• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸರ್ಕಾರ ಬೀಳಿಸಿ ಹೊಸ ಸರ್ಕಾರ ರಚನೆಗೆ ಸಾವಿರ ಕೋಟಿ.. ದೂರು..!?

ಕೃಷ್ಣ ಮಣಿ by ಕೃಷ್ಣ ಮಣಿ
September 30, 2024
in Top Story, ಕರ್ನಾಟಕ, ರಾಜಕೀಯ, ವಿಶೇಷ, ಶೋಧ
0
ಸರ್ಕಾರ ಬೀಳಿಸಿ ಹೊಸ ಸರ್ಕಾರ ರಚನೆಗೆ ಸಾವಿರ ಕೋಟಿ.. ದೂರು..!?
Share on WhatsAppShare on FacebookShare on Telegram

ADVERTISEMENT

ಡಿಸೆಂಬರ್​ನಲ್ಲಿ ರಾಜ್ಯ ರಾಜಕಾರಣದಲ್ಲಿ ಕ್ರಾಂತಿ ನಡೆಯುವ ಸಾಧ್ಯತೆಯಿದ್ದು, ಕಾಂಗ್ರೆಸ್​ ಸರ್ಕಾರ ಉರುಳಿಸಿ ಬಿಜೆಪಿ ಸರ್ಕಾರ ಸ್ಥಾಪನೆಗೆ ಸಾವಿರ ಕೋಟಿ ರೆಡಿ ಇಟ್ಕೊಂಡು ಕಾಯ್ತಿದ್ದಾರೆ ಎನ್ನುವ ಯತ್ನಾಳ್​ ಹೇಳಿಕೆ ಭಾರೀ ಸಂಚಲನ ಸೃಷ್ಟಿಸಿದೆ. ರಾಜ್ಯದಲ್ಲಿ ಭ್ರಷ್ಟಾಚಾರದಿಂದ ಸಂಪಾದಿಸಿದ ಹಣ ಹೊಂದಿಸಿಕೊಂಡು ಕಾಯುತ್ತಿದ್ದಾರೆ. ಆದರೆ ಕಾಂಗ್ರೆಸ್​ ಸರ್ಕಾರವನ್ನು ಉರುಳಿಸಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವುದನ್ನು ಹೈಕಮಾಂಡ್​ ಕೂಡ ಒಪ್ಪುವುದಿಲ್ಲ. ನಮ್ಮ ಒಪ್ಪಿಗೆಯೂ ಇಲ್ಲ ಎಂದು ದಾವಣಗೆರೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.

ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ ಶಿವಕುಮಾರ್​ ಮಾತನಾಡಿ, ಕಾಂಗ್ರೆಸ್ ಸರ್ಕಾರವನ್ನು ಬಿಳಿಸಲು ಬಿಜೆಪಿ ಯತ್ನ ನಡೆಯುತ್ತಿದೆ. 1000 ಕೋಟಿ ರೂಪಾಯಿ ರೆಡಿ ಮಾಡ್ಕೊಂಡಿದ್ದಾರೆ ಎಂದು ಶಾಸಕ ಯತ್ನಾಳ್ ಹೇಳಿದ್ದಾರೆ. ಇದರ ಮಾಹಿತಿ ನಮಗೂ ಇದೆ. ಈ ಬಗ್ಗೆ ಇವತ್ತು ಕಾಂಗ್ರೆಸ್ ಲೀಗಲ್ ಟೀಮ್ ಮೀಟಿಂಗ್ ಕರೆದಿದ್ದೇನೆ ಎಂದಿದ್ದಾರೆ ಡಿಸಿಎಂ ಡಿ. ಕೆ ಶಿವಕುಮಾರ್. 1200 ಕೋಟಿ ರೂಪಾಯಿ ರೆಡಿಯಾಗಿದೆ ಎಂಬ ಮಾಹಿತಿ ಇದೆ ಅಂತ ಹೇಳಿಕೆ ಸ್ವತಃ ಡಿಸಿಎಂ ಹೇಳಿಕೆ ಕೊಟ್ಟಿದ್ದಾರೆ. ಆ ಮೂಲಕ ಯತ್ನಾಳ್​ ಹೇಳಿದ್ದ ಮಾಹಿತಿ ಸರಿಯಿದೆ ಎನ್ನುವಂತೆ ಡಿಸಿಎಂ ಡಿ.ಕೆ ಶಿವಕುಮಾರ್​​ ಮುದ್ರೆ ಒತ್ತಿದ್ದಾರೆ.

