• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

D.Boss: ದರ್ಶನ್ ಮೇಲೆ ಗೌರವ ಇರೋರು ಏನನ್ನೂ ರಿಯಾಕ್ಟ್‌ ಮಾಡಬೇಡಿ: ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ ಮಾಡಿದ ಡಿ.ಕಂಪನಿ.

ಪ್ರತಿಧ್ವನಿ by ಪ್ರತಿಧ್ವನಿ
July 28, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ದರ್ಶನ್ ಫ್ಯಾನ್ಸ್ ವಿರುದ್ಧ ಸಿಟ್ಟಾಗಿರುವ ನಟಿ ರಮ್ಯಾ ( Ramya) ದೂರು ಕೊಡಲು ಮುಂದಾಗಿದ್ದಾರೆ. ರೇಣುಕಾಸ್ವಾಮಿ (Renukaswamy) ಕುಟುಂಬದ ಪರ ರಮ್ಯಾ ನಿಂತಿರುವುದು ಫ್ಯಾನ್ಸ್ ಕೋಪಕ್ಕೆ ಕಾರಣವಾಗಿದೆ. ವಿವಾದ ಈಗ ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. ಇದರ ನಡುವೆ ದರ್ಶನ್‌ ಅಭಿಮಾನಿಗಳಿಗಾಗಿಯೇ ತೆರೆಯಲಾಗಿರುವ ಅಫಿಶಿಯಲ್‌ ಫ್ಯಾನ್ಸ್‌ ಪೇಜ್‌ ʻಡಿ ಕಂಪನಿʼ (Official Fan Page DCompany) ನಲ್ಲಿ ರಿಯಾಕ್ಟ್‌ ಮಾಡದಂತೆ ಮನವಿ ಮಾಡಲಾಗಿದೆ.

ADVERTISEMENT

ಡಿ-ಸೆಲಬ್ರೆಟಿಸ್‌ಗಳಿಗಾಗಿಯೇ ತೆರೆಯಲಾದ ಅಫಿಶಿಯಲ್ ಫ್ಯಾನ್ಸ್‌ ಪೇಜ್‌ನಲ್ಲಿ, ಡಿ ಬಾಸ್‌ ಮೇಲೆ ಗೌರವವಿರುವ ಯಾವೊಬ್ಬ ಅಭಿಮಾನಿ ಕೂಡ ವಿವಾದಕ್ಕೆ ಕಿವಿಗೊಡಬೇಡಿ. ಯಾವುದಕ್ಕೂ ರಿಯಾಕ್ಟ್‌, ಮೆಸೇಜ್‌ ಮಾಡಬೇಡಿ. ಪ್ರಚಾರಕ್ಕಾಗಲಿ, ಹುನ್ನಾರ ಮಾಡಲಿ, ಯಾರು ತಲೆ ಕೆಡಸಿಕೊಳ್ಳಬೇಡಿ. ದರ್ಶನ್ ಫ್ಯಾನ್ಸ್ ಯಾರೆಂದು ಅವರು ಮಾಡಿರುವ ಸಮಾಜಮುಖಿ ಕಾರ್ಯಗಳು ಸಾಕ್ಷಿ. ಅವಮಾನಗಳು ಇನ್ನಷ್ಟು ಕೆಲಸ ಮಾಡಲು ಮೆಟ್ಟಿಲು ಆಗಲಿ ಎಂದು ಡಿ ಕಂಪನಿ ಅಭಿಮಾನಿಗಳಿಗೆ ಮನವಿ ಮಾಡಿದೆ. ಅಲ್ಲದೇ ʻಕಾಲಯ ತಸ್ಮೈ ನಮಃʼ ಎಂದು ಬರೆದು ಡೆವಿಲ್‌ ಸಿನಿಮಾದ ಪೋಸ್ಟರ್‌ ಹಂಚಿಕೊಂಡಿದೆ.

ವಿವಾದಕ್ಕೆ ಕಾರಣವೇನು?
ರೇಣುಕಾಸ್ವಾಮಿ ಕುಟುಂಬದ ಪರವಾಗಿ ರಮ್ಯಾ ನಿಂತಿರುವುದು ದರ್ಶನ್ ಫ್ಯಾನ್ಸ್ ಕೋಪಕ್ಕೆ ಕಾರಣವಾಗಿದೆ. ನಿರಂತರವಾಗಿ ರಮ್ಯಾಗೆ ಸೋಷಿಯಲ್ ಮೀಡಿಯಾ ಮೂಲಕ ಅಶ್ಲೀಲ ಮಸೇಜ್ ಕಳುಹಿಸುತ್ತಿದ್ದಾರೆ. ದರ್ಶನ್ ಫ್ಯಾನ್ಸ್ ಹೆಸರಿನಲ್ಲಿ ಕಳುಹಿಸುತ್ತಿರುವ ಅಶ್ಲೀಲ ಮಸೇಜ್‌ಗಳನ್ನು ತಮ್ಮದೇ ಸೋಷಿಯಲ್ ಮೀಡಿಯಾ ಅಕೌಂಟ್‌ನಲ್ಲಿ ಪೋಸ್ಟ್ ಕೂಡ ಮಾಡಿದ್ದಾರೆ ರಮ್ಯಾ.

ರೇಣುಕಾಸ್ವಾಮಿ ಕೇಸ್‌ನಲ್ಲಿ ದರ್ಶನ್ ಹೆಸರು ಕೇಳಿ ಬಂದಾಗ, ಅವತ್ತು ಕೂಡ ರಮ್ಯಾ ಮಾತಾಡಿದ್ದರು. ದರ್ಶನ್‌ರಿಂದ ತಪ್ಪಾಗಿದ್ದರೆ ಕಠಿಣ ಶಿಕ್ಷೆಯೇ ಆಗಬೇಕು ಅಂತ ಪ್ರತಿಕ್ರಿಯೆ ನೀಡಿದ್ದರು. ಜಾಮೀನು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದಾಗಲೂ ದರ್ಶನ್ ವಿರುದ್ಧವೇ ಪೋಸ್ಟ್ ಮಾಡಿದ್ದರು. ಹಾಗಾಗಿ ದರ್ಶನ್ ಫ್ಯಾನ್ಸ್ ರಮ್ಯಾ ವಿರುದ್ಧ ತಿರುಗಿ ಬಿದ್ದಿದ್ದರು. ಈಗೀಗ ತೀರಾ ವೈಯಕ್ತಿಕವಾಗಿ ರಮ್ಯಾಗೆ ಟೀಕೆ ಮಾಡುತ್ತಿದ್ದಾರೆ. ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದಾರೆ. ಆ ಎಲ್ಲಾ ಸ್ಕ್ರೀನ್‌ ಶಾಟ್‌ ಅನ್ನು ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕೆಂಡಾಮಂಡಲರಾಗಿದ್ದಾರೆ. ಕಾನೂನು ಹೋರಾಟ ಮಾಡೋದಾಗಿ ತಿಳಿಸಿದ್ದಾರೆ. ಎಲ್ಲಾ ಮೆಸೇಜ್‌ಗಳೊಂದಿಗೆ ದೂರು ಕೊಡೋದಾಗಿ ತಿಳಿಸಿದ್ದಾರೆ. ಸುದೀಪ್, ಯಶ್ ಅಲ್ಲ, ಅವರ ಹೆಂಡತಿ ಮಕ್ಕಳನ್ನೂ ಬಿಟ್ಟಿಲ್ಲ. ಚಿಕ್ಕ ಚಿಕ್ಕ ಮಕ್ಕಳ ಬಗ್ಗೆ ಕೆಟ್ಟ ಪದ ಬಳಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಶ್ಲೀಲ ಕಮೆಂಟ್ ಅಕೌಂಟ್‌ಗಳನ್ನು ಬಹಿರಂಗ ಪಡಿಸಿದ ರಮ್ಯಾ, ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ರೇಣುಕಾಸ್ವಾಮಿ ಹಾಗೂ ಡಿಬಾಸ್ ಫ್ಯಾನ್ಸ್ ಸಂದೇಶಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಇವರೆಲ್ಲಾ ಸ್ತ್ರೀದ್ವೇಷಿ ಮನೋಭಾವದವರು. ಇಂಥವರಿಂದಲೇ ಹೆಣ್ಣು ಮಕ್ಕಳು ದೌರ್ಜನ್ಯ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ’ ಅಂತ ಡಿ ಬಾಸ್ ಫ್ಯಾನ್ಸ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ ರಮ್ಯಾ.ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಏಕೆ ಬೇಕು ಎಂಬುದಕ್ಕೆ ನಿಮ್ಮ ಕಾಮೆಂಟ್‌ಗಳು ಸಾಕ್ಷಿ. ನಿಮ್ಮ ಮಸೇಜ್‌ಗಳಿಂದ ನಿಮ್ಮ ಯೋಗ್ಯತೆ ಇಷ್ಟರಲ್ಲೇ ಗೊತ್ತಾಗುತ್ತೆ’ ಎಂದು ತೀಕ್ಷ್ಣವಾಗಿ ತಿವಿದಿದ್ದಾರೆ.

Tags: Actor Darshanactor darshan movieDarshandarshan birthdayDarshan Casedarshan case latestdarshan dancedarshan deDarshan fansdarshan gaja songsdarshan hit songsdarshan in thailanddarshan jaildarshan moviedarshan movie songsdarshan moviesdarshan new songdarshan newsdarshan songsdarshan video songsdarshan wife dancedarshana dancedatta darshan songsDbossDevil Kannada CinemaKannada cinema actorlive darshanlive mahakal darshanmahakal darshanmahakal live darshanramyaRenukaswamytemple darshanujjain live darshan
Previous Post

ಮಾತಾಡೋನು ಮೂರ್ಖ..ಮೌನವಾಗಿರುವವನು ಬುದ್ಧಿವಂತ..! – ರಮ್ಯಾಗೆ ವಿಜಯಲಕ್ಷ್ಮಿ ಕೌಂಟರ್..? 

Next Post

RCB Stampede: ಪೊಲೀಸ್ ಆಯುಕ್ತ ದಯಾನಂದ ಅಮಾನತು ಹಿಂಪಡೆದ ಸರ್ಕಾರ..!!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

RCB Stampede: ಪೊಲೀಸ್ ಆಯುಕ್ತ ದಯಾನಂದ ಅಮಾನತು ಹಿಂಪಡೆದ ಸರ್ಕಾರ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada