಾ ಖಾನೇದೂಂಗ ಎಂದವರು ಯಾರು? ಅಚ್ಛೇ ದಿನ್ ತಂದುಕೊಟ್ಟಿದ್ದಾರೆಯೇ ಎಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.