ಬಿಜೆಪಿ ಕಡೆಯಿಂದ ಇಷ್ಟು ಪ್ರಮಾಣದ ಹಣ ರೆಡಿಯಾಗಿದೆ ಎಂಬ ಮಾಹಿತಿ ಇದೆ ಎನ್ನುವ ಮಾಹಿತಿಯನ್ನು ಹೈಕಮಾಂಡ್ ನಾಯಕರಿಗೆ ತಿಳಿಸಿದ್ದೇನೆ. ಇದು ಇಡಿ ತನಿಖೆಯ ವ್ಯಾಪ್ತಿಗೆ ಬರುವ ವಿಚಾರ. ಇಡಿ ತನಿಖೆ ಮಾಡುವ ಸಂಬಂಧ ಹಾಗೂ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡುವ ಸಂಬಂಧ ಇಂದು ಲೀಗಲ್​ ಟೀಂ ಜೊತೆಗೆ ಚರ್ಚೆ ಮಾಡಲಿದ್ದೇನೆ. ಲೀಗಲ್ ಟೀಮ್ ಜೊತೆ ಚರ್ಚೆ ಬಳಿಕ ಮುಂದೆ ಏನು ಮಾಡಬೇಕು ಅನ್ನೋ ಬಗ್ಗೆ ನಿರ್ಧಾರ ಮಾಡ್ತೇವೆ ಎಂದಿದ್ದಾರೆ.

ಆದರೆ, ಸಾವಿರ ಕೋಟಿ ಎಂದಿದ್ದ ಯತ್ನಾಳ್​ ಹೇಳಿಕೆಯನ್ನೇ ಮಾರ್ಪಾಡು ಮಾಡಿ 1200 ಕೋಟಿ ರೆಡಿಯಾಗಿದೆ ಎನ್ನುವ ಮಾಹಿತಿಯನ್ನು ಡಿಸಿಎಂ ಡಿ.ಕೆ ಶಿವಕುಮಾರ್​ ನೀಡಿದ್ದಾರೆ. ಇದು ಕೇವಲ ರಾಜಕೀಯ ಆರೋಪ ಆಗಿದ್ದರೆ ಸರಿ. ಆದರೆ ಈ ಬಗ್ಗೆ ಜಾರಿ ನಿರ್ದೇಶನಾಲಯಕ್ಕೆ ದೂರು ನೀಡುವುದಾಗಿಯೂ ಉಪಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಲೀಗಲ್​ ಟೀಂ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದಿದ್ದಾರೆ. ಈಗ ಕಾನೂನು ಕುಣಿಕೆಯಲ್ಲಿ ಡಿ.ಕೆ ಶಿವಕುಮಾರ್​ ಕೂಡ ಸಿಕ್ಕಿ ಬೀಳುವ ಸಾಧ್ಯತೆಯಿದೆ. ಯತ್ನಾಳ್​ ಕೇವಲ ಊಹಾಪೋಹದ ಮಾತನಾಡಿದ್ದರೆ, ಅದನ್ನು ಅಂಗೀಕರಿಸಿದ ಡಿಸಿಎಂ ಕೂಡ ಸಾಕ್ಷ್ಯ ಕೊಡಬೇಕಾಗುತ್ತದೆ.

Tags: Basanagouda patil YatnalBasangouda Patil Yatnalbasangouda patil yatnal speechBJPCongress PartyDCM DK ShivakumarDK Shivakumardk shivakumar latest newsdk shivakumar newsdk shivakumar speechdk shivakumar today newsdk shivakumar vs yatnaldk shivakumar yatnalYatnalyatnal dk shivakumaryatnal latest newsyatnal newsyatnal on dk shivakumaryatnal speechyatnal today newsyatnal todays newsyatnal vs dk shivakumarಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಾಕ್ಟರ್​​ ಸಾವು.. ಕೊಲೆ ಆರೋಪ.. ಅಪಾರ್ಟ್​​ಮೆಂಟ್​​ನಲ್ಲಿ ಕೊಂದಿದ್ಯಾರು..?

Next Post

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada