ಜಮ್ಮು ಮತ್ತು ಕಾಶ್ಮೀರ ಕುಲ್ಗಾಮ್ ಜಿಲ್ಲೆಯಲ್ಲಿ ಉಗ್ರರು ಮತ್ತು ಸೇನಾ ಸಿಬ್ಬಂದಿ ನಡುವೆ ಶುಕ್ರವಾರ (ಆಗಸ್ಟ್ 4) ಗುಂಡಿನ ಚಕಮಕಿ ನಡೆದಿದೆ. ಇದರಲ್ಲಿ ಮೂವರು ಸೇನಾ ಸಿಬ್ಬಂದಿ ಹತರಾಗಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಾಲನ್ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಧ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದರು. ಕಾರ್ಯಾಚರಣೆಯ ವೇಳೆ ಉಗ್ರರು ಮತ್ತು ಭದ್ರತಾ ಪಡೆ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ.
ಭದ್ರತಾ ಪಡೆಯ ಮೂವರು ಸಿಬ್ಬಂದಿ ಗಾಯಗೊಂಡಿದ್ದು, ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಲೆ ಏರಿಕೆ | ಟೊಮೆಟೊ ದರ ಕೆಜಿಗೆ 300 ರೂ. ಗೆ ಏರಿಕೆ ಸಾಧ್ಯತೆ
ಕುಲ್ಗಾಮ್‌ನ ಹಾಲನ್ ಪ್ರದೇಶಗಳಲ್ಲಿ ಉಗ್ರರು ಅಡಗಿರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಮತ್ತು ಪೊಲೀಸರು ಶುಕ್ರವಾರ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಶ್ರೀನಗರ ಮೂಲದ ಚಿನಾ ಕಾರ್ಪ್ಸ್ ಆಫ್ ಅರ್ಮಿ ಟ್ವೀಟ್ ಮೂಲಕ ಹೇಳಿದೆ.
ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದ್ದು ಶೋಧ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